E-PAPER
23 Nov 2026, 06:52:21 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ-ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಬುಧವಾರ ನಡೆದ ಸಭೆಯ ಮುಖ್ಯಾಂಶಗಳು:

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಸಿಎಂ ತಿಳಿಸಿದರು.

ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಈ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದೆ.

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸ್ತಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.

ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ 30 ಗುಂಟೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಲಾಗುವುದು.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಚಿವರಾದ ಎಚ್ ಕೆ ಪಾಟೀಲ್
, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!