E-PAPER
24 Nov 2026, 03:42:34 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಗುಪ್ತಚರ ಇಲಾಖೆ ದುರ್ಬಳಕೆ ಮಾಡುತ್ತಿರುವ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ಅವರೇ, ಗುಪ್ತಚರ ಇಲಾಖೆಯ ದುರ್ಬಳಕೆ ಆಗುತ್ತಿದೆ ಎನ್ನುವುದು ನನ್ನ ವೈಯಕ್ತಿಕ ಆರೋಪವಲ್ಲ. ಈ ವರದಿಯನ್ನು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯೊಂದು ತನ್ನ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಪ್ರಕಟಿಸಿದೆ. ತಮಗೆ ಈ ವರದಿಯ ಬಗ್ಗೆ ಆಕ್ಷೇಪವಿದ್ದರೆ, ವರದಿ ಪ್ರಕಟಿಸಿದ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕೇ ಹೊರತು, ಆ ವರದಿಗೆ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ವಿರುದ್ಧವಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ವರದಿಯಲ್ಲಿರುವ ಗಂಭೀರ ಅಂಶಗಳಿಗೆ ನೇರವಾಗಿ ಉತ್ತರಿಸುವ ಬದಲು, ತಾವು ಕ್ಷುಲ್ಲಕ, ಅಸಂಬದ್ಧ ರಾಜಕೀಯ ವಾಗ್ದಾಳಿ ನಡೆಸಲು ಮುಂದಾಗಿದ್ದೀರಿ. ನಿಮ್ಮ ಈ ಪ್ರತಿಕ್ರಿಯೆಯೇ ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಒಂದು ವೇಳೆ ವರದಿ ಸುಳ್ಳಾಗಿದ್ದರೆ, ಅದನ್ನು ಸ್ಪಷ್ಟವಾಗಿ ನಿರಾಕರಿಸಿ ಪತ್ರಿಕೆಯಿಂದ ಸ್ಪಷ್ಟೀಕರಣ ಕೇಳಿ. ಅದನ್ನು ಬಿಟ್ಟು, ವಿಷಯಕ್ಕೆ ಸಂಬಂಧವೇ ಇಲ್ಲದಂತೆ ವಿರೋಧ ಪಕ್ಷದ ಮೇಲೆ ಹರಿಹಾಯುವುದು ಸಂಶಯವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಶಾಸಕರ ಚಟುವಟಿಕೆಗಳ ಬಗ್ಗೆ ನಿರಂತರ ಮಾಹಿತಿ ನೀಡುವಂತೆ ರಾಜ್ಯ ಗುಪ್ತಚರ ಇಲಾಖೆಗೆ ಸೂಚಿಸಲಾಗಿದೆ ಎಂದು ಆ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ಪದಗಳು ನಮ್ಮ ಸೃಷ್ಟಿಯಲ್ಲ, ಇವು ಸಾರ್ವಜನಿಕ ವಲಯದಲ್ಲಿರುವ ಮಾಧ್ಯಮ ವರದಿಯ ಭಾಗವಾಗಿದೆ.

ಇಂತಹ ಗಂಭೀರ ವಿಷಯಗಳು ಮುನ್ನೆಲೆಗೆ ಬಂದಾಗ, ವಿರೋಧ ಪಕ್ಷದ ನಾಯಕನಾಗಿ ಅದರ ಬಗ್ಗೆ ಸ್ಪಷ್ಟತೆ ಕೇಳುವುದು ನನ್ನ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಜನರ ಮುಂದೆ ಸತ್ಯಾಂಶಗಳನ್ನು ಇಡುವ ಬದಲು, ತಾವು ಯಾವುದೋ ಹಳೆಯ ಇತಿಹಾಸವನ್ನು ಕೆದಕಿ, ಸಂಬಂಧವಿಲ್ಲದ ರಾಷ್ಟ್ರೀಯ ನಾಯಕರನ್ನು ಎಳೆದು ತರುವ ಮೂಲಕ ವಿಷಯಾಂತರ ಮಾಡಲು ಯತ್ನಿಸುತ್ತಿರುವುದು ತಾವು ವರದಿಯಿಂದ ಗಲಿಬಿಲಿಗೊಂಡಿರುವುದನ್ನ ಸ್ಪಷ್ಟವಾಗಿ ತೋರಿಸುತ್ತದೆ ಎಂದು ಅಶೋಕ್ ಟೀಕಿಸಿದ್ದಾರೆ.

ನನ್ನ ಪ್ರಶ್ನೆ ಅತ್ಯಂತ ನೇರ ಮತ್ತು ಸರಳವಾಗಿದೆ. ರಾಜ್ಯ ಗುಪ್ತಚರ ಇಲಾಖೆಯನ್ನು ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಳಸಲಾಗುತ್ತಿದೆಯೇ ಅಥವಾ ಕಾಂಗ್ರೆಸ್ ಪಕ್ಷದ ಆಂತರಿಕ ಬಣ ರಾಜಕೀಯವನ್ನು ನಿಭಾಯಿಸಲು ಬಳಸಿಕೊಳ್ಳಲಾಗುತ್ತಿದೆಯೇ? ಕರ್ನಾಟಕದ ಜನತೆಗೆ ಇದಕ್ಕೆ ನೇರ ಮತ್ತು ಪ್ರಾಮಾಣಿಕ ಉತ್ತರ ಬೇಕಿದೆ.

ಕರ್ನಾಟಕವು ಇಂದು ಡ್ರಗ್ಸ್ ಜಾಲ, ಕೋಮುದಳ್ಳುರಿಗಳು, ನಿರುದ್ಯೋಗದ ವಿರುದ್ಧ ಯುವಕರ ಹೋರಾಟ, ಸಾರಿಗೆ ನೌಕರರ ಮುಷ್ಕರ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರ ಮುಷ್ಕರ ಸೇರಿದಂತೆ ಅನೇಕ ಕಾನೂನು ಸುವ್ಯವಸ್ಥೆಯ ಸವಾಲುಗಳನ್ನು ಎದುರಿಸುತ್ತಿರುವಾಗ, ಸರ್ಕಾರದ ಮುಖ್ಯಸ್ಥರಾದ ತಮ್ಮ ಆದ್ಯತೆ ಆಡಳಿತದ ಮೇಲಿರಬೇಕೇ ಹೊರತು ಆಂತರಿಕ ಕಚ್ಚಾಟ, ರಾಜಕೀಯ ಮೇಲಾಟದ ಮೇಲಲ್ಲ.

ಮಧ್ಯಮ ವರದಿಯ ಆಧಾರದ ಮೇಲೆ ಉತ್ತರದಾಯಿತ್ವವನ್ನು ಕೇಳುವುದು ಹತಾಶೆಯಲ್ಲ. ಅದು ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯ.

ನನ್ನ ಪ್ರಶ್ನೆಗಳು ತಮ್ಮನ್ನು ಮುಜುಗರಕ್ಕೀಡು ಮಾಡಿದರೆ, ಅದಕ್ಕೆ ನಾನು ಜವಾಬ್ದಾರನಲ್ಲ. ಕರ್ನಾಟಕದ ಜನತೆಗೆ ಬೇಕಿರುವುದು ಪಾರದರ್ಶಕತೆಯೇ ಹೊರತು ರಾಜಕೀಯ ನಾಟಕವಲ್ಲ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು