Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಜಮನೆತನದ ಬಗ್ಗೆ ಸಿದ್ದರಾಮಯ್ಯಗೆ ಅಸಡ್ಡೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದರು.


ಮೊನ್ನೆಯಷ್ಟೇ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿಕೊಂಡಿದ್ದಾರೆ, ಇದೀಗ ಮುಖ್ಯಮಂತ್ರಿಗಳ ಹಿಂಬಾಲಕ ಸಚಿವ  ಹೆಚ್. ಸಿ. ಮಹದೇವಪ್ಪನವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಎಂದು ಹೇಳುವ ಮೂಲಕ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ)ನಿರ್ಮಾಣದ ಹಿಂದಿನ ತ್ಯಾಗ- ಪರಶ್ರಮದ ಇತಿಹಾಸ ಹಾಗೂ ನಾಲ್ವಡಿಯವರ ಕೊಡುಗೆಯನ್ನು ಅಪಮಾನಿಸಿದ್ದಾರೆ ಎಂದು ವಿಜಯೇಂದ್ರ ಹರಿಹಾಯ್ದರು.


ಕನ್ನಂಬಾಡಿ ಕಟ್ಟೆಗೆ (ಕೃಷ್ಣರಾಜ ಸಾಗರ) ರೋಚಕ ಇತಿಹಾಸವಿದೆ, ತ್ಯಾಗ ಮೆರೆದ ಹೆಗ್ಗಳಿಕೆ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನಸು ಹಾಗೂ ಪರಿಶ್ರಮದ ಫಲವೇ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ) ನಿರ್ಮಾಣವಾಯಿತು ಎಂಬುದಕ್ಕೆ ಐತಿಹಾಸಿಕ ದಾಖಲೆಗಳಿವೆ, ತ್ಯಾಗ, ಕೊಡುಗೆಗಳ ಹೆಗ್ಗಳಿಕೆಯಿದೆ. 1908 ರಲ್ಲಿ ರೂಪಿಸಲಾದ ಯೋಜನೆಯನ್ನು ಮತ್ತಷ್ಟು ಪರಿವರ್ತಿಸಿ ಹತ್ತು ಹಲವು ಅಡ್ಡಿ ಆತಂಕ ತೊಂದರೆ ಅವಮಾನಗಳ ನಡುವೆ ಬ್ರಿಟಿಷ್ ಆಡಳಿತದಿಂದ ಅನುಮತಿ ಪಡೆದುಕೊಂಡ ಹಿನ್ನೆಲೆಯ ಪ್ರತಿ ಹೆಜ್ಜೆಗಳಿಗೂ ಪುಟ ಪುಟಗಳ ದಾಖಲೆಗಳು ಇಂದಿಗೂ ಜೀವಂತವಾಗಿವೆ. 


1911 ರಿಂದ ಅಧಿಕೃತವಾಗಿ ಆರಂಭವಾದ ಯೋಜನೆ 1932ರಲ್ಲಿ ಪೂರ್ಣಗೊಂಡಿದ್ದಕ್ಕೆ ಎಷ್ಟು ವೆಚ್ಚವಾಯಿತು, ಯೋಜನೆ ಪೂರ್ಣಗೊಳ್ಳಲು ಆರ್ಥಿಕ ಸಂಕಷ್ಟ ಎದುರಾದಾಗ ನಾಲ್ವಡಿ ಅವರ ಮಾತೆ ವಾಣಿವಿಲಾಸ ಸನ್ನಿಧಾನ (ಕೆಂಪರಾಜಮ್ಮಣ್ಣಿ)  ಹಾಗೂ ಅವರ ಪತ್ನಿ ಕೃಷ್ಣ ವಿಲಾಸ ಸನ್ನಿಧಾನ ಅವರು ಲಕ್ಷಾಂತರ ಜನರಿಗೆ ಅನ್ನ ನೀಡುವ ಯೋಜನೆ ಪೂರ್ಣಗೊಳ್ಳುವುದಕ್ಕಿಂತ ಖಜಾನೆಯಲ್ಲಿರುವ ವಜ್ರ, ವೈಢೂರ್ಯಗಳು ಹೆಚ್ಚಿನದ್ದಲ್ಲ ಎಂಬ ತ್ಯಾಗ ಮನೋಭಾವ ಪ್ರದರ್ಶಿಸಿ ತಮ್ಮ ಸ್ವಂತ ಒಡವೆಗಳನ್ನು ಮಾರಾಟ ಮಾಡಿ ಕನ್ನಂಬಾಡಿ ಕಟ್ಟೆ ಕಟ್ಟಿಸಿದ್ದಕ್ಕೆ ಐತಿಹಾಸಿಕ ತ್ಯಾಗ ಮೆರೆದ ಆನಂದ ಭಾಷ್ಪತರಿಸುವ ಕಥೆ ಮೈಸೂರು ಸಂಸ್ಥಾನದ ಪ್ರತಿ ಮನೆ,ಮನೆಯಲ್ಲೂ ಇಂದಿಗೂ ನಿತ್ಯ ನೆನಪಿನ ಸ್ಮರಣೆಯಾಗಿ ಉಳಿದಿದೆ.

ಅಣೆಕಟ್ಟೆ ನಿರ್ಮಾಣಕ್ಕಾಗಿ ಸರ್.ಎಂ ವಿಶ್ವೇಶ್ವರಯ್ಯನವರ ವಿಶೇಷ ಕಾಳಜಿ ಹಾಗೂ ಪರಿಶ್ರಮ ಸೇರಿದಂತೆ ನೂರಾರು ಮಹನೀಯರ ಪರಿಶ್ರಮದ ಬೆವರಿನ ಕಥೆಯಿದೆ. ಅಂತಹ ಚಾರಿತ್ರಿಕ ಅಣೆಕಟ್ಟೆ ನಿರ್ಮಾಣವೂ ಸೇರಿದಂತೆ ನೂರಾರು ಜನಕಲ್ಯಾಣ ಕೈಗೊಂಡ ಕಾರಣಕ್ಕಾಗಿ ಮಹಾತ್ಮ ಗಾಂಧಿ ಅವರಿಂದ 'ರಾಜಋಷಿಎಂದು ಕರೆಸಿಕೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಕನ್ನಂಬಾಡಿ ಕಟ್ಟೆಗೆ ಇಡಲಾಗಿದೆ ಎಂದು ವಿಜಯೇಂದ್ರ ಹೇಳಿದರು. 

ಮಾನ್ಯ ಹೆಚ್.ಸಿ. ಮಹಾದೇವಪ್ಪನವರೇ, ಟಿಪ್ಪು ಸುಲ್ತಾನ್ ಕೆಆರ್‌ಎಸ್‌ ಅಣೆಕಟ್ಟು ಕಟ್ಟಲು ಪ್ರಯತ್ನಿಸಿದ್ದ ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಿ, ಕನ್ನಂಬಾಡಿ ಕಟ್ಟೆ ನಿರ್ಮಾಣ ಹಂತದ ಪ್ರತಿ ಹೆಜ್ಜೆಯ ಇತಿಹಾಸದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ. ಟಿಪ್ಪು ಪರಿಶ್ರಮದ ಬಗ್ಗೆ ನಿಮ್ಮಲ್ಲಿ ಯಾವುದಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಿ, ಟಿಪ್ಪು ನಿಧನವಾಗಿದ್ದು 1799 ರಲ್ಲಿ ಕನ್ನಂಬಾಡಿ ಕಟ್ಟುವ ಯೋಜನೆ ಪ್ರಾರಂಭಿಸಿದ್ದು 1908 ರಲ್ಲಿ (ಅಂದರೆ ಶತಮಾನಗಳ ಅಂತರದಲ್ಲಿ ) ನಾಲಿಗೆ ಹೊರಳುತ್ತದೆ ಎಂದು ಇತಿಹಾಸದ ಪುಟಗಳನ್ನು ಗಲೀಜು ಮಾಡಲು ಹೋಗಬೇಡಿ, ಇಡೀ ದೇಶದಲ್ಲೇ ಅತ್ಯಂತ ಶ್ರೇಷ್ಠ ಆಡಳಿತ ನೀಡಿ ವಿಶ್ವಮಾನ್ಯರಾದ ಮೈಸೂರು ರಾಜವಂಶಸ್ಥರು ಅದರಲ್ಲೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಚರಿತ್ರೆಯನ್ನು ಸಾಧ್ಯವಾದರೆ ಗೌರವಿಸಿ, ಅಪಮಾನಿಸಿ ಜನರಿಂದ ಛೀಮಾರಿ ಹಾಕಿಸಿಕೊಳ್ಳಬೇಡಿ.


ಟಿಪ್ಪು ಸಂತತಿಯನ್ನು ವೈಭವೀಕರಿಸಿ ಮುಸ್ಲಿಂ ಮತಗಳಿಕೆಯನ್ನು ಗಟ್ಟಿಗೊಳಿಸಿಕೊಳ್ಳುವುದು ನಿಮ್ಮ ಕಾರ್ಯ ಸೂಚಿ ಎಂಬುದು ನಾಡಿನ ಜನತೆಗೆ ತಿಳಿದಿದೆ ವಿಜಯೇಂದ್ರ ಟೀಕಾಪ್ರಹಾರ ಮಾಡಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು