Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

 ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.

 ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಕಾಂಗ್ರೆಸ್ ಸಂವಿಧಾನದ ಪರವಾಗಿದೆ-
ಗಾಂಧೀಜಿ, ಅಂಬೇಡ್ಕರ್ ಮತ್ತು  ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು-ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.
ಸಂಸದೆ ಪ್ರಿಯಾಂಕ ಗಾಂಧಿ
, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು