Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ- ಸಿದ್ದರಾಮಯ್ಯ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾಜದಲ್ಲಿ ಅಸಮಾನತೆಯಿದ್ದು
, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಬುಧವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ  ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು.

ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳುನಾಳೆ  ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ-
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ
,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.

ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ-
ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದು  ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ-
ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ
, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು.

ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಟವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು