Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾಂಗ್ರೆಸ್ ಪಕ್ಷದ ಮತಗಳ್ಳತನವನ್ನ ಬಯಲು ಮಾಡಿದ ಸಿದ್ದರಾಮಯ್ಯ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ "ಮತಗಳ್ಳತನ"ವನ್ನ ಬಯಲು ಮಾಡಿದ ಸಿದ್ದರಾಮಯ್ಯ! 1991ರಲ್ಲಿ ಮಾನ್ಯ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದು ಎಲ್ಲಿಂದ? - ಕೊಪ್ಪಳ ಲೋಕಸಭಾ ಕ್ಷೇತ್ರದಿಂದ, ಯಾವ ಪಕ್ಷದಿಂದ? - ಜನತಾದಳ ಪಕ್ಷದಿಂದ, ಸಿದ್ದರಾಮಯ್ಯವರವನ್ನ ಮೋಸದಿಂದ ಸೋಲಿಸಿದ್ದು ಯಾರು? - ಕಾಂಗ್ರೆಸ್ ಪಕ್ಷ ಎಂದು ಅಶೋಕ್ ಕಾಲೆಳೆದಿದ್ದಾರೆ.

"ಮತಗಳ್ಳತನ"ದ ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಅತ್ಯಂತ ಅಗೌರವವಾಗಿ ಸಂಪುಟದಿಂದ ವಜಾ ಮಾಡಿದ್ದ ರಾಹುಲ್ ಗಾಂಧಿ ಅವರಿಗೆ, ಈಗ ಕಾಂಗ್ರೆಸ್ ಪಕ್ಷದ ಮೋಸವನ್ನು ಬಯಲು ಮಾಡಿರುವ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಅಥವಾ ಭಾರತೀಯ ಕಾಂಗ್ರೆಸ್ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತನಾ?

2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಮತ ಖರೀದಿ ಮೂಲಕ ಗೆದ್ದರು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಈಗಾಗಲೇ ಬಯಲು ಮಾಡಿದ್ದಾರೆ.

ಪಂಚಾಯಿತಿ ಇಂದ ಪಾರ್ಲಿಮೆಂಟ್ ವರೆಗೆ ಕಾಂಗ್ರೆಸ್ ಪಕ್ಷದ ಏಕಚಕ್ರಾಧಿಪತ್ಯ ಇದ್ದ ಕಾಲದಲ್ಲಿ, "ಆಗೆಲ್ಲಾ ಇವಿಎಂ ಇರಲಿಲ್ಲ, ಒಬ್ರೋ ಇಬ್ರೋ ಕೂತ್ಕೊಂಡು ಒತ್ತು ಬುಡ್ರೋ ಅನ್ನೋರು" ಎಂದು ಕಾಂಗ್ರೆಸ್ ಪಕ್ಷ 60 ವರ್ಷ ಹೇಗೆ ಚುನಾವಣೆ ಗೆಲ್ಲುತ್ತಿತ್ತು ಎನ್ನುವುದನ್ನ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಲೀಲಾಜಾಲವಾಗಿ ವಿವರಿಸಿದ್ದಾರೆ.

ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮದ ಪಿತಾಮಹ ಯಾರಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ನೆಹರೂ-ಗಾಂಧಿ ಕುಟುಂಬ.

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅವರು ಮಾತನಾಡಿದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಎಂದು ಅಶೋಕ್ ತಿಳಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು