Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

7,500 ಕೋಟಿ ರೂ. ಆಸ್ತಿ ಕಬಳಿಸಿರುವ ಸೋನಿಯಾ ಮತ್ತು ರಾಹುಲ್ ಗಾಂಧಿ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಸ್ವತಃ ಕಾಂಗ್ರೆಸ್ ಶಾಸಕರೇ ಸಮೀಕ್ಷೆಗೆ ಮನೆ ಮನೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ಮನೆ‌ಮನೆಗೆ ಹೋಗದೇ ಸಮೀಕ್ಷೆ ಮಾಡಿರುವುದು ಸಿದ್ದರಾಮಯ್ಯನವರ ತಂತ್ರ. ಸಮೀಕ್ಷೆ ಮಾಡದೇ ಅದಕ್ಕೆ ಮೀಸಲಿಟ್ಟ
165 ಕೋಟಿ ರೂ. ಹಣ ಲೂಟಿ ಮಾಡಿದ್ದಾರೆ. ಈ‌ಬಗ್ಗೆ ಲೋಕಾಯುಕ್ತ ತನಿಖೆ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಗ್ರಹಿಸಿದರು‌‌.

 ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜಾತಿಗಣತಿ ಮಾಡದೇ 165 ಕೋಟಿ ಗುಳುಂ ಮಾಡಿದ್ದಾರೆ. ಧರ್ಮ, ‌ಜಾತಿ ಒಡೆಯುವುದರಲ್ಲಿ ಸಿದ್ದರಾಮಯ್ಯ ನಂ.1‌ ಆಗಿದ್ದಾರೆ. ಈ ಹಿಂದೆ ಲಿಂಗಾಯತ ಧರ್ಮ ಒಡೆಯಲು ಹೋಗಿ ಕಪಾಳ ಮೋಕ್ಷ ಆಗಿದೆ. ಈಗ ಜಾತಿ ಗಣತಿ ವರದಿ ತೋರಿಸಿ ಹಿಂದೂಗಳನ್ನು ಒಡೆಯುತ್ತಿದ್ದಾರೆ. ಮುಸ್ಲಿಂ‌ಧರ್ಮದಲ್ಲೂ 10 ಜಾತಿಗಳಿವೆ, ಒಂದೂ ಪ್ರತ್ಯೇಕಿಸಿಲ್ಲ. ಆದರೆ ಹಿಂದೂಗಳನ್ನು ಪೀಸ್ ಪೀಸ್ ಮಾಡಿದ್ದಾರೆ ಎಂದು ಅಶೋಕ್ ದೂರಿದರು.

ಫೆವಿಕಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವ್ಯಂಗ್ಯವಾಡಿದ ಆರ್.ಅಶೋಕ, ದೇವೇಗೌಡರು ಸಿದ್ದರಾಮಯ್ಯರನ್ನು ಮಂತ್ರಿ ಮಾಡಿದರು. ಉಪಮುಖ್ಯಮಂತ್ರಿ, ಹಣಕಾಸು ಮಂತ್ರಿ ಮಾಡಿದ್ದರು. ಅಧಿಕಾರ ಇರುವ ತನಕ ಸಿದ್ದರಾಮಯ್ಯ ಜೆಡಿಎಸ್‌ಪಕ್ಷದಲ್ಲಿದ್ದರು. ಅಧಿಕಾರ ಕೊಡಲ್ಲ ಅಂದಾಗ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸಿಎಂ ಆದರು. ಅದಕ್ಕೆ ಈ ಹಿಂದೆ ಅಧಿವೇಶನದಲ್ಲಿ ಡಿಕೆಶಿ ‌ಸಿಎಂ ಸ್ಥಾನವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದಿದ್ದರು. ಆ ಹೇಳಿಕೆಯಿಂದ ಸಿದ್ದರಾಮಯ್ಯರಲ್ಲಿ ನಡುಕ ಶುರುವಾಗಿದೆ ಎಂದು ಅಶೋಕ್ ತಿಳಿಸಿದರು.

ಸಿಎಂ ಬದಲಾವಣೆ ಒಪ್ಪಂದ ಆಗಿರುವುದು ನೂರಕ್ಕೆ ನೂರಕ್ಕೆ ಸತ್ಯ. ನವೆಂಬರ್ ತಿಂಗಳಲ್ಲಿ ಅಧಿಕಾರ ಬಿಟ್ಟು ಕೊಡುವ ಟೈಂ. ಆಗ ಒಪ್ಪಿ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ. ಅದಕ್ಕೆ ಈಗ ಸಿದ್ದರಾಮಯ್ಯ ಜಾತಿಗಣತಿ ವರದಿ ಮಂಡಿಸಿದ್ದಾರೆ. ಅಧಿಕಾರ ಬಿಟ್ಟು ಕೊಡದಿದ್ದರೆ ಕಾಂಗ್ರೆಸ್‌ನಲ್ಲಿ ದಂಗೆ ಆಗಲಿದೆ ಎಂದು ಅಶೋಕ್ ಭವಿಷ್ಯ ನುಡಿದರು.
ಬಿಜೆಪಿ ಸರ್ಕಾರವೇ ಉತ್ತಮ ಎಂದು ಹಲವರು ಹೇಳುತ್ತಿದ್ದಾರೆ.


ಕಾಂಗ್ರೆಸ್‌ಗೆ 10 ರೂ. ಕೊಡುವ ಯೋಗ್ಯತೆ ಇಲ್ಲ‌. ಗುತ್ತಿಗೆದಾರರ, ಅಧಿಕಾರಿಗಳ ಆತ್ಮಹತ್ಯೆ ಆಗುತ್ತಿವೆ. ಆದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಮೋದಿ ಅವರು ಸಿಲಿಂಡರ್ ಬೆಲೆ ಎರಡು ಬಾರಿ ಇಳಿಸಿದ್ದಾರೆ. ಈಗ ಜಾಸ್ತಿ ಮಾಡಿದ್ದಾರೆ. ಕಾಂಗ್ರೆಸ್ ಯಾವುದಾದರೂ ಇಳಿಸಿ ಜಾಸ್ತಿ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು ಆಗ ನಾನು ಒಪ್ಪುತ್ತಿದ್ದೆ. ಈಗ ಎಲ್ಲದರ ಮೇಲೂ ತೆರಿಗೆ ಹೆಚ್ಚಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗಟ್ಟಿದೆ. ಗೃಹ ಸಚಿವರು ಇದ್ದು ಇಲ್ಲದಂತಾಗಿದೆ. ಏನೇ ಪ್ರಕರಣ ಆದರೂ ಅಂಕಿ ಅಂಶ ಕೊಟ್ಟು ಸುಮ್ಮನಾಗುತ್ತಿದ್ದಾರೆ. ಈ ಸರ್ಕಾರದ ಮೇಲೆ ರಾಜ್ಯದ ಜನರಿಗೆ ಭರವಸೆ ಇಲ್ಲದಾಗಿದೆ. ಈ ಸರ್ಕಾರ ಯಾವಾಗ ತೊಲಗುತ್ತೊ ಎಂಬ ಆಶಾಭಾವನೆಯಲ್ಲಿ ಜನರಿದ್ದಾರೆ ಎಂದು ವಿಪಕ್ಷ ನಾಯಕರು ಹೇಳಿದರು‌.

ದೇಶದ ಸ್ವಾತಂತ್ರ್ಯ ಯೋಧರ ಟ್ರಸ್ಟ್  ನ್ಯಾಷನಲ್ ಹೆರಾಲ್ಡ್ ಪತ್ರಿಕೆ. ಅದರ 7,500 ಕೋಟಿ ರೂ. ಆಸ್ತಿಯನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಕಬಳಿಸಿದ್ದಾರೆ. ಈ‌ರೀತಿಯ ಯೋಜನೆ ಜಾರಿಗೆ ತಂದ ಕಾಂಗ್ರೆಸ್‌ಗೆ ನೋಬೆಲ್ ಪ್ರಶಸ್ತಿ ಕೊಡಬೇಕು. ಅಮ್ಮ-ಮಗ, ಹಸು ಮತ್ತು ಕರು ಕೋಟಿ ಕೋಟಿ ಲೂಟಿ ಮಾಡಿದ್ದಾರೆ.

ಸೋನಿಯಾ ಎ1, ರಾಹುಲ್ ಎ-2 ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಇಲ್ಲ‌. ಅದು ಕೋರ್ಟ್ ಆದೇಶವಾಗಿದೆ. ಈ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾದ ಕಾಂಗ್ರೆಸ್ ‌ಯಾವ ನೈತಿಕತೆ ಆಧಾರದ ಮೇಲೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. 7,500 ಕೋಟಿ ಆಸ್ತಿ ಕಾನೂನು ಪ್ರಕಾರ ಸರ್ಕಾರಕ್ಕೆ ಬರಬೇಕು. ಆರೋಪಿಗಳಿಗೆ ಶಿಕ್ಷೆ ಆಗಬೇಕು ಎಂದು ಅಶೋಕ್ ಆಗ್ರಹ ಮಾಡಿದರು.

ಇಡಿ, ಸಿಬಿಐ, ಐಟಿ ಸ್ವಾಯತ್ತ ಸಂಸ್ಥೆಗಳು. ಸುಬ್ರಹ್ಮಣ್ಯ ಸ್ವಾಮಿ ಇಡಿಗೆ ಹೋಗಿರಲಿಲ್ಲ, ಕೋರ್ಟ್‌ಗೆ ಹೋಗಿದ್ದರು. ಕ್ಲೀನ್ ಚೀಟ್ ಕೊಡಲು ಕಾಂಗ್ರೆಸ್ ಪುಡಾರಿಗಳಿಗೆ ಏನು ಅಧಿಕಾರ ಇದೆ. ಸೋನಿಯಾ, ರಾಹುಲ್ ಬೇಲ್ ಮೇಲೆ ಇದ್ದಾರೆ. ನಮ್ಮ ಮೇಲೆ ಆರೋಪ ಮಾಡುವುದನ್ನು ಬಿಡಬೇಕು ಎಂದು ಅಶೋಕ್ ಕಿಡಿಕಾರಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ