Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ನಕಲಿ ವೈದ್ಯರ ಪತ್ತೆಗೆ ವಿಶೇಷ ಕಾರ್ಯಪಡೆ- ಜಿಲ್ಲಾಧಿಕಾರಿ ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಕಲಿ ವೈದ್ಯರ ಪತ್ತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆಯಡಿ, ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡಗಳನ್ನು ರಚಿಸಿ ನಕಲಿ ವೈದ್ಯರ ಪತ್ತೆಗೆ ಶೋಧನೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಅಧಿನಿಯಮ) ಕುರಿತು ಜರುಗಿದ ಜಿಲ್ಲಾ ಮಟ್ಟದ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಜಿಲ್ಲೆಯಾದ್ಯಂತ ಅರ್ಹ ವಿದ್ಯಾರ್ಹತೆ ಮತ್ತು ಅಧಿಕೃತ ನೋಂದಣಿ ಇಲ್ಲದೆ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ನಕಲಿ ವೈದ್ಯರು ಹೆಚ್ಚು ಇರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ಪ್ರತಿ ತಾಲ್ಲೂಕು ಹಂತದಲ್ಲಿ ತನಿಖೆಗೆ ಉಪ ಸಮಿತಿ ರಚಿಸಬೇಕು.

ದಾಳಿ ನಡೆಸುವ ಮೂಲಕ ದಾಖಲೆಗಳನ್ನು ಪರಿಶೀಲಿಸಬೇಕು. ವಿಶೇಷ ಕಾರ್ಯಪಡೆಯ ಮಾಸಿಕ ವರದಿಯನ್ನು ಕಾಲ ಕಾಲಕ್ಕೆ ಸರ್ಕಾರಕ್ಕೆ ಸಲ್ಲಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ನೊಂದಣಿಯಾಗಿರುವ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳು ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಪಡೆದುಕೊಂಡ  ದಾಖಲೆಗಳನ್ನು ಜಿಲ್ಲಾ ಮಟ್ಟದ ಪ್ರಾಧಿಕಾರಕ್ಕೆ ಸಲ್ಲಿಸಲು ಆರೋಗ್ಯ ಇಲಾಖೆಯಿಂದ ಸಂಬಂಧಪಟ್ಟವರಿಗೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಖಾಸಗಿ ವೈದ್ಯಕೀಯ ಸಂಸ್ಥೆಗಳ ಸ್ಥಳ ಪ್ರವೇಶ ಮತ್ತು ಪರಿಶೀಲನೆ ಮಾಡುವ ಜಿಲ್ಲಾ ಮಟ್ಟದ ಪ್ರಾಧಿಕೃತ ಅಧಿಕಾರಿಗಳ ತಂಡದಲ್ಲಿ ದಂತ ಹಾಗೂ ಆಯುಷ್ಯ ವೈದ್ಯಾಧಿಕಾರಿಗಳನ್ನು ನೇಮಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.


ಎರಡು ವರ್ಷ ದಾಖಲೆಗಳ ನಿರ್ವಹಣೆ ಸೂಚನೆ :
2007
ರ ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಖಾಸಗಿ ಆಸ್ಪತ್ರೆಗಳು ಒಳರೋಗಿಗಳಿಗೆ ನೀಡಿದ ಚಿಕಿತ್ಸೆಯ ದಾಖಲೆಗಳನ್ನು ಎರಡು ವರ್ಷಗಳ ಕಾಲ ನಿರ್ವಹಣೆ ಮಾಡುವುದು ಕಡ್ಡಾಯವಾಗಿದೆ. ತಪ್ಪದೇ ಇದರ ಪಾಲನೆಯಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.


ಖಾಸಗಿ ವೈದ್ಯಕೀಯ ಸಂಸ್ಥೆಯು ತನ್ನ ರಕ್ಷಣೆಯಲ್ಲಿರುವ ರೋಗಿಗಳಿಗೆ ಸಂಬಂಧಿಸಿದ ವೈದಕೀಯ ದಾಖಲೆಗಳನ್ನು ನಿಯಮಿತ ರೀತಿಯಲ್ಲಿ ನಿರ್ವಹಿಸಬೇಕು. ಈ ದಾಖಲೆಗಳನ್ನು ಜಿಲ್ಲಾ ಸರ್ಜನ್ ಪರಿಶೀಲಿಸಲು ಮುಕ್ತವಾಗಿರಿಸಬೇಕು. ರೋಗಿ ಅಥವಾ ಅವನ ಕುಟುಂಬದ ಸದಸ್ಯರು ವೈದ್ಯಕೀಯ ದಾಖಲೆಗಳನ್ನು ಪಡೆಯಲು ಹಕ್ಕುವುಳ್ಳರಾಗಿರುತ್ತಾರೆ. ಖಾಸಗಿ ಆಸ್ಪತ್ರೆಗಳು ಡಿಜಿಟಲ್ ರೂಪದಲ್ಲಿ ವೈದಕೀಯ ದಾಖಲೆಗಳನ್ನು ಶೇಖರಿಸಿಡಲು ಸಂಗ್ರಹಣ ಸಾಮಥ್ರ್ಯ ಹೆಚ್ಚಿಸಿಕೊಳ್ಳಬೇಕು ಎಂದು ಟಿ.ವೆಂಕಟೇಶ್ ತಿಳಿಸಿದರು.


ಅಗ್ನಿ ಸುರಕ್ಷತಾ ಪ್ರಮಾಣ ಕಡ್ಡಾಯ ಶಿಫಾರಸ್ಸು : 
ವಾಣಿಜ್ಯ ಸಂಕೀರ್ಣ ಕಟ್ಟಡಗಳಿಗೆ ಸಂಬಂಧಪಟ್ಟ ಮಾಲೀಕರು ಅಗ್ನಿ ಸುರಕ್ಷತಾ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿದ್ದು, ಇದರ ನಂತರವೇ ನಗರಸಭೆ ಅಥವಾ ಸ್ಥಳೀಯ ಸಂಸ್ಥೆಗಳು ಇ ಸ್ವತ್ತು ವಿತರಿಸಬೇಕು.  ಇದು ಆಸ್ಪತ್ರೆ ಕಟ್ಟಡಗಳಿಗೂ ಅನ್ವಯವಾಗುತ್ತದೆ. ಈ ಕುರಿತು ಜಿಲ್ಲಾ ಮಟ್ಟದ ಪ್ರಾಧಿಕಾರದಿಂದ ನಗರ, ಸ್ಥಳೀಯ ಸಂಸ್ಥೆಗಳಿಗೆ ಶಿಫಾರಸ್ಸು ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕೆ.ಪಿ.ಎಂ.ಇ ಆನ್‍ಲೈನ್ ತಂತ್ರಾಂಶದಲ್ಲಿ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸ್ವೀಕೃತಗೊಂಡ ಅರ್ಜಿಗಳ ವಿವರಗಳ ಕುರಿತು ಚರ್ಚಿಸಲಾಯಿತು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಐ.ಎಂ.ಎ ಅಧ್ಯಕ್ಷ ಡಾ.ಪಾಲಕ್ಷಯ್ಯ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಕಾಶಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ, ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ಜಿಲ್ಲಾ ಸಮಿತಿಯ ನಾಮನಿರ್ದೇಶಿತ ವಕೀಲ ಉಮೇಶ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ಸೇರಿದಂತೆ ಮತ್ತಿತರರು ಇದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ