Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ತೇರಿನ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಬ್ರಹ್ಮರಥೋತ್ಸವ ಮಂಗಳವಾರ ಅತ್ಯಂತ ವೈಭವ ಸಡಗರ ಸಂಭ್ರಮದಿಂದ ನೇರವೇರಿತು.

ಬ್ರಹ್ಮ ರಥೋತ್ಸವದ  ಅಂಗವಾಗಿ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳು ಮುಂಜಾನೆಯಿಂದಲೇ ಆರಂಭಗೊಂಡವು. ವೇದ ಘೋಷಗಳ ನಡುವೆ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾದವು. ಸ್ವಾಮಿಗೆ ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ನಿಗದಿತ ಶುಭ ಲಗ್ನದಲ್ಲಿ ವೇದ ಘೋಷಗಳ ನಡುವೆ ಉತ್ಸವ ಮೂರ್ತಿಯನ್ನು  ದೇವಾಲಯದಿಂದ ತಂದು ವಿಶೇಷ ಪೂಜೆ ಸಲ್ಲಿಸಿದ ಅನಂತರ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ರಥೋತ್ಸವದಲ್ಲಿ ಶಾಸಕ  ದೀರಜ್ ಮುನಿರಾಜು , ಮಾಜಿ ಶಾಸಕ ವೆಂಕಟರಮಣಯ್ಯ,ನಗರಸಭೆಅಧ್ಯಕ್ಷರು ಸದಸ್ಯರುಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ  ಹಾಗು ತಾಲ್ಲೂಕಿನ ಸಂಘ ಸಂಸ್ಥೆಯ ಮುಖಂಡರು ಭಾಗವಹಿಸಿದ್ದರು.


ಪ್ರಸನ್ನ ಲಕ್ಷ್ಮೀ ವೆಂಟಕರಮಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ  ಜನಪ್ರತಿನಿಧಿಗಳು ಭಕ್ತ ವೃಂದದ ಜೊತೆಗೂಡಿ ತೇರು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿಗೆ ಜಯಘೋಷ ಮಾಡುತ್ತಾಭಕ್ತಾದಿಗಳು  ರಥವನ್ನು ಎಳೆದು  ಹಣ್ಣು-ದವನ. ಎಸೆಯುವ ಮೂಲಕ ಧನ್ಯತೆ ಮೆರೆದರು. 

ರಥೋತ್ಸವದ ಅಂಗವಾಗಿ ಶ್ರೀಕಂಟೇಶ್ವರ ಭಕ್ತ ಮಂಡಲಿ, ಬಿಸಿಲಹಳ್ಳಿ ಚಿಕ್ಕ ಚೌಡಪ್ಪ ಕುಟುಂಬ ವರ್ಗ, ದೇವಾಂಗ ಮಂಡಲಿ,ಪದ್ಮಶಾಲಿ ಯುವಕ ಸಂಘ, ಸಂಜಯನಗರ ಗೆಳೆಯರ ಬಳಗ ಸೇರಿದಂತೆ ಹಲವು ಸಂಘಟನೆಗಳಿಂದ ರಥೋತ್ಸವಕ್ಕೆ ಬಂದ ಭಕ್ತಾದಿಗಳಿಗೆ ನೀರು ಮಜ್ಜಿಗೆ, ಪಾನಕ, ಕೋಸಂಬರಿ ಅರವಂಟಿಗೆ ವ್ಯವಸ್ಥೆ ಮಾಡಿದ್ದವು. ವಿಶ್ವೇಶ್ವರಯ್ಯ ವೃತ್ತದ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ  ನಗರದ ಠಾಣಾ ಪೋಲಿಸ್  ನಿರೀಕ್ಷಕ ಅಂಬರೀಶ್ ಗೌಡ ನೇತೃತ್ವದಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಭಕ್ತರಿಗಾಗಿ ದಾಸೋಹ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಮತ್ತು ವಿವಿಧ ಸಂಘ- ಸಂಸ್ಥೆಗಳು ಅಚ್ಚುಕಟ್ಟಾಗಿ ನಿರ್ವಹಿಸಿದ್ದವು.

ಸ್ಥಳೀಯ ಜನಪ್ರತಿನಿಧಿಗಳು,   ಪ್ರಮುಖ ಗಣ್ಯರು ಸೇರಿದಂತೆ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು