ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಜಯನಗರದ ಅಪೋಲೋ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ 'ಪಾರ್ಶ್ವವಾಯು (ಸ್ಟ್ರೋಕ್) ಜಾಗೃತಿ ಅಭಿಯಾನ'ಕ್ಕೆ ಅಭೂತಪೂರ್ವ ಚಾಲನೆ ದೊರೆಯಿತು. ಈ ಜಾಗೃತಿ ವಾಕಾಥಾನ್ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಈ ರೀತಿಯ ಗಂಭೀರ ಆರೋಗ್ಯ ಸಮಸ್ಯೆಯ ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವಜನತೆಯಲ್ಲಿ ಅರಿವು ಮೂಡಿಸುವ ಅಪೋಲೋ ಆಸ್ಪತ್ರೆಯ ಶ್ರಮ ಅಭಿನಂದನಾರ್ಹ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು. ಪಾರ್ಶ್ವವಾಯುವಿನ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದು ಪ್ರಾಣಾಪಾಯವನ್ನು ತಪ್ಪಿಸಲು ಎಷ್ಟು ಮುಖ್ಯ ಎಂಬುದನ್ನು ಈ ಕಾರ್ಯಕ್ರಮದ ಮೂಲಕ ಜನರಿಗೆ ತಲುಪಿಸುವ ಪ್ರಯತ್ನ ಮಾಡಲಾಯಿತು.
ಈ ಜಾಗೃತಿ ಅಭಿಯಾನದಲ್ಲಿ ರಾಜಕೀಯ ಹಾಗೂ ವೈದ್ಯಕೀಯ ಕ್ಷೇತ್ರದ ಹಲವು ಪ್ರಮುಖರು ಭಾಗವಹಿಸಿದ್ದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ. ರಾಮಮೂರ್ತಿ, ಹಿರಿಯ ನರರೋಗ ತಜ್ಞ ಡಾ. ಸತೀಶ್ ಚಂದ್ರ, ಡಾ. ನರರೋಗ ತಜ್ಞ ಚಿನ್ಮಯಿ ನಾಗೇಶ್, ವೈದ್ಯರು ಹಾಗೂ ಅಪೋಲೋ ಆಸ್ಪತ್ರೆಯ ಮುಖ್ಯಸ್ಥ ಡಾ. ಯತೀಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಆಸ್ಪತ್ರೆ ಆಯೋಜಿಸಿದ್ದ ಈ ವಾಕಾಥಾನ್ನಲ್ಲಿ ನಗರದ ನೂರಾರು ಯುವಜನರು ಹಾಗೂ ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಪಾರ್ಶ್ವವಾಯು ಜಾಗೃತಿಯ ಸಂದೇಶ ಸಾರುವ ಫಲಕಗಳನ್ನು ಹಿಡಿದು ಹೆಜ್ಜೆ ಹಾಕಿದರು.




