Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಪೊಲೀಸರ ಯಶಸ್ವಿ ಕಾರ್ಯಾಚರಣೆ 2.16 ಕೋಟಿ ಹಣ ಸೇಫ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಯಶಸ್ವಿ ಕಾರ್ಯಾಚರಣೆಯಿಂದಾಗಿ ಇ-ಮೇಲ್ ಸ್ಪೂಫಿಂಗ್ ಮೂಲಕ ವಂಚಕರ ಪಾಲಾಗಿದ್ದ
2.16 ಕೋಟಿ ಹಣವನ್ನು ಸಂಪೂರ್ಣವಾಗಿ ಹಿಂಪಡೆದು, ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಪೊಲೀಸರು ಗೋಲ್ಡನ್ ಅವರ್‌ನಲ್ಲಿ ತ್ವರಿತ ಕಾರ್ಯಾಚರಣೆ ಕೈಗೊಂಡು ಹಣ ಹಿಂಪಡೆದಿದ್ದು ಇದು ದೇಶದಲ್ಲೇ ಮೊದಲ ಗರಿಷ್ಠ ಮೊತ್ತದ ರಿಕವರಿ ಹಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಹೈದರಾಬಾದ್ ಮೂಲದ ಔಷಧ ತಯಾರಿಕಾ ಕಂಪನಿ ರೆಡ್ಡೀಸ್ ಲ್ಯಾಬೋರೇಟರೀಸ್ ಜತೆ ಗ್ರೂಪ್ ಫಾರ್ಮಾ ಹೆಸರಿನ‌ಕಂಪನಿಯೊಂದು ವ್ಯವಹಾರ ಹೊಂದಿತ್ತು.


ನೈಜೀರಿಯಾದಲ್ಲಿ ಕುಳಿತು ಕಳೆದ ವರ್ಷ ಫೆಬ್ರವರಿಯಲ್ಲಿ ಗ್ರೂಪ್ ಫಾರ್ಮಾ ಕಂಪನಿಯ ಹೆಸರಿನಲ್ಲಿ ನಕಲಿ ಮೇಲ್ ಖಾತೆ ತೆರೆದಿದ್ದ ವಂಚಕರು, ರೆಡ್ಡೀಸ್ ಲ್ಯಾಬೋರೇಟರೀಸ್ ಜತೆ ಸಂಪರ್ಕ ಸಾಧಿಸಿದ್ದರು. ಅಸಲಿ ಮೇಲ್ ಐಡಿಯಿಂದ ಬಂದಿರಬಹುದು ಎಂದು ನಂಬಿದ್ದ ರೆಡ್ಡೀಸ್ ಲ್ಯಾಬೋರೇಟರೀಸ್, ವಂಚಕರು ಸೂಚಿಸಿದ್ದ ಖಾತೆಗೆ 2.16 ಕೋಟಿ ರೂಪಾಯಿ ಪಾವತಿಸಿದ್ದರು. ಆದರೆ ಆ ಹಣ ನಕಲಿ ಬ್ಯಾಂಕ್ ಖಾತೆಗೆ ಜಮೆಯಾಗಿರುವುದು ನಂತರ ಬಯಲಾಗಿತ್ತು.

ಕೂಡಲೇ ಗೋಲ್ಡನ್ ಅವರ್ ಅವಧಿಯೊಳಗೆ ಗ್ರೂಪ್ ಫಾರ್ಮಾದ ಪ್ರತಿನಿಧಿಗಳು ಸಿಸಿಬಿಯ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕೂಡಲೇ ಎಚ್ಚೆತ್ತು, ಹಣ ಸಂದಾಯವಾಗಿದ್ದ ಗುಜರಾತ್ ಮೂಲದ ಬ್ಯಾಂಕ್ ಖಾತೆ ಫ್ರೀಜ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಸದ್ಯ ಸಂಪೂರ್ಣವಾಗಿ 2.16 ಕೋಟಿ ರೂಪಾಯಿ ಹಣ ವಾಪಸ್ ಹಿಂದಿರುಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.


ಏನಿದು ಗೋಲ್ಡನ್ ಅವರ್:
ಯಾವುದೇ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್, ಗಿಫ್ಟ್ ಆಫರ್, ಕ್ರೆಡಿಟ್ ಕಾರ್ಡ್ ಪಾಸ್‌ ವರ್ಡ್ ಚೇಂಜ್, ಕೆವೈಸಿ ಅಪ್ಡೇಟ್ ಸೋಗಿನಲ್ಲಿ ಎಸ್ಎಂಎಸ್ ಅಥವಾ ಕರೆಗಳ ಮೂಲಕ ಹಣ ದೋಚುತ್ತಾರೆ.


ವಂಚನೆಗೊಳಗಾದವರು ಅಂಥ ಸಂದರ್ಭಗಳಲ್ಲಿ ಒಂದು ಗಂಟೆಯ ಅವಧಿಯನ್ನು 'ಗೋಲ್ಡನ್ ಅವರ್' ಎನ್ನಲಾಗುತ್ತದೆ. ಗೋಲ್ಡನ್ ಅವರ್ ಅವಧಿಯಲ್ಲಿ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ 1930ಗೆ ಕರೆ ಮಾಡಿ ಮಾಹಿತಿ ನೀಡುವುದರಿಂದ ಅಥವಾ ಪೊಲೀಸ್ ಠಾಣೆಗೆ ದೂರು ನೀಡುವುದರಿಂದ ಕೆಲವೇ ನಿಮಿಷಗಳಲ್ಲಿ ಆ ಮಾಹಿತಿ ಆಧರಿಸಿ ಹಣ ವರ್ಗಾವಣೆಯಾದ ಖಾತೆ ಅಥವಾ ವ್ಯಾಲೆಟ್‌ಪತ್ತೆ ಹಚ್ಚಿ ಅದರಲ್ಲಿರುವ ಹಣ ತಡೆಹಿಡಿಯುವ ಅವಕಾಶ ಹೆಚ್ಚಿರುತ್ತದೆ. ಮತ್ತು ತನಿಖಾ ಸಂಸ್ಥೆಗಳು ತ್ವರಿತವಾಗಿ ವಂಚಕರ ಖಾತೆಯನ್ನು ಪತ್ತೆ ಹಚ್ಚಿ, ಸ್ಥಗಿತಗೊಳಿಸಲು ಸಾಧ್ಯವಾಗುತ್ತದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ