E-PAPER
23 Nov 2026, 03:38:56 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ನಟ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಮೆರಿಕದಲ್ಲಿ ಹ್ಯಾಟ್ರಿಕ್ ಹೀರೋ, ನಾಯಕ ನಟ ಶಿವರಾಜ್​ಕುಮಾರ್ ಅವರಿಗೆ ಕಳೆದ ಡಿಸೆಂಬರ್ 24ರಂದು ಕ್ಯಾನ್ಸರ್ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಯಶಸ್ವಿ ಸರ್ಜರಿ ಆಗಿರುವ ಕುರಿತು ಪತ್ನಿ ಗೀತಾ ಶಿವರಾಜ್​ಕುಮಾರ್, ಬಾಮೈದ ಮಧು ಬಂಗಾರಪ್ಪ ಮತ್ತು ವೈದ್ಯರು ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ. ನಟ ಶಿವರಾಜ್ ಕುಮಾರ್ ಚೇತರಿಸಿಕೊಳ್ಳುತ್ತಿದ್ದು, ಶಿವರಾಜ್​ಕುಮಾರ್ ಅಭಿಮಾನಿಗಳಿಗಾಗಿ ಗೀತಾ ಅವರು ವಿಡಿಯೋ ಶೇರ್ ಮಾಡಿದ್ದಾರೆ.

ಎಲ್ಲರಿಗೂ ನಮಸ್ಕಾರ. ಹೊಸ ವರ್ಷದ ಶುಭಾಶಯಗಳು. ನಿಮ್ಮ ಪ್ರಾರ್ಥನೆ ಫಲಿಸಿದೆ. ರಿಪೋರ್ಟ್​​​ಗಳೆಲ್ಲವೂ ನೆಗೆಟಿವ್​ ಎಂದು ಬಂದಿದೆ. ಇದೀಗ ವೈದ್ಯರು ಅಧಿಕೃತವಾಗಿ ಕ್ಯಾನ್ಸರ್​ ಫ್ರೀ ಎಂದು ಘೋಷಿಸಿದ್ದಾರೆ. ನಿಮ್ಮೆಲ್ಲರ ಪ್ರಾರ್ಥನೆ, ಆಶೀರ್ವಾದದಿಂದ ಶಿವರಾಜ್​ಕುಮಾರ್​ ಅವರು ಚೇತರಿಸಿಕೊಳ್ಳಲು ಸಾಧ್ಯವಾಯಿತು. ನಾನಿದನ್ನು ನನ್ನ ಬದುಕಲ್ಲಿ ಎಂದಿಗೂ ಮರೆಯೋದಿಲ್ಲ ಎಂದು ಗೀತಾ ಶಿವರಾಜ್​ಕುಮಾರ್ ತಿಳಿಸಿದ್ದಾರೆ.

ಎಲ್ಲರಿಗೂ ನಮಸ್ಕಾರ. ಹೊಸ ವರ್ಷದ ಶುಭಾಶಯಗಳು. ಮಾತಾಡ್​ಬೇಕಾದ್ರೆ ಎಲ್ಲಿ ಭಾವುಕನಾಗುತ್ತೇನೆಂದು ಸ್ವಲ್ಪ ಭಯ ಆಗುತ್ತೆ. ಯಾಕಂದ್ರೆ ಅಲ್ಲಿಂದ ಹೊರಡಬೇಕಾದ್ರೆ ಸ್ವಲ್ಪ ಎಮೋಶನಲ್​ ಆಗಿದ್ದೆ. ಮನುಷ್ಯನಿಗೆ ಭಯ ಅನ್ನೋದು ಇದ್ದೇ ಇರುತ್ತೆ. ಆ ಭಯ ನೀಗಿಸೋಕ್ಕೆಂದೇ ಅಭಿಮಾನಿ ದೇವರುಗಳಿರುತ್ತಾರೆ.

ಸಹನಟರಿರುತ್ತಾರೆ, ಸ್ನೇಹಿತರು ಇರುತ್ತಾರೆ, ಸಂಬಂಧಿಕರಿರುತ್ತಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಸ್ಟ್ರಾಂಗ್​ ಹ್ಯಾಂಡ್​ ವೈದ್ಯರಿರುತ್ತಾರೆ. ಹೀಗೆ ಪ್ರತಿಯೊಬ್ಬರು ನೋಡಿಕೊಂಡ ರೀತಿ ನನಗೆ ಧೈರ್ಯ ಕೊಟ್ಟಿತು ಎಂದು ನಟ ಶಿವರಾಜ್​ಕುಮಾರ್ ಅವರು ಅಭಿಮಾನಿಗಳಿಗಾಗಿ ವಿಡಿಯೋದಲ್ಲಿ ಮಾತನಾಡಿದ್ದಾರೆ​.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!