E-PAPER
24 Nov 2026, 03:49:45 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸುಹಾಸ್ ಶೆಟ್ಟಿ ಹತ್ಯೆ ಮಾಡಿದ ಆರೋಪಿಗಳನ್ನು ಬಿಡುವುದಿಲ್ಲ-ಗೃಹ ಸಚಿವ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಆ ತಂಡಗಳು ಶೋಧಕ್ಕೆ ಮುಂದಾಗಿವೆ. ಆರೋಪಿಗಳು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್​ ತಿಳಿಸಿದರು.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ‌ಕಾಪಾಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ. ಈಗಾಗಲೇ‌ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜನರು ಕೂಡ ಶಾಂತಿ ಕಾಪಾಡಬೇಕು ಎಂದು ಮನವಿ‌ಮಾಡುತ್ತೇನೆ. ಸರ್ಕಾರ ಮತ್ತು‌ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ ಎಂದು ಪರಮೇಶ್ವರ್ ತಿಳಿಸಿದರು.
ನಿನ್ನೆಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಘಟನೆ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಬಿಡುವುದಿಲ್ಲ‌. ಯಾವುದೇ ಪಕ್ಷ
, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಸಿದರು‌.

ಬಿಜೆಪಿ ಮುಖಂಡರ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು‌ಪ್ರಕಾರ ಏನೆಲ್ಲ‌ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರಾ? ನಾವೆಲ್ಲ ಹಿಂದುಗಳಲ್ಲವಾ? ನಾವು ಬೇರೆಯವರಾ? ಆ ರೀತಿ ಘಟನೆಯನ್ನು ವಿಶ್ಲೇಷಣೆ ಮಾಡುವುದು ಸರಿಯಲ್ಲ. ಘಟನೆಗೆ ಬೇರೆ ಬೇರೆ ಬಣ್ಣಕಟ್ಟುವುದು ಬೇಡ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

 ಜಾತಿ ಗಣತಿಗೆ ಸ್ವಾಗತ: ದೇಶದಾದ್ಯಂತ ಜಾತಿ ಜನಗಣತಿ ನಡೆಯಬೇಕು ಎಂದು ರಾಹುಲ್ ಗಾಂಧಿ ಅವರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಕರ್ನಾಟಕದ ಬಗ್ಗೆ ಮಾತನಾಡುವಾಗ ರಾಷ್ಟ್ರದಲ್ಲಿ ಆಗಬೇಕು ಎಂದು ಅನೇಕ‌ಸಂದರ್ಭಗಳಲ್ಲಿ ಹೇಳಿದ್ದರು. ಜಾತಿಗಣತಿ ನಡೆಸುವ ಅಗತ್ಯತೆ ಇದೆ ಎಂಬುದು ಕೇಂದ್ರ ಸರ್ಕಾರಕ್ಕೆ ಅರ್ಥವಾಗಿದೆ. ಕೇಂದ್ರದ ಜಾತಿಗಣತಿ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಸಾಮಾಜಿಕ, ಶೈಕ್ಷಣಿಕ‌ಮತ್ತು ಆರ್ಥಿಕ ಸ್ಥಿತಿಗಳನ್ನ ಅಧ್ಯಯನ ನಡೆಸಿ ಹಿಂದೆ ಉಳಿದವರನ್ನು ಸಮಾಜದ‌ಮುಖ್ಯವಾಹಿನಿಗೆ ತರಬೇಕು ಎಂಬುದು ಜನಗಣತಿಯ ಉದ್ದೇಶ. ಈ ಬಾರಿ ರಾಜ್ಯದ ಆಯವ್ಯಯದಲ್ಲಿ ಜಾತಿಗಣತಿಯನ್ನು ಆಧಾರವಾಗಿಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ‌ಎಂದು ಪರಮೇಶ್ವರ್ ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು