Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್‌ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಪೂಜಾ ಖೇಡ್ಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸತೀಶ ಚಂದ್ರ ಅವರಿದ್ದ ಪೀಠ, ತನಿಖೆಗೆ ಸಹಕರಿಸುವಂತೆ ಪೂಜಾ ಖೇಡ್ಕರ್‌ಗೆ ಸೂಚಿಸಿದೆ.
ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರು ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿದ್ದಾರೆ.


 ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ವೇಳೆ, ಆಕೆ ಮಾಡಿದ ಘೋರ ಅಪರಾಧವೇನು? ಅವರು ಡ್ರಗ್ಸ್ ಮಾರಾಟಗಾರ್ತಿಯೇ? ಅಥವಾ ಭಯೋತ್ಪಾದಕಿಯೇ? ಆಕೆ ಏನಾದರೂ ಕೊಲೆ ಮಾಡಿದ್ದಾಳೆಯೇ? ಎನ್‌ಡಿಪಿಎಸ್‌ಕಾಯ್ದೆಯಡಿ ಅವರ ಬಂಧನವಾಗಿಲ್ಲ, ನೀವು ತನಿಖೆ ಪೂರ್ಣಗೊಳಿಸಿ. ಎಲ್ಲವನ್ನು ಕಳೆದುಕೊಂಡಿರುವ ಆಕೆಗೆ ಎಲ್ಲಿಯೂ ಕೆಲಸ ಸಿಗುತ್ತಿಲ್ಲ ಎಂದು ಪೀಠವು ಹೇಳಿದೆ.

ದೆಹಲಿ ಹೈಕೋರ್ಟ್ ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತವಾದ ಪ್ರಕರಣ ಇದು ಎಂದು ಪೀಠ ಗಮನಿಸಿದೆ.
ಸುಪ್ರೀಂ ಕೋರ್ಟ್ ವಾದ-ವಿವಾದ ಆಲಿಸಿ ಪೂಜಾ ಖೇಡ್ಕರ್‌ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದಕ್ಕೆ ದೆಹಲಿ ಪೊಲೀಸರು ಮತ್ತು ಯುಪಿಎಸ್‌ಸಿ ವಿರೋಧ ವ್ಯಕ್ತಪಡಿಸಿವೆ. ಆಕೆ ಆಯೋಗ ಮತ್ತು ಜನರನ್ನು ವಂಚಿಸಿದ್ದಾಳೆ. ಆಕೆ ತನಿಖೆಯಲ್ಲಿ ಸಹಕರಿಸುತ್ತಿಲ್ಲ ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಸುಪ್ರೀಂ ಕೋರ್ಟ್ ಗೆ ತಕರಾರು ಸಲ್ಲಿಸಿವೆ.


ಪ್ರಕರಣ ಏನು?
ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ 2023ರ ಬ್ಯಾಚ್‌ ನಲ್ಲಿ ಐಎಎಸ್ ಪಾಸ್ ಮಾಡಿದ್ದರು. ಈ ವೇಳೆ ಐಎಎಸ್ ಸೇವೆಗಾಗಿ ನಡೆಯುವ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಜುಲೈನಲ್ಲಿ ಆಕೆಯ ವಿರುದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಕೇಂದ್ರ ಲೋಕಸೇವಾ ಆಯೋಗವು(ಯುಪಿಎಸ್‌ಸಿ) ಜುಲೈ 31ರಂದು ಆಕೆಯ ನೇಮಕಾತಿ ಆದೇಶ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಿ ಆದೇಶ ಮಾಡಲಾಗಿತ್ತು.

ಆದರೆ ಪೂಜಾ ಖೇಡ್ಕರ್ ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆಯಾದರೂ, ದೆಹಲಿ ಪೊಲೀಸರು ಅವರ ವಿರುದ್ಧ ವಿವಿಧ ಅಪರಾಧಗಳಿಗಾಗಿ ಎಫ್‌ಐಆರ್ ದಾಖಲಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು