Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸುಪ್ರೀಂ ಕೋರ್ಟ್​ ಛೀಮಾರಿ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಮಾಡಿದ ಹೇಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.


ಸೋಮವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ಕುರಿತು ನಿಜವಾದ ಭಾರತನೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಭಾರತೀಯ ಸೇನೆ ಬಗ್ಗೆ ಸಂಸದ ಮಾತನಾಡಲ್ಲ, ಚೀನಾ 2000 ಕಿಲೋಮೀಟರ್‌ಗಳಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹೀಗೆ ಹೇಳುತ್ತಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು ವಿಚಾರಣೆಯ ಸಮಯದಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿತು. ರಾಹುಲ್ ಗಾಂಧಿ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿರೋಧ ಪಕ್ಷದ ನಾಯಕರೊಬ್ಬರು ಸಮಸ್ಯೆಗಳನ್ನು ಎತ್ತಲು ಸಾಧ್ಯವಾಗದಿದ್ದರೆ ಅದು ದುರದೃಷ್ಟಕರ ಪರಿಸ್ಥಿತಿ ಎಂದು ಆರಂಭದಲ್ಲಿ ವಾದಿಸಿದರು.


ಇದಕ್ಕೆ ನ್ಯಾಯಮೂರ್ತಿ ದತ್ತಾ ಪ್ರತಿಕ್ರಿಯಿಸಿ, ನೀವು ವಿರೋಧ ಪಕ್ಷದ ನಾಯಕರು, ಸಂಸತ್ತಿನಲ್ಲಿ ಏನಾದರೂ ಹೇಳಿ, ನೀವು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಏಕೆ ಹೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.


ಡಿಸೆಂಬರ್ 2022 ರ ಭಾರತ-ಚೀನಾ ಘರ್ಷಣೆಯ ಕುರಿತು ಅವರ ಹೇಳಿಕೆಗಳು ಭಾರತೀಯ ಸೇನೆಯ ಮಾನಹಾನಿ ಮತ್ತು ಸ್ಥೈರ್ಯ ಕುಗ್ಗಿಸಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯು ಭಾರತೀಯ ಸೈನಿಕರನ್ನು ಥಳಿಸುತ್ತಿದೆ ಮತ್ತು ಮಾಧ್ಯಮಗಳು ಅದನ್ನು ಪ್ರಶ್ನಿಸುವುದಿಲ್ಲ ಎಂದು ಅವರು ಹೇಳಿದ್ದರು.

ಜನರು ಭಾರತ್ ಜೋಡೋ ಯಾತ್ರೆ ಬಗ್ಗೆ ಕೇಳುತ್ತಾರೆ, ಆದರೆ ಚೀನಾ 2,000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿರುವುದರ ಬಗ್ಗೆ ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ ಎಂದು ರಾಹುಲ್ ಹೇಳಿದ್ದರು.

ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮೇ 29 ರಂದು ವಜಾಗೊಳಿಸಿತು.


ಪ್ರಕರಣವನ್ನು ದುರುದ್ದೇಶಪೂರಿತ ರೀತಿಯಲ್ಲಿ ದಾಖಲಿಸಲಾಗಿದೆ ಎಂದು ಗಾಂಧಿ ವಾದಿಸಿದ್ದರು. ರಾಹುಲ್ ಗಾಂಧಿಯವರ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.

ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಗೆ ರಿಲೀಫ್ ನೀಡಿದೆ ಮತ್ತು ಕೆಳ ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ ಮತ್ತು 3 ವಾರಗಳ ನಂತರ ವಿಚಾರಣೆಗೆ ಸಮಯವನ್ನು ನಿಗದಿಪಡಿಸಿ ಆದೇಶಿಸಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ