Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಾಮರಸ್ಯ ಮೂಡಿಸಲು ಕಾಯಕ ಶರಣ ಜಯಂತಿ ಸಹಕಾರಿ : ಟಿ.ರಘುಮೂರ್ತಿ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಅಸಮಾನತೆ
, ಅಸ್ಪೃಶ್ಯತೆ ಹಾಗೂ ಶೋಷಣೆ ತುಂಬಿದ ಸಮಾಜಕ್ಕೆ ಧಾರ್ಮಿಕ ಜಾಗೃತಿ ಮೂಡಿಸಲು ಈ ನಾಡಿನ ಶರಣರ ಸಂತತಿ ಸಾಕಷ್ಟು ಪ್ರಮಾಣದಲ್ಲಿ ಸಮಾಜದ ಎಲ್ಲಾ ವರ್ಗದಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿದೆ. ಇಂದು ಪ್ರತಿಯೊಂದು ಸಮುದಾಯದಲ್ಲೂ ಸಾಮರಸ್ಯತೆ  ಮೂಡಿದೆ. ಅದಕ್ಕೆ ಮೂಲ ಕಾರಣ ಕಾಯಕಶರಣರ ಜಯಂತಿ ಎಂದು ಕ್ಷೇತ್ರದಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಸೋಮವಾರ ನಗರದ ತಾಲ್ಲೂಕು ಕಚೇರಿ ಸಬಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಶ್ರೀಕಾಯಕಶರಣರ ಜಯಂತಿ ಕಾರ್ಯಕ್ರಮವನ್ನು ಶರಣರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ನಾನಾ ವರ್ಗ, ನಾನಾ ಜಾತಿಗಳು ಇದ್ದರೂ ಸಹ ಯಾವುದೇ ಗೊಂದಲಕ್ಕೆ ಒಳಗಾಗದೆ ಬದುಕು ನಡೆಸಲಾಗುತ್ತಿದೆ. ಜನರಲ್ಲಿ ಆಳಾವಾಗಿ ಬೇರೂರಿದ್ದ ಕಹಿಭಾವನೆಗಳಿಗೆ ಶಿವಶರಣರು ತಮ್ಮ ವಚನಾಮೃತಗಳ ಮೂಲಕ ಬೆಳಕು ಚೆಲ್ಲಿದ್ದಾರೆ. ಕಾಯಕಶರಣರ ಜಯಂತಿ ಆಚರಣೆ ನಮ್ಮಲ್ಲಿ ಹೊಸ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ಧಾರ್ ರೇಹಾನ್‌ಪಾಷ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಸಕರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಸರ್ಕಾರ ಶಿವಶರಣರ ಎಲ್ಲಾ ಧಾರ್ಮಿಕ ವಿಚಾರಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಕಾಯಕ ಶರಣರ ಜಯಂತಿ ಜನರಲ್ಲಿ ಧಾರ್ಮಿಕ ಭಾವನೆಯನ್ನು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂಧರು.

ಇಒ ಎಚ್.ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಮ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಪ್ಪ, ನಾಮಿನಿ ಸದಸ್ಯರಾದ ಬಡಗಿಪಾಪಣ್ಣ, ಅನ್ವರ್‌ಮಾಸ್ಟರ್, ಆರ್.ವೀರಭದ್ರಪ್ಪ, ಜಿಲ್ಲಾ ಕೆಡಿಪಿ ಸದಸ್ಯ ಓ.ರಂಗಸ್ವಾಮಿ ತಾಲ್ಲೂಕು ಕೆಡಿಪಿ ಸದಸ್ಯ ಸುರೇಶ್‌ಕುಮಾರ್, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಪರಶುರಾಮಪುರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ದ್ಯಾವರನಹಳ್ಳಿತಿಪ್ಫೇಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು