Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭೀಕರ ಬರ: ಕೇಂದ್ರದಿಂದ ತುರ್ತು ನೆರವು ಹಾಗೂ ಪರಿಹಾರ ಮಾನದಂಡ ಪರಿಷ್ಕರಣೆಗೆ ಡಾ. ಜಿ. ಪರಮೇಶ್ವರ್ ಮನವಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ರೈತರಿಗೆ ಸಮಯೋಚಿತ ಹಾಗೂ ಸಮರ್ಪಕ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದ ತುರ್ತು ನೆರವು ಕೋರಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರು ಹಾಗೂ ಗ್ರಾಮೀಣ ಜನರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಉಂಟಾಗಿದ್ದು, ಈ ಸಂಕಷ್ಟವನ್ನು ಎದುರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾದ ಅಗತ್ಯತೆಯನ್ನು ಅವರು ಪತ್ರದಲ್ಲಿ ದೃಢವಾಗಿ ಒತ್ತಿಹೇಳಿದ್ದಾರೆ.

Advertisement

ಬರಪೀಡಿತ ತಾಲೂಕುಗಳು: ಆರಂಭದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ಬಳಿಕ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಸೇರಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಇನ್ನೂ 40 ತಾಲೂಕುಗಳಲ್ಲಿ ಗ್ರೌಂಡ್‌ಟ್ರೂಥಿಂಗ್‌ಪ್ರಕ್ರಿಯೆ ನಡೆಯುತ್ತಿದ್ದು, ಮುಂಗಾರು ಅಂತ್ಯದ ವೇಳೆಗೆ ಈ ಸಂಖ್ಯೆ 220 ದಾಟುವ ಸಾಧ್ಯತೆಯಿದೆ.

ಆರ್ಥಿಕ ನಷ್ಟ: ಒಟ್ಟು 177 ತಾಲೂಕುಗಳಲ್ಲಿ ಸುಮಾರು 47.09 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಒಟ್ಟು ಆರ್ಥಿಕ ನಷ್ಟವು ಬರೋಬ್ಬರಿ ₹46,324.5 ಕೋಟಿಗೆ ತಲುಪಿದೆ.

ಎನ್‌ಡಿಆರ್‌ಎಫ್ ನೆರವು ಕೋರಿಕೆ: ಎನ್‌ಡಿಆರ್‌ಎಫ್ ನಿಯಮಗಳಡಿ ಒಟ್ಟು ₹7,142.64 ಕೋಟಿ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಇದರಲ್ಲಿ ಇನ್‌ಪುಟ್ ಸಬ್ಸಿಡಿಗಾಗಿ ₹4,998.6 ಕೋಟಿ ಹಾಗೂ ಮೇವು ಮತ್ತು ಕುಡಿಯುವ ನೀರಿನ ನಿರ್ವಹಣೆಗಾಗಿ ₹2,144.04 ಕೋಟಿಗಳನ್ನು ಕೋರಲಾಗಿದೆ.

ಪರಿಹಾರ ಮಾನದಂಡಗಳ ಪರಿಷ್ಕರಣೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ, ಪ್ರಸ್ತುತ ಜಾರಿಯಲ್ಲಿರುವ SDRF ಮತ್ತು NDRF ಇನ್‌ಪುಟ್ ಸಬ್ಸಿಡಿ ಮಾನದಂಡಗಳು ಇಂದಿನ ಕೃಷಿ ವೆಚ್ಚಕ್ಕೆ ಹೋಲಿಸಿದರೆ ಅತ್ಯಂತ ಕಡಿಮೆಯಿವೆ ಎಂದು ತಿಳಿಸಲಾಗಿದೆ. ರೈತರ ನೈಜ ನಷ್ಟವನ್ನು ಭರಿಸುವಂತೆ 16ನೇ ಹಣಕಾಸು ಆಯೋಗದ ಅವಧಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಮಾನದಂಡಗಳನ್ನು ಆದ್ಯತೆಯ ಮೇರೆಗೆ ಪರಿಷ್ಕರಿಸುವಂತೆ ಕೋರಲಾಗಿದೆ.

ತ್ವರಿತ ಮೌಲ್ಯಮಾಪನ ಮತ್ತು ಪರಿಹಾರ ಬಿಡುಗಡೆ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಬರೆದ ಪತ್ರದಲ್ಲಿ, ರಾಜ್ಯಕ್ಕೆ ಆಗಮಿಸಿರುವ ಕೇಂದ್ರದ ಬರ ಅಧ್ಯಯನ ತಂಡದ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಸಂತ್ರಸ್ತ ರೈತರಿಗೆ ಶೀಘ್ರವೇ ಪರಿಹಾರ ಬಿಡುಗಡೆ ಮಾಡುವಂತೆ ವಿನಂತಿಸಲಾಗಿದೆ.

ಬರದ ಈ ವಿಕೋಪ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಧೈರ್ಯ ತುಂಬಲು ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರವೇ ನೆರವು ನೀಡಲಿದೆ ಎಂಬ ದೃಢ ವಿಶ್ವಾಸವನ್ನು ಡಾ. ಜಿ. ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ