E-PAPER
24 Nov 2026, 01:48:57 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮರುಪರೀಕ್ಷೆಯಲ್ಲೂ ಮುಗ್ಗರಿಸಿದ ಕಾಂಗ್ರೆಸ್ ಸರ್ಕಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮರುಪರೀಕ್ಷೆಯಲ್ಲೂ ಮುಗ್ಗರಿಸಿದ ಎಡವಟ್ಟು ಕಾಂಗ್ರೆಸ್ ಸರ್ಕಾರ! ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ ನಲ್ಲಿ ನಡೆದ
2023-24ನೇ ಸಾಲಿನ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡು ಬಂದ ನಂತರ ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದು ನಿನ್ನೆ ನಡೆಸಲಾದ ಮರುಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಎಡವಟ್ಟುಗಳ ಮೇಲೆ ಎಡವಟ್ಟುಗಳು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

ಭಾಷಾಂತರದಲ್ಲಿ ಲೋಪ ದೋಷ, OMR ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆಗಳಲ್ಲಿ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರುಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ದೂರಿದ್ದಾರೆ.

ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡ್ಡ 2.109 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1.005 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದು, ಆಗಸ್ಟ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52 ರಷ್ಟಿದ್ದ ಹಾಜರಾತಿ, ಮರು ಪರೀಕ್ಷೆಯಲ್ಲಿ ಶೇ.47.7ಕ್ಕೆ ಕುಸಿದಿರುವುದು ಅಭ್ಯರ್ಥಿಗಳು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೇಲೆ, ಕೆಪಿಎಸ್ ಸಿ ಮೇಲೆ ನಂಬಿಕೆ ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಸರ್ಕಾರದ ವಿರುದ್ಧ ಅಶೋಕ್ ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ತಮ್ಮ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೆ ಕೆಪಿಎಸ್ ಸಿ ಪರೀಕ್ಷೆಗಳಲ್ಲಿನ ಪದೇ ಪದೇ ಎಡವಟ್ಟಿಗೆ ಕಾರಣ. ಆಗಸ್ಟ್ ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಗೆ 13.40 ಕೋಟಿ ರೂಪಾಯಿ ವೆಚ್ಚವಾಗಗಿತ್ತು. ಮರುಪರೀಕ್ಷೆಗೂ ಅಷ್ಟೇ ಮೊತ್ತ ಅಥವಾ ಅದಕ್ಕಿಂತ ಹೆಚ್ಚು ಖರ್ಚಾಗಿರುತ್ತದೆ. ಅದರಲ್ಲಿ ಸುಮಾರು 5.3 ಕೋಟಿ ರೂಪಾಯಿ ಪರೀಕ್ಷಾ ಗೋಪ್ಯತೆ ಕಾಪಾಡುವುದಕ್ಕೆ ವೆಚ್ಚ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಇಷ್ಟಾದರೂ ಈ ಪರಿ ಎಡವಟ್ಟುಗಳು ಮರುಕಳಿಸಿದೆ ಎಂದರೆ ಇದಕ್ಕೆ ಯಾರು ಹೊಣೆ? ಸಾರ್ವಜನಿಕರ ತೆರಿಗೆ ಹಣವನ್ನ ಹೀಗೆ ಪೋಲು ಮಾಡುವುದು ಯಾವ ನ್ಯಾಯ? ಒಂದಲ್ಲ, ಹತ್ತು ಬಾರಿ ಮರುಪರೀಕ್ಷೆ ನಡೆಸಿದರೂ ಈ ಎಡವಟ್ಟು ಕಾಂಗ್ರೆಸ್ ಸರ್ಕಾರಕ್ಕೆ ಸರಿಯಾಗಿ ಪರೀಕ್ಷೆ ನಡೆಸಲು ಯೋಗ್ಯತೆ ಇಲ್ಲ ಎನ್ನುವ ಅಭಿಪ್ರಾಯ ಅಭ್ಯರ್ಥಿಗಳಲ್ಲಿ ಈಗಾಗಲೇ ಮೂಡಿದೆ. ಆದ್ದರಿಂದಲೇ ಹಾಜರಾತಿ ಗಣನೀಯವಾಗಿ ಕುಸಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಎಡವಟ್ಟುಗಳಿಗೆ, ಲೋಪ ದೋಷಗಳಿಗೆ ಕಾರಣರಾದ ಪರೀಕ್ಷಾ ನಿಯಂತ್ರಕರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಅದೇ ಹುದ್ದೆಯಲ್ಲಿ ಮುಂದುವರೆಸಿದ್ದೀರಿ. ಕಾರ್ಯದರ್ಶಿಗಳನ್ನು ಮಾತ್ರ ಎತ್ತಂಗಡಿ ಮಾಡಿದ್ದೀರಿ. ತಮ್ಮ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಸ್ವಜನಪಕ್ಷಪಾತ, ಭ್ರಷ್ಟಾಚಾರವೇ ಪದೇ ಪದೇ ಈ ಎಡವಟ್ಟುಗಳು ಮರುಕಳಿಸುತ್ತಿರುವುದಕ್ಕೆ ಮೂಲ ಕಾರಣ ಎಂದು ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಕೆಪಿಎಸ್ಸಿ ಸಂಸ್ಥೆ ಈ ರೀತಿ ನಂಬಿಕೆ ಕಳೆದುಕೊಂಡು, ಹೆಸರು ಕೆಡಸಿಕೊಂಡರೆ ಉತ್ತಮ ಅಭ್ಯರ್ಥಿಗಳನ್ನ, ಪ್ರತಿಭಾವಂತ ಯುವಕರನ್ನ ಸರ್ಕಾರಿ ಸೇವೆಯತ್ತ ಆಕರ್ಷಿಸುವುದು ಹೇಗೆ ಸಾಧ್ಯ? ಆಡಳಿತಕ್ಕೆ ಹೊಸ ರಕ್ತ ಬರದಿದ್ದರೆ ಆಡಳಿತವನ್ನು ಚುರುಕುಗೊಳಿಸುವುದು ಹೇಗೆ? ಯುವ ಜನಾಂಗ ಸಾರ್ವಜನಿಕ ಸೇವೆಗೆ ಬರದಿದ್ದರೆ ಆಡಳಿತಕ್ಕೆ ಹೊಸ ಚೈತನ್ಯ ತುಂಬಲು ಹೇಗೆ ಸಾಧ್ಯ?

 ಸಿಎಂ ಸಿದ್ದರಾಮಯ್ಯನವರೇ, 16 ಸದಸ್ಯರನ್ನು ಒಳಗೊಂಡ ಕೆಪಿಎಸ್ ಸಿ ದೇಶದಲ್ಲೇ ದೊಡ್ಡ ಆಯೋಗವಾಗಿದೆ. ಅವರ ಸಂಬಳ ಸಾರಿಗೆಗೆಂದು ಸರ್ಕಾರ ಕೋಟ್ಯಂತರ ರೂಪಾಯಿ ತೆರಿಗೆ ಹಣ ವ್ಯಯ ಮಾಡುತ್ತದೆ. ಇಷ್ಟಾದರೂ ಒಂದು ಗೊಂದಲಮುಕ್ತ ಪೂರ್ವಭಾವಿ ಪರೀಕ್ಷೆ ನಡೆಸಲು ವಿಫವಾಗುತ್ತದೆ ಎಂದರೆ ಇದನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲೆಬೇಕು. ಲಕ್ಷಾಂತರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಕಷ್ಟು ಹಣ, ಸಮಯ ಸಮರ್ಪಿಸುತ್ತಾರೆ.

ಅನೇಕರು ತಮ್ಮ ಭವಿಷ್ಯವನ್ನೇ ಪಣಕ್ಕಿಟ್ಟು ತಯಾರಿ ನಡೆಸುತ್ತಾರೆ. ಅನೇಕ ಬಡ ಅಭ್ಯರ್ಥಿಗಳು ಸಾಲ-ಸೋಲ ಮಾಡಿ ಕೋಚಿಂಗ್ ಪಡೆಯುತ್ತಾರೆ. ಇಷ್ಟೆಲ್ಲಾ ತನು-ಮನ-ಧನ ಧಾರೆ ಎರೆದು ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳಿಗೆ ಪದೇ ಪದೇ ಈ ರೀತಿ ಗೊಂದಲವಾಗುತ್ತಿದ್ದರೆ ಸರ್ಕಾರ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿತ್ತದೆ.

ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಆಡಳಿತದ ಹಿತದೃಷ್ಟಿಯಿಂದ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ, ಕೆಪಿಎಸ್ಸಿಯಲ್ಲಿ ಆಮೂಲಗ್ರ ಬದಲಾವಣೆ ತರುವ ಮೂಲಕ ಇಡೀ ನೇಮಕಾತಿ ವ್ಯವಸ್ಥೆಗೆ ಹೊಸ ಕಾಯಕಲ್ಪ ನೀಡಲಿ ಎಂದು ಕಾಂಗ್ರೆಸ್ ಸರ್ಕಾರವನ್ನು ಅಭ್ಯರ್ಥಿಗಳ ಪರವಾಗಿ ಅಶೋಕ್ ಆಗ್ರಹಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!