Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಗುತ್ತಿಗೆದಾರರು, ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯತೆಗೆ ಜಿಲ್ಲಾಧಿಕಾರಿ ಕಿಡಿ

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಧುಗಿರಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲಿಸಿದರು.


          ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ ೧೧ ಹಾಗೂ ೧೫ನೇ ವಾರ್ಡಿನಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ೧೧ನೇ ವಾರ್ಡಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕುಡಿಯುವ ನೀರು ಪೋಲಾಗುತ್ತಿದ್ದು, ಯಾವೊಬ್ಬ ಗುತ್ತಿಗೆದಾರರು, ಅಧಿಕಾರಿಗಳೂ ಗಮನಿಸದೇ ಇರುವುದು ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯತೆ ಎದ್ದು ಕಾಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಭಿವೃದ್ಧಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು, ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಬೇಕು. ಕಾಮಗಾರಿ ಸ್ಥಳಕ್ಕೆ ಕೂಡಲೇ ಇಂಜಿನಿಯರ್‌ಗಳನ್ನು ನಿಯೋಜಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ನಿರ್ದೇಶನ ನೀಡಿದರು.

          ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಮೃತ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದ್ದು, ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವಾಗ ನೀರಿನ ಪೈಪ್‌ಲೈನ್‌ಗೆ ಚರಂಡಿ ನೀರು ಮಿಶ್ರಣವಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆಗಾಲವಾಗಿರುವುದರಿಂದ ಮಳೆ ನೀರು ತೆರೆದ ಚರಂಡಿಗೆ ಸೇರಿ ನೀರಿನ ಅರಿವು ಹೆಚ್ಚಾಗಿ   ಕಲುಷಿತ ನೀರು ಕುಡಿಯುವ ನೀರಿನ ಪೈಪ್‌ಲೈನ್‌ಗೆ ಸೇರುವ ಸಾಧ್ಯತೆಯಿರುತ್ತದೆ. ಕಲುಷಿತ ನೀರಿನಿಂದ ನಾಗರಿಕರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಲಿರುವ  ಕಾರಣ  ತಕ್ಷಣವೇ ತೆರೆದ ಚರಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ಪೈಪ್ ಲೈನ್ ಕಾಮಗಾರಿ ಪ್ರಗತಿಗೆ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು   ಸೂಚಿಸಿದರು.

          ಮಧುಗಿರಿ ಪುರಸಭೆಯಿಂದ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಕೆಟ್ಟ ವಾಸನೆಯಿಂದ ಕೂಡಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ.  ಕುಡಿಯುವ ನೀರಿನ ಯಾವುದೇ ಮೂಲಗಳನ್ನು ಕಡ್ಡಾಯವಾಗಿ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಬೇಕು. ಕುಡಿಯಲು ಯೋಗ್ಯವಾದ ನೀರನ್ನು ಮಾತ್ರ ಜನರಿಗೆ ಒದಗಿಸಬೇಕು ಎಂದರಲ್ಲದೆ, ಕಳೆದ ವರ್ಷವಷ್ಟೇ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಸಾವಿನ ಪ್ರಕರಣ ವರದಿಯಾಗಿತ್ತು.  ಮತ್ತೊಮ್ಮೆ ಇಂತಹ ಪ್ರಕರಣಗಳು ಮರುಕಳಿಸದಂತೆ ಅಧಿಕಾರಿಗಳು ಜಾಗ್ರತೆವಹಿಸಬೇಕು ಎಂದು ಸೂಚಿಸಿದರು.

          ನಂತರ ಪಟ್ಟಣದ ರಾಜೀವ್‌ಗಾಂಧಿ ಕ್ರೀಡಾಂಗಣದ ಬಳಿಯಿರುವ ಜೆ.ಎಸ್.ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ಸ್ವಚ್ಛತೆ, ಸಿಬ್ಬಂದಿ ಸಂಖ್ಯಾಬಲವನ್ನು ಪರಿಶೀಲಿಸಿದರು.

ಬಳಿಕ ಕೊರಟಗೆರೆ ಪಟ್ಟಣದ ಹೊರವಲಯದಲ್ಲಿರುವ ಕಾಮೇನಹಳ್ಳಿಗೆ ಭೇಟಿ ನೀಡಿ ಅಮೃತ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಬೇಕು. ಕಲುಷಿತ ನೀರಿನಿಂದ ಜನರ ಆರೋಗ್ಯದಲ್ಲಿ ಏರು-ಪೇರು, ವಾಂತಿ-ಬೇಧಿ, ಸಾವಿನ ಪ್ರಕರಣಗಳು ವರದಿಯಾದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ತಾಕೀತು ಮಾಡಿದರು. 

ನಂತರ ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಪಡೆದಿರುವ ಕೊರಟಗೆರೆ ತಾಲ್ಲೂಕು ಪಾತಗಾನಹಳ್ಳಿಯ ರೈತ ಶ್ರೀನಿವಾಸ್ ಅವರ ಜಮೀನಿಗೆ ಭೇಟಿ ನೀಡಿ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ  ಅವರು ಗಂಗಾ ಕಲ್ಯಾಣ ಯೋಜನೆಯಡಿ ಬಾಕಿಯಿರುವ ಕೊಳವೆಬಾವಿ ಕೊರೆಯುವ, ಈಗಾಗಲೇ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್  ಶಿರಿನ್‌ತಾಜ್, ಕೊರಟಗೆರೆ ತಹಶೀಲ್ದಾರ್  ಮಂಜುನಾಥ್ ಹಾಗೂ ಮತ್ತಿತರ ಅಧಿಕಾರಿ/ಸಿಬ್ಬಂದಿ ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು