E-PAPER
24 Nov 2026, 02:57:58 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ ರಾಜ್ಯಪಾಲ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.


ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೆ, ತಾವೇ ಸಿದ್ಧಪಡಿಸಿದ ಭಾಷಣ ಓದುವ ಮೂಲಕ ಸಂವಿಧಾನಾತ್ಮಕ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ರಾಜ್ಯಪಾಲರ ನಡೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದರು.
ರಾಜ್ಯಪಾಲರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು.


ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯಾ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ 176 ಮತ್ತು 163 ರಂತೆ  ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿ ರಾಮ್ ಜಿ ( ವಿಕಸಿತ ಭಾರತ - ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ.

ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗಿತ್ತು.

ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿಯೇ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಳಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ  ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೆ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ಸಿಎಂ ತಿಳಿಸಿದರು.

ರಾಜ್ಯಪಾಲರು ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು.

ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮನರೇಗಾ ಮರುಸ್ಥಾಪನೆ ಮಾಡುವವರೆಗೆ ನಮ್ಮ ಹೋರಾಟ ನಿರಂತರವಾಗಿರಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ.

ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಕಲಂ 176  ಮತ್ತು 163 ರಂತೆ  ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡು ಬಂದಿರುವ ಪದ್ಧತಿ, ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ.

ಇದನ್ನು ನಮ್ಮ ಪಕ್ಷ  ಮತ್ತು ಸರ್ಕಾರ, ಶಾಸಕರು, ಎಂಎಲ್‌ಸಿ ಗಳು ಪ್ರತಿಭಟನೆ ಮೂಲಕ ವಿರೋಧಿಸುತ್ತೇವೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ.

ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್ ಸಿಗಳಿಗೆ ವಿತರಿಸಲಾಗಿದೆ. ಇದರ ಬಗ್ಗೆ ಚರ್ಚಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!