Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಬಹುನಿರೀಕ್ಷಿತ ಮುಕ್ತ ವಾಣಿಜ್ಯ ಒಪ್ಪಂದ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
'ಎಲ್ಲ ಒಪ್ಪಂದಗಳ ತಾಯಿ' ಎಂದೇ ಕರೆಯಲಾಗುತ್ತಿರುವ ಭಾರತ ಹಾಗೂ ಯುರೋಪಿಯನ್‌ಯೂನಿಯನ್‌ನಡುವೆ ಬಹುನಿರೀಕ್ಷಿತ ಮುಕ್ತ ವಾಣಿಜ್ಯ ಒಪ್ಪಂದ, ವಿಕಸಿತ ಭಾರತ 2047 ಕಡೆಗೆ ರಾಷ್ಟ್ರದ ಮುನ್ನಡೆಗೆ ದೊಡ್ಡ ಶಕ್ತಿ ತುಂಬಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ-ಯುರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಘೋಷಣೆಯು, ಭಾರತದ ಆರ್ಥಿಕತೆಯ ಐತಿಹಾಸಿಕ ಮತ್ತು ಮಹತ್ವಪೂರ್ಣ ಮೈಲಿಗಲ್ಲಾಗಿದೆ.

ಜಾಗತಿಕ ಡಿಜಿಪಿಯ 25% ಮತ್ತು ಜಾಗತಿಕ ವ್ಯಾಪಾರದ ಸುಮಾರು ಮೂರನೇ ಒಂದು ಭಾಗದ ಆರ್ಥಿಕತೆಗಳನ್ನು ಒಳಗೊಂಡಿರುವ ಈ ಬಹುನಿರೀಕ್ಷಿತ ಒಪ್ಪಂದವನ್ನು "ಎಲ್ಲಾ ಒಪ್ಪಂದಗಳ ತಾಯಿ" ಎಂದು ಅನ್ವರ್ಥವಾಗಿ ಕರೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ದೇಶದಲ್ಲಿ ವ್ಯಾಪಾರ, ಹೂಡಿಕೆ, ಉದ್ಯೋಗಗಳು ಮತ್ತು ನಾವೀನ್ಯತೆಗಾಗಿ ಅಭೂತಪೂರ್ವ ಅವಕಾಶಗಳನ್ನು ತೆರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಮಹತ್ವಪೂರ್ಣ ಮುಕ್ತ ವ್ಯಾಪಾರ ಒಪ್ಪಂದದಿಂದ ಭಾರತದ ರಫ್ತು ವಲಯಕ್ಕೆ ಸುಮಾರು 6.4 ಲಕ್ಷ ಕೋಟಿ ರೂ. ಉತ್ತೇಜನ ಸಿಗಲಿದ್ದು, ಇದರಿಂದ ನಮ್ಮ ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ನೇರ ಲಾಭವಾಗಲಿದೆ.

ರಾಜ್ಯದ ಕೈಗಾರಿಕಾ ವಲಯದ ಎಲೆಕ್ಟ್ರಾನಿಕ್ಸ್, ಎಂಜಿನಿಯರಿಂಗ್ ಮತ್ತು ಫಾರ್ಮಾ ರಫ್ತಿಗೆ ವಿಫುಲ ಅವಕಾಶ ದೊರೆಯಲಿದೆ, ಜವಳಿ, ಚರ್ಮ, ಕೃಷಿ ಮತ್ತು ರತ್ನಾಭರಣ ವಲಯಗಳಿಗೆ ಯುರೋಪ್ ಮಾರುಕಟ್ಟೆಯಲ್ಲಿ ಶೂನ್ಯ ಸುಂಕದ ಪ್ರವೇಶ ಸಿಗಲಿದೆ. ಈ ಮೂಲಕ ಪ್ರಮುಖ ಜಾಗತಿಕ ಮಾರುಕಟ್ಟೆಗಳೊಂದಿಗೆ ಭಾರತದ ಏಕೀಕರಣವನ್ನು ಈ ಒಪ್ಪಂದ ಮತ್ತಷ್ಟು ಬಲಪಡಿಸುತ್ತದೆ.

ಇದು ಪ್ರಗತಿಯ ಹಾದಿಯಲ್ಲಿ ಭಾರತದ ಸ್ಥಿರ ಮುನ್ನಡೆಯನ್ನು ಮತ್ತು ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ದೂರದೃಷ್ಟಿಯ ನಾಯಕತ್ವಕ್ಕೆ ನಿದರ್ಶನವಾಗಿದೆ. ಅವರ ನೇತೃತ್ವದಲ್ಲಿ ಭಾರತ ಜಾಗತಿಕ ಆರ್ಥಿಕ ರಂಗದಲ್ಲಿ ನಿರ್ಣಾಯಕ ಸ್ಥಾನ ಪಡೆದಿದ್ದು, ವಿಕಸಿತ ಭಾರತ 2047 ಕಡೆಗೆ ಅತ್ಯಂತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ ಎಂದು ವಿಜಯೇಂದ್ರ ತಿಳಿಸಿದರು.

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ