Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನೀರಾವರಿ ಯೋಜನೆಗಳಿಗೆ 11 ಸಾವಿರ ಕೇಳಿದ ರಾಜ್ಯ ಸರ್ಕಾರ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ರಾಜ್ಯದ ವಿವಿಧ 6 ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಪ್ರಮುಖ ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ 804.66 ಕೋಟಿ ರೂ., ಯುಕೆಪಿಯ ಇಂಡಿ ಶಾಖಾ ಕಾಲುವೆಗೆ 2,666.70 ಕೋಟಿ ರೂ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ 3,000 ಕೋಟಿ ರೂ., ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ 1,444.42 ಕೋಟಿ ರೂ., ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ 1,610 ಕೋಟಿ ರೂ. ಸೇರಿದಂತೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಈ ಪೈಕಿ ಕೇಂದ್ರ ಸರ್ಕಾರ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಆದರೆ, ನಮಗೆ ಇನ್ನು ಅಧಿಕೃತವಾಗಿ ತಿಳಿಸಿಲ್ಲ ಎಂದು ಶಿವಕುಮಾರ್ ಹೇಳಿದರು.

ಕುಡಿಯುವ ನೀರಿನ ಉದ್ದೇಶಕ್ಕಾಗಿ ಎತ್ತಿನಹೊಳೆ ಯೋಜನೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಈ ಯೋಜನೆ ಕಾಮಗಾರಿಯನ್ನು ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು. ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರ ನೀಡಲಾಗಿತ್ತು. ನಂತರ ಅರಣ್ಯ ಇಲಾಖೆಯವರು ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು. ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ ಎಂದು ಡಿಸಿಎಂ ಹೇಳಿದರು.

ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಬೇಕಿತ್ತು, ಆದರೆ ನೀಡಿಲ್ಲ. ಕೇಂದ್ರ ಸಚಿವರನ್ನು ಈಗಾಗಲೇ ಮೂರು ಬಾರಿ ಭೇಟಿ ಮಾಡಲಾಗಿದೆ. ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ. ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು. ಕೇಂದ್ರ ಸಚಿವರು ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.


ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಗೋವಾದವರು ಹೇಳಿದ್ದಾರೆ. ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ಒಂದು ವಾರದಲ್ಲಿ ಇದರ ಬಗ್ಗೆ ಕೇಂದ್ರ ಪರಿಸರ ಸಚಿವರು ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ. ಮುಂದಿನ ಸಂಸತ್ ಅಧಿವೇಶನ ನಡೆಯುವುದರ ಒಳಗಾಗಿ ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಬಿಜೆಪಿ ಸರ್ಕಾರವಿದ್ದ ವೇಳೆ ಕಳಸಾ ಬಂಡೂರಿ ಕಾಮಗಾರಿ ಮಾಡಬಹುದು ಎಂದು ಹೇಳಿದರು. ಈ ಪ್ರಕಾರವಾಗಿ ನಾವು ಟೆಂಡರ್ ಅನ್ನು ಕೂಡ ಕರೆಯಲಾಯಿತು. ಆದರೆ, ಗೋವಾ ಸರ್ಕಾರ 09.01.2023 ರಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ನಮ್ಮ ಅಧಿಕಾರಿಗಳು ತಕ್ಷಣ ಉತ್ತರ ನೀಡಿ ನೀವು ಶೋಕಾಸ್ ನೋಟಿಸ್ ನೀಡಲು ಬರುವುದಿಲ್ಲ ಎಂದು ಹೇಳಿದ್ದಾರೆ. ಈ ವ್ಯಾಜ್ಯ ನ್ಯಾಯಾಲಯದಲ್ಲಿದೆ ಎಂದು ಸಚಿವರು ತಿಳಿಸಿದರು.

ಕೇಂದ್ರ ಸಚಿವರ ಗಮನಕ್ಕೆ ಈ ವಿಚಾರ ತಂದು ಗೋವಾ ಸರ್ಕಾರ ನಮಗೆ ಶೋಕಾಸ್ ನೋಟಿಸ್ ನೀಡಲು ಯಾರು ಎಂದು ಕೇಳಿದ್ದೇನೆ. ನಮ್ಮ ಜಾಗದಲ್ಲಿ ನಾವು ಕಾಮಗಾರಿ ನಡೆಸುತ್ತೇವೆ. ನೀವು ಈ ವಿಚಾರವಾಗಿ ಅವರಿಗೆ ತಿಳಿ ಹೇಳಿ. ಇದರ ಬಗ್ಗೆ ಪ್ರಹ್ಲಾದ್ ಜೋಶಿ ಅವರೂ ಸಹ ಬಂದು ಮಾತನಾಡಿದರು ಎಂದು ಕೇಂದ್ರ ಸಚಿವರು ಹೇಳಿದರು. ಗೋವಾ ತಕರಾರಿನ ಬಗ್ಗೆ ನ್ಯಾಯಲಯದಲ್ಲಿ ಈಗಾಗಲೇ ದಾವೆ ಹೂಡಲಾಗಿದೆ. ಅರಣ್ಯ ಭೂಮಿ ಬಗ್ಗೆ ಕೇಂದ್ರ ಸರ್ಕಾರ ನಮ್ಮ ಬಳಿ ಕೇಳುತ್ತದೆ. ಗೋವಾ ನಮಗೆ ಸೂಚನೆ ನೀಡಲು ಯಾರು ಎಂದು ಡಿಸಿಎಂ ಅವರು ಪುರುಚ್ಚರಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಬೇಕಾದ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಕೇಂದ್ರ ಸರ್ಕಾರದಿಂದ ಪರಿಷ್ಕೃತ ಅಂದಾಜು ಪಟ್ಟಿ ಕೇಳಿದ್ದರು. ಅದನ್ನು ಕೂಡ ಸಲ್ಲಿಸಿದ್ದೇವೆ. ಈ ಹಿಂದೆ ಹೇಳಿದ್ದ 5,300 ಕೋಟಿ ರೂ.ಗಿಂತಲೂ ಹೆಚ್ಚು ಅನುದಾನದ ಪರಿಷ್ಕೃತ ಪಟ್ಟಿ ಕಳುಹಿಸಿದ್ದೇವೆ. ಈಗಾಗಲೇ 10,604 ಕೋಟಿ ರೂ. ಖರ್ಚು ಮಾಡಿದ್ದೇವೆ. ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಹಣ ಸರ್ಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ ಎಂದು ಡಿಸಿಎಂ ಹೇಳಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು