Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭೀಕರ ಉಗ್ರರ ಸಂಚು ಭೇದಿಸಿದ ರಾಜ್ಯ ಪೊಲೀಸರು: ಪ್ರಮುಖ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್‌!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ದೊಡ್ಡ ಮಟ್ಟದ ಅಂತರರಾಷ್ಟ್ರೀಯ ಭಯೋತ್ಪಾದನಾ ಸಂಚೊಂದು ಬಯಲಾಗಿದ್ದು
, ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಹಾಗೂ ಪ್ರಮುಖ ಕೇಂದ್ರದ ಗಣ್ಯರನ್ನು ಟಾರ್ಗೆಟ್ ಮಾಡಲು ಉಗ್ರರು ರೂಪಿಸಿದ್ದ ಕರಾಳ ಯೋಜನೆ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ಪೊಲೀಸರು ಸಿನಿಮೀಯ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.   ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಶಬ್ಬೀರ್ ಹಾಗೂ ಹಾಸನದ ಅರಕಲಗೂಡಿನಲ್ಲಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಸಲಾಮಿನ್ ಬಂಧಿತ ಶಂಕಿತ ಉಗ್ರರು.
ಇವರ ಮೊಬೈಲ್‌ಗಳಲ್ಲಿ ಪತ್ತೆಯಾದ ರಹಸ್ಯ ಚಾಟ್‌ಗಳು ಮತ್ತು ಟೆಲಿಗ್ರಾಂ ಗ್ರೂಪ್‌ಮಾಹಿತಿ ರಾಜ್ಯ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ.

Advertisement

ಉಗ್ರರು ಹೆಣೆದಿದ್ದ ಕರಾಳ ಜಾಲ ಮತ್ತು ಸಂಚಿನ ವಿವರ: ಟೆಲಿಗ್ರಾಂ ರಹಸ್ಯ ಗ್ರೂಪ್‌: ಆರೋಪಿಗಳು ಟೆಲಿಗ್ರಾಂ ಆ್ಯಪ್‌ನಲ್ಲಿ ಪ್ರತ್ಯೇಕ ರಹಸ್ಯ ಗ್ರೂಪ್‌ಗಳನ್ನು ರಚಿಸಿಕೊಂಡು ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಮತ್ತು ಅರಾಜಕತೆ ಸೃಷ್ಟಿಸಲು ನಿರಂತರವಾಗಿ ಚರ್ಚೆ ನಡೆಸುತ್ತಿದ್ದರು.

ಹಣ ಸಂಗ್ರಹಕ್ಕೆ ಕಿಡ್ನಾಪ್‌ಪ್ಲಾನ್: ಭಯೋತ್ಪಾದನಾ ಚಟುವಟಿಕೆಗಳಿಗೆ ಹಾಗೂ ಶಸ್ತ್ರಾಸ್ತ್ರ ಖರೀದಿಗೆ ಹಣಕಾಸು ಹೊಂದಿಸಲು ಶ್ರೀಮಂತರನ್ನು ಅಪಹರಿಸಿ ಕೋಟ್ಯಂತರ ರೂ. ವಸೂಲಿ ಮಾಡಲು ಇವರು ಯೋಜನೆ ರೂಪಿಸಿದ್ದರು.   ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಯಾರಿದ್ದಾರೆ?: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ರಾಜ್ಯದ ಪ್ರಭಾವಿ ನಾಯಕರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಎಂಎಲ್ಸಿ ಸಿ.ಟಿ. ರವಿ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಹತ್ಯೆ ಮಾಡಲು ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಂದಿದೆ.

ಪೊಲೀಸರ ಕಾರ್ಯಾಚರಣೆ ಮತ್ತು ಬಂಧನ:ಶಂಕಿತ ಉಗ್ರ ಶಬ್ಬೀರ್ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಪೋಸ್ಟ್‌ಗಳು ಹಾಗೂ ಚಟುವಟಿಕೆಗಳ ಮೇಲ್ವಿಚಾರಣೆ ಗುಪ್ತಚರ ಇಲಾಖೆಯ ಕಣ್ಣಿಗೆ ಬಿದ್ದಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಶಬ್ಬೀರ್ ಹಾಗೂ ಸಲಾಮಿನ್‌ನನ್ನು ಬಂಧಿಸಿದ್ದಾರೆ.

ಬಂಧಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 113ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈ ಜಾಲದಲ್ಲಿ ಇನ್ನು ಯಾರ್ಯಾರು ಭಾಗಿಯಾಗಿದ್ದಾರೆ ಎಂಬ ಬಗ್ಗೆ ಪೊಲೀಸರು ತೀವ್ರು ವಿಚಾರಣೆ ಹಾಗೂ ತನಿಖೆಯನ್ನು ಮುಂದುವರಿಸಿದ್ದಾರೆ. ಈ ಬೆಳವಣಿಗೆಯು ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಉಗ್ರರ ಹಿಟ್‌ಲಿಸ್ಟ್‌ನಲ್ಲಿರುವ ನಾಯಕರಿಗೆ ಸೂಕ್ತ ಭದ್ರತೆ ನೀಡುವಂತೆ ವಿವಿಧ ನಾಯಕರು ಆಗ್ರಹಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ