E-PAPER
24 Nov 2026, 03:56:13 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಜಾಮೀನು ರದ್ದಿಗೆ ನಿರಾಕರಣೆ, ನೋಟಿಸ್ ಜಾರಿ ಮಾಡಿದ ಸುಪ್ರೀಂ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾದ ನಟ ದರ್ಶನ್
, ಪವಿತ್ರಾ ಗೌಡ ಮತ್ತು ಇತರ ಐವರಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ ಜಾಮೀನನ್ನು ಪ್ರಶ್ನಿಸುವ ರಾಜ್ಯ ಸರ್ಕಾರದ ಮೇಲ್ಮನವಿ ಪರಿಶೀಲಿಸಲು ನ್ಯಾಯಾಲಯ ಒಪ್ಪಿಕೊಂಡಿದ್ದು ಆರೋಪಿತರಿಗೆ ನೋಟಿಸ್ ಜಾರಿ ಮಾಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠದ ಮುಂದೆ ಈ ಪ್ರಕರಣ ಪ್ರಸ್ತಾಪವಾಯಿತು. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್, ಪವಿತ್ರಾ ಗೌಡ, ನಾಗರಾಜು, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೂಷ್​​​ಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಮೇಲ್ಮನವಿ ಇತ್ತೀಚೆಗಷ್ಟೇ ಸಲ್ಲಿಕೆಯಾಗಿತ್ತು.

ಪ್ರಕರಣ ಏನು: ಆಟೋರಿಕ್ಷಾ ಚಾಲಕರಾಗಿದ್ದ 33ರ ರೇಣುಕಾಸ್ವಾಮಿ ಅವರ ಮೃತದೇಹ ಕಳೆದ ವರ್ಷ ಜೂನ್-9ರಂದು ಪತ್ತೆಯಾಗಿತ್ತು. ನಂತರ ದೂರು ದಾಖಲಾಗಿ ಹೆಚ್ಚಿನ ತನಿಖೆ ಮುಂದುವರಿಯಿತು.

ಈ ಪ್ರಕರಣದಲ್ಲಿ ಭಾಗಿಯಾಗಿರೋ ಆರೋಪ ಹೊತ್ತಿರುವ 17 ಮಂದಿ ಆರೋಪಿಗಳಿಗೂ ಜಾಮೀನು ಸಿಕ್ಕಿತ್ತು. ಆದರೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾದ 7 ಆರೋಪಿಗಳ ಜಾಮೀನು ರದ್ದು ಕೋರಿ 1,492 ಪುಟಗಳ ಕಡತವನ್ನ ಸುಪ್ರೀಂ ಕೋರ್ಟ್​​ಗೆ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸಲ್ಲಿಸಿತ್ತು."ಕರ್ನಾಟಕ ರಾಜ್ಯ ಸರ್ಕಾರ ಆರೋಪಿಗಳ ಜಾಮೀನು ರದ್ದಿಗೆ ಕೋರಿದ್ದು, ಆದೇಶದ ಕಾರ್ಯಾಚರಣೆಯನ್ನು ತಡೆಹಿಡಿಯುವುದು ಸೂಕ್ತವಲ್ಲ.

ಏಕೆಂದರೆ, ಅದು ಜಾಮೀನು ರದ್ದಿಗೆ ಸಮಾನವಾಗುತ್ತದೆ" ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸಲ್ಲಿಕೆಯಾಗೋ ಯಾವುದೇ ಜಾಮೀನು ಅರ್ಜಿಯನ್ನು ಅದರ ಅರ್ಹತೆಯ ಮೇಲೆ ನಿರ್ಧರಿಸಲಾಗುತ್ತದೆ ಎಂದು ಸಹ ಸುಪ್ರೀಂ ಕೋರ್ಟ್ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್ 13ರಂದು, ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ನೀಡಿತ್ತು.2024ರ ಜೂನ್​​ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು.

ಜೂನ್ 11ರಂದು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ದರ್ಶನ್ ಅವರನ್ನು ಬಂಧಿಸಲಾಯಿತು. ನಟನ ಗೆಳತಿ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೊದಲು, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.

ಆದರೆ ಅವರು ಇತರ ಕೈದಿಗಳೊಂದಿಗೆ ಆರಾಮಾಗಿ ವಿಶ್ರಾಂತಿ ಪಡೆಯುತ್ತಿದ್ದ ಫೋಟೋ ವೈರಲ್ ಆದ ನಂತರ, ನಟನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು. ವೈದ್ಯಕೀಯ ಕಾರಣಗಳನ್ನು ಆಧರಿಸಿ ಅಕ್ಟೋಬರ್ 30, 2024ರಂದು ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಯಿತು. ನಂತರ, ಡಿಸೆಂಬರ್‌ನಲ್ಲಿ ಹೈಕೋರ್ಟ್ ನಟ ಸೇರಿ ಇತರ ಆರೋಪಿಗಳಿಗೆ ರೆಗ್ಯುಲರ್ ಬೇಲ್​ ಮಂಜೂರು ಮಾಡಿತು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು