Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ..........ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ, ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ.......

 ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ, ಆದರೆ ನಿಜ ಜೀವನದಲ್ಲಿ ಅದೇ ರಾಜಕಾರಣಿಗಳ ಹಿಂಬಾಲಕರಾಗಿರುವಿರಿ.......

ಕಥೆಗಳಲ್ಲಿ ಇಡೀ ಬದುಕನ್ನೇ ಇತರರಿಗಾಗಿ ತ್ಯಾಗ ಮಾಡುವ ಪಾತ್ರಗಳಲ್ಲಿ ನಿಮ್ಮನ್ನೇ ಕಲ್ಪಿಸಿಕೊಳ್ಳುತ್ತೀರಿ, ಆದರೆ ವಾಸ್ತವದಲ್ಲಿ ಎಲ್ಲವೂ ನನಗೇ ಇರಲಿ ಎಂದು ದುರಾಸೆ ಪಡುವಿರಿ.

ಪತ್ರಿಕೆ, ಟಿವಿಗಳಲ್ಲಿ ವೃದ್ದ ತಂದೆ ತಾಯಿಗಳನ್ನು ಅನಾಥಾಶ್ರಮಕ್ಕೆ ಸೇರಿಸಿದ ಮಕ್ಕಳ ವಿಷಯ ಕೇಳಿ ಶಾಪ ಹಾಕುವಿರಿ, ಆದರೆ ನಿಮ್ಮ ಅಮ್ಮ ಅಪ್ಪನಿಗಾಗಿ ವೃದ್ದಾಶ್ರಮ ಹುಡುಕುವಿರಿ.......

ವರದಕ್ಷಿಣೆ ಸಾವುಗಳನ್ನುವ ನೋಡಿ ಆಕ್ರೋಶ ವ್ಯಕ್ತಪಡಿಸುವಿರಿ, ನಿಮ್ಮ ಮಕ್ಕಳ ಮದುವೆಗೆ ಚಿನ್ನ, ಕಾರು ಮನೆ ಬೇಕೆಂದು ಆಸೆ ಪಡುವಿರಿ......

ಬೇರೆ ಶ್ರೀಮಂತ ಸಮಾರಂಭಗಳಲ್ಲಿ ವ್ಯರ್ಥವಾಗುವ ಆಹಾರ ನೋಡಿ ಬೇಸರದಿಂದ ಲೊಚಗುಟ್ಟುವಿರಿ, ನಿಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಅದನ್ನು ಮರೆಯುವಿರಿ.....

ಗುರುಹಿರಿಯರ ಅಮೂಲ್ಯ ಹಿತನುಡಿಗಳನ್ನು ಕೇಳಿ ಚಪ್ಪಾಳೆ ಹೊಡೆಯುವಿರಿ, ನಿಜ ಜೀವನದಲ್ಲಿ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವಿರಿ......

 ಪೋಟೋಗಳಲ್ಲಿ ಸುಂದರ ಪರಿಸರ, ವಾತಾವರಣ ನೋಡಿ ಆನಂದಿಸುವಿರಿ, ನಿಮ್ಮ ಸುತ್ತ ಮುತ್ತ ಕೆಟ್ಟ ವಾತಾವರಣ ಇಟ್ಟುಕೊಂಡಿರುತ್ತೀರಿ......ಆಂತರ್ಯದಲ್ಲಿ ಸ್ವಾರ್ಥಿಗಳಾಗಿರುವ ನಾವು, ಬಹಿರಂಗವಾಗಿ ತ್ಯಾಗ ಜೀವಿಗಳನ್ನು ಕೊಂಡಾಡುತ್ತೇವೆ........

ಮಾತಿಗೂ, ಕೃತಿಗೂ ಅಂತರ ಹೆಚ್ಚಾದಾಗ ಈ ಆತ್ಮವಂಚಕತನ ಬೆಳೆಯುತ್ತದೆ, ಇದಕ್ಕೆ ನಾವ್ಯಾರು ಹೊರತಲ್ಲ, ಆದರೆ ಇದು ಅಪಾಯಕಾರಿ.......ಇದನ್ನು ನಾವು ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನಿಸೋಣ. ನಮ್ಮ ನಡೆಗೂ, ನುಡಿಗೂ ಅಂತರ ಕಡಿಮೆ ಇರಲಿ.......

ಸಾಧ್ಯವಾದಷ್ಟೂ ಹೇಳುವುದನ್ನು ಮಾಡೋಣ - ಮಾಡುವುದನ್ನು ಹೇಳೋಣ. ನಮ್ಮ ಮಕ್ಕಳೂ ಅದನ್ನೇ ಮುಂದುವರಿಸುತ್ತಾರೆ. ಈ ವಿಷಯದಲ್ಲಿ ಈಗಿನಿಂದಲೇ ಬದಲಾಗೋಣ....
ಲೇಖನ-:ವಿವೇಕಾನಂದ. ಎಚ್. ಕೆ. 9663750451

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು