E-PAPER
24 Nov 2026, 03:37:23 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸಂಚಾರಿ ಪೊಲೀಸರು ಅತ್ಯಂತ ಸೂಕ್ಷ್ಮವಾಗಿ ವರ್ತಿಸಬೇಕು-ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ  ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಹಸುಕಂದ ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು ನನ್ನ ಮನಸ್ಸನ್ನು ಕಲಕಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಕುಮಾರಸ್ವಾಮಿ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ ಅತ್ಯಂತ ಸೂಕ್ಷ್ಮವಾಗಿ ವರ್ತಿಸಬೇಕು. ವಾಹನಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ಏಕಾಏಕಿ ರಸ್ತೆಯಲ್ಲಿ ತಡೆದು ನಿಲ್ಲಿಸುವ ಅಥವಾ ಅವರಿಗೆ ಗಾಬರಿ ಉಂಟು ಮಾಡುವ ರೀತಿಯಲ್ಲಿ ವರ್ತಿಸಬಾರದು. ಸ್ವಲ್ಪ ಎಚ್ಚರ ವಹಿಸಿದ್ದಿದ್ದರೆ ಮಗುವಿನ ಸಾವನ್ನು ತಪ್ಪಿಸಬಹುದಿತ್ತು. ಭವಿಷ್ಯದಲ್ಲಿ ಇಂಥ ಅಚಾತುರ್ಯದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.

ಸಾರ್ವಜನಿಕರು ಕೂಡ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಮ್ಮ ಜೀವದ ರಕ್ಷಣೆಗಾಗಿಯೇ ನಿಯಮಗಳನ್ನು ಮೀರಬಾರದು ಎಂಬುದು ನನ್ನ ವಿನಮ್ರ ಮನವಿ. ಈ ನಿಟ್ಟಿನಲ್ಲಿ ಪೊಲೀಸರು ಇನ್ನೂ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕು ಎಂದು ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

ಮೃತಪಟ್ಟ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
ಮಂಡ್ಯ ಸಂಚಾರಿ ಪೊಲೀಸರೇ ಈ ಸಾವು ನ್ಯಾಯವೇ ? ಎಂದು ಪೊಲೀಸ್ ಇಲಾಖೆಯನ್ನು ಅವರು ಪ್ರಶ್ನಿಸಿದ್ದಾರೆ.

ಏನಿದು ಪ್ರಕರಣ-ಮಂಡ್ಯದ ಸ್ವರ್ಣಸಂದ್ರದಲ್ಲಿ ಟ್ರಾಫಿಕ್ ಪೊಲೀಸರ ಬೇಜವಾಬ್ದಾರಿಗೆ 3 ವರ್ಷದ ಮಗು ಬಲಿಯಾಗಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ. ಸಂಚಾರಿ ಪೊಲೀಸರ ಈ ಅಮಾನವೀಯ ವರ್ತನೆ ಖಂಡನೀಯ.

ಹೆಲ್ಮೆಟ್ ಹಾಕಿಲ್ಲ ಎನ್ನುವ ಕಾರಣಕ್ಕೆ ಟ್ರಾಫಿಕ್ ಪೊಲೀಸರು ರಸ್ತೆ ಮಧ್ಯೆ ಅಡ್ಡ ಹಾಕಿದ ಪರಿಣಾಮ ಬೈಕ್ ಸ್ಕಿಡ್ ಆಗಿ ತಂದೆ ತಾಯಿ ಜೊತೆಯಲ್ಲಿ ಪಯಣಿಸುತ್ತಿದ್ದ ಮಗು ರಸ್ತೆಗೆ ಬಿದ್ದು, ತಲೆಗೆ ಪೆಟ್ಟಾಗಿ ಮೃತಪಟ್ಟಿದೆ.
ಈ ಸಾವಿಗೆ ಸಂಚಾರಿ ಪೊಲೀಸರೇ ನೇರ ಹೊಣೆ.  ಕರ್ನಾಟಕ ಡಿಜಿಪಿ ಕೂಡಲೆ ಮೃತ ಮಗುವಿನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್ ಸೇರಿದಂತೆ ಸಾರ್ವಜನಿಕರು
ಆಗ್ರಹಿಸಿದ್ದಾರೆ. 

ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದು ಅಪರಾಧ. ಸಂಚಾರಿ ನಿಯಮ ಉಲ್ಲಂಘಿಸಿದ ಸವಾರರ ಮನೆಗೆ ನೋಟಿಸ್ ನೀಡಿ ದಂಡ ಕಟ್ಟಿಸಿಕೊಳ್ಳಿ. ಅದನ್ನು ಬಿಟ್ಟು ಚಲಿಸುತ್ತಿರುವ ವಾಹನಗಳನ್ನು ತಪಾಸಣೆ ನೆಪದಲ್ಲಿ ಅಡ್ಡ ಹಾಕುವುದು ಸವಾರರ ಜೀವಹಾನಿಯ ಜೊತೆಗೆ ಅಪಘಾತಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಎಚ್ಚರಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು