E-PAPER
23 Nov 2026, 10:08:58 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪ್ರಶಿಕ್ಷಣಾರ್ಥಿಗಳು ವಿವೇಕಾನಂದರ ಸಮಗ್ರ ಕೃತಿಗಳ ಅಧ್ಯಯನ ಮಾಡಬೇಕು: ಡಾ.ಬಸವರಾಜಪ್ಪ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಪ್ರಶಿಕ್ಷಣಾರ್ಥಿಗಳು ಸ್ವಾಮಿ ವಿವೇಕಾನಂದರ ಸಮಗ್ರ ಕೃತಿಗಳನ್ನು ಅಧ್ಯಯನ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಚಳ್ಳಕೆರೆಯ ಬಾಪೂಜಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಬಸವರಾಜಪ್ಪ ಅವರು ಸಲಹೆ ನೀಡಿದರು.


                       ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಶ್ರೀ.ಎನ್.ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗಾಗಿ ಆಯೋಜಿಸಿದ್ದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು "ಸಮರ್ಥ ಶಿಕ್ಷಕ ರಾಷ್ಟ್ರ ರಕ್ಷಕ" ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದರು.


ಭಾರತವನ್ನು ತಿಳಿಯಬೇಕಾದರೆ ನಾವು ಸ್ವಾಮಿ ವಿವೇಕಾನಂದರನ್ನು ಓದಬೇಕು.ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು ಶಿಕ್ಷಕನಾದವನು ಪ್ರತಿನಿತ್ಯ ಕಲಿಯುತ್ತ  ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ತೆಗೆಯಬೇಕು. ಪ್ರಶಿಕ್ಷಣಾರ್ಥಿಗಳು ಡಿ.ವಿ.ಜಿ.ಯವರ ಮಂಕುತಿಮ್ಮನ ಕಗ್ಗ ಸೇರಿದಂತೆ ವ್ಯಕ್ತಿತ್ವವನ್ನು ಅರಳಿಸಿ ಬೆಳೆಸುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದರು.


ಶ್ರೀಶಾರದಾಶ್ರಮದ ಅಧ್ಯಕ್ಷೆ ಮಾತಾಜೀ ತ್ಯಾಗಮಯೀ ಅವರು ಪ್ರಶಿಕ್ಷಣಾರ್ಥಿಗಳಿಗೆ ಧ್ಯಾನಾಭ್ಯಾಸಿ ಮಾಡಿಸಿ ಮಾತನಾಡಿ ಶಿಕ್ಷಕರಾಗುವವರು ಮಾನವತೆಗೆ ಸಂಬಂಧಿಸಿದ "ಶ್ರೀಮದ್ ಭಗವದ್ಗೀತೆ"  ಮತ್ತು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಒಳಗೊಂಡ "ಚೈತನ್ಯ ಚಿಲುಮೆ" ಪುಸ್ತಕವನ್ನು ಓದಬೇಕು.ನೈತಿಕ ಮೌಲ್ಯಗಳನ್ನು ರೂಢಿಸಿಕೊಂಡು ಉತ್ತಮ ಚಾರಿತ್ರ್ಯವಂತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರು.


ತರಗತಿಯ ಕೊನೆಯಲ್ಲಿ ಪುಸ್ತಕ ಮಾರಾಟ ಮತ್ತು ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು‌‌.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ನಾಗೇಶ್
, ಶ್ಯಾಮ್ ಸುಂದರ್,ಅನಿತಾ, ಸಂತೋಷ್, ಅಂಬುಜಾ, ಸಂಧ್ಯಾ, ಅಭಿಷೇಕ್, ವೀರೇಂದ್ರ, ವಿನುತಾ,ಚಂದನ,ಜಯಶ್ರೀ, ಪೂಜಾ, ಅಂಜಲಿ, ವೈಷ್ಣವಿ,ಪಾರ್ವತಿ, ಅಶೋಕ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!