Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೃಷಿ ಸಖಿಯರಿಗೆ ಕೆ. ವಿ. ಕೆ ಯಲ್ಲಿ ತರಬೇತಿ ಶಿಬಿರ ಮುಕ್ತಾಯ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭಾ.ಕೃ.ಸಂ.ಪ - ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಅಭಿಯಾನ ಪ್ರಾಯೋಜನೆ ಇವರ ಸಹಯೋಗದಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿಯರಿಗೆ) - ಕೃಷಿ ಜೀವನೋಪಾಯ'ದ ಬಗ್ಗೆ ಆರು ದಿನಗಳ ತರಬೇತಿ ಕಾರ್ಯಕ್ರಮನ್ನು ದಿನಾಂಕ: 12.5.225 ರಿಂದ 17.5.225.ರವರೆಗೆ ಆಯೋಜಿಸಿಲಾಗಿತ್ತು.

ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಬಿ.ಜಿ. ಹನುಮಂತರಾಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಶ್ರೀ ವಿಠಲ್ ಕಾವಳೆ, ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ಉದ್ಘಾಟನೆಯನ್ನು ನೆರವೇರಿಸಿದರು. ಶ್ರೀಮತಿ ಮಂಜುಳ, ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ಉಪಸ್ಥಿತರಿದ್ದರು. ಈ ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದಲು ಆಯ್ಕೆಯಾದ ೩೩ ಕೃಷಿ ಸಖಿಯರಿಗೆ ಕೃಷಿ ಜೀವನೋಪಾಯದ ಬಗ್ಗೆ ಆರು ದಿನಗಳ ತರಬೇತಿಯನ್ನು ನೀಡಲಾಯಿತು.

 ಮುಖ್ಯಸ್ಥ ಡಾ. ಬಿ.ಜಿ ಹನುಮಂತರಾಯ ತಾಂತ್ರಿಕ ತರಗತಿಯಲ್ಲಿ ಕೃಷಿ ಸಖಿಯರಿಗೆ ನರ್ಸರಿ ನಿರ್ವಹಣೆ ಮತ್ತು ತೋಟಗಾರಿಕಾ ಬೆಳೆಗಳ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಡಾ. ವೆಂಕಟೇಗೌಡ, ಜೆ., ವಿಜ್ಞಾನಿ (ಬೇಸಾಯ ಶಾಸ್ತ್ರ) ರವರು ಮುಂಗಾರಿಗಾಗಿ ಭೂಮಿ ಸಿದ್ಧತೆ, ಬೆಳೆ ಪದ್ಧತಿಗಳು ಮತ್ತು ಬೇಸಾಯ ಕ್ರಮಗಳ ಬಗ್ಗೆ ತಿಳಿಸಿದರು. ಮಣ್ಣು ವಿಜ್ಞಾನಿಯಾದ ಡಾ. ವೀರನಾಗಪ್ಪ ರವರು ಮಣ್ಣು ಆರೋಗ್ಯ ಪತ್ರ ಮತ್ತು ಅಭಿವೃದ್ಧಿ ಇಲಾಖೆಗಳೊಂದಿಗೆ ಸಹಯೋಗದ ಬಗ್ಗೆ ತಿಳಿಸಿಕೊಟ್ಟರು.

ಜೇನು ಕೃಷಿ ವಿಜ್ಞಾನಿಯಾದ ಡಾ. ಜಿ. ಈಶ್ವರಪ್ಪರವರು ಪರಿಸರ ವ್ಯವಸ್ಥೆಯಲ್ಲಿ ಬದಲಾವಣೆ ಬಗ್ಗೆ ವಿವರಿಸಿದರು. ಶ್ರೀಮತಿ ಮೇಘನ, ಎಸ್.ವಿ. ರವರು ಪೌಷ್ಠಿಕ ಕೈತೋಟದ ಮಹತ್ವ ಮತ್ತು ವಿನ್ಯಾಸ ರಚನೆ ಬಗ್ಗೆ ಉಪನ್ಯಾಸ ನೀಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕ ಡಾ. ಶ್ರೀನಿವಾಸ ರೆಡ್ಡಿ ಉಗ್ರಾಣದ ಕೀಟದ ವಿಧಗಳು ಮತ್ತು ನಿರ್ವಹಣೆಯ ಬಗ್ಗೆ ಹಾಗೂ ತರಕಾರಿ ಬೆಳೆಗಳಲ್ಲಿ ಕಂಡು ಬರುವ ಪ್ರಮುಖ ಕೀಟಗಳ ಬಗ್ಗೆ ಮಾಹಿತಿ ನೀಡಿದರು. 

ತರಬೇತಿ ಸಂಯೋಜಕರು ಹಾಗೂ ಕೃಷಿ ವಿಸ್ತರಣಾ ವಿಜ್ಞಾನಿ ಡಾ. ವೈ.ಎಂ.ಗೋಪಾಲ್, ರವರು ತರಬೇತಿಯ ಉದ್ದೇಶ, ಕ್ರಿಯಾ ಯೋಜನಾ ತಯಾರಿ, ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಸುಗಮೀಕರಣ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಹೊಸಕೋಟೆ ತಾಲ್ಲೂಕಿನ ಆಲಪ್ಪನಹಳ್ಳಿ ಗ್ರಾಮದ   ರೈತ ಮನೋಹರ್ ಇದ್ದರು.ಈ ಸಂದರ್ಭದಲ್ಲಿ 33 ಕೃಷಿ ಸಖಿಯರಿಗೆ ಕೃಷಿ ಜೀವನೋಪಾಯದ ಬಗ್ಗೆ ತರಬೇತಿ ನೀಡಲಾಯಿತು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು