ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅತ್ರೇಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ವಿದ್ಯಾರ್ಥಿಗಳ ಶೈಕ್ಷಣಿಕ ಅನಿಶ್ಚಿತೆಯ ಕುರಿತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ದೃಢ ನಿರ್ಧಾರ ಕೈಗೊಂಡು ಆತ್ರೆಯ ಕಾಲೇಜು ವಿದ್ಯಾರ್ಥಿಗಳನ್ನು ಕೌನ್ಸಸಿಲಿಂಗ್ ಮೂಲಕ ಬೇರೆ ಆಯುರ್ವೇದ ವೈದ್ಯಕೀಯ ಕಾಲೇಜಿಗೆ ವರ್ಗಾವಣೆ ಮಾಡುವ ತೀರ್ಮಾನದ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾವೇದಿಕೆ,ಸಂಸ್ಥಾಪಕ ಅಧ್ಯಕ್ಷ ಬಿ. ಎಸ್. ಚಂದ್ರಶೇಖರ್ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು ನಮ್ಮ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಪ್ರಯತ್ನ ವಿದ್ಯಾರ್ಥಿಗಳ ಹೋರಾಟವನ್ನು ಅರಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಅತ್ರೇಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವು ತಮ್ಮ ಆಡಳಿತ್ಮಾಕ, ಆರ್ಥಿಕ ಪರಿಣಾಮ ಮತ್ತು ಕಾನೂನು ನಿಯಮಾನುಸಾರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಕುಂಠಿತವಾಗಿರುವುದರ ಬಗ್ಗೆ ಗಮನಿಸಿ ಈ ನಿರ್ಧಾರ ಕೈಗೊಂಡಿದೆ ಎಂದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಅತ್ರೇಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರು ಮತ್ತು ಪ್ರಾಂಶುಪಾಲರೊಂದಿಗೆ ಚರ್ಚಿಲಾಗಿದೆ ಮತ್ತು ಅನೇಕ ಭಾರಿ ಪತ್ರ ಬರೆದು ಕಾಲೇಜು ಪ್ರಾರಂಬಿಸುವುದರ ಬಗ್ಗೆ ವರದಿ ಪಡೆಯಲಾಗಿದೆ. ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಪತ್ರದಲ್ಲಿ ಕೋರುರುವಂತೆ ಸದರಿ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ಅನಿಶ್ಚಿತೆಯ ಬಗ್ಗೆ ಆಡಳಿತ್ಮಾಕ ಮತ್ತು ಕಾನೂನು ಪ್ರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳನ್ನು ಕೌನ್ಸಸಿಲಿಂಗ್ ಮೂಲಕ ಬೇರೆ ಆಯುರ್ವೇದ ವೈದ್ಯಕೀಯ ಕಾಲೇಜಿಗೆ ವರ್ಗಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ ಎಂದರು.
ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಡೆದ ಹೋರಾಟಕ್ಕಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ನಮ್ಮ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ತಂಡ ಧನ್ಯವಾದಗಳು ಅರ್ಪಿಸುತ್ತದೆ ಎಂದು ತಿಳಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾಯೇಗೌಡ,ತಾಲೂಕು ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಮುಖಂಡರಾದ ಪ್ರಶಾಂತ್, ಪ್ರದೀಪ್ ಹಾಗೂ ಕಾರ್ಯಕರ್ತರು ಹಾಜರಿದ್ದರು.




