Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಕ್ಷಯಕ್ಕೆ ಭಯ ಬೇಡ: ಡಾ.ಪವಿತ್ರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕ್ಷಯ ರೋಗವು ಒಂದು ಸಾಂಕ್ರಾಮಿಕ ರೋಗ. ಪ್ರಾಚೀನ ಕಾಲದಲ್ಲಿ ಸರಿಯಾದ ಚಿಕಿತ್ಸೆ ಇಲ್ಲದ ಕಾರಣ ಸಾರ್ವಜನಿಕರು ಆತಂಕ ಪಡುತ್ತಿದ್ದರು, ಆಧುನಿಕ ಯುಗದಲ್ಲಿ ಕ್ಷಯ ರೋಗಕ್ಕೆ ನಿಗದಿತ ಚಿಕಿತ್ಸೆ ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯ ಇರುವುದರಿಂದ ಕ್ಷಯಕ್ಕೆ ಭಯ ಬೇಡ, ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಿರಿಗೆರೆಯ ಸಮುದಾಯ ಆರೋಗ್ಯ ಕೇಂದ್ರದ ಹೆರಿಗೆ ಮತ್ತು ಸ್ತ್ರೀರೋಗ ತಜ್ಞೆ ಡಾ.ಪವಿತ್ರ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಹಾಗೂ ಜಾನ್ ಮೈನ್ಸ್ ವತಿಯಿಂದ ನಿಕ್ಷಯ ಮಿತ್ರ ಯೋಜನೆ ಅಡಿಯಲ್ಲಿ ಮೈನಿಂಗ್ ವಲಯದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ 34 ಕ್ಷಯ ರೋಗಿಗಳಿಗೆ ಐದನೇ ಮಾಸಿಕ ಪೌಷ್ಟಿಕ ಆಹಾರದ ಕಿಟ್ ವಿತರಣೆ ಮಾಡಿ ಅವರು ಮಾತನಾಡಿದರು.
ಪೌಷ್ಠಿಕ ಆಹಾರದ ಕಿಟ್‍ಗಳಲ್ಲಿ ಕಾರ್ಬೋಹೈಡ್ರೇಟ್ಸ್, ಪ್ರೋಟೀನ್ಸ್ ಮತ್ತು ವಿಟಮಿನ್ಸ್ ಸೇರಿದ ಆಹಾರದ ಧಾನ್ಯಗಳು ಮತ್ತು ಡ್ರೈ ಫ್ರೂಟ್ಸ್‍ಗಳಿದ್ದು ಕ್ಷಯಾ ರೋಗಿಗಳು ಇವುಗಳ ಸದುಪಯೋಗಪಡಿಸಿಕೊಂಡು ಸರಿಯಾದ ಚಿಕಿತ್ಸೆ ಪಡೆದು, ಕುಟುಂಬದ ಇತರರಿಗೆ ಸೋಂಕು, ಹರಡದಂತೆ ಜಾಗ್ರತೆವಹಿಸಿ ರೋಗದಿಂದ ಗುಣಮುಖ ಹೊಂದುವುದರ ಜೊತೆಗೆ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಬೇಕೆಂದರು.

ಎನ್‍ಟಿಇಪಿ ಕಚೇರಿ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಮಹೇಂದ್ರ ಮಾತನಾಡಿ, ತಮ್ಮಗಳ ಗ್ರಾಮಗಳಲ್ಲಿ ಯಾರಿಗಾದರೂ ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಕಫ, ಕಫದಲ್ಲಿ ರಕ್ತ ಬರುವುದು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಇಂತಹ ಲಕ್ಷಣಗಳಿದ್ದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಬೇಕು.

ಕ್ಷಯ ರೋಗ ದೃಢಪಟ್ಟಲ್ಲಿ ಸರ್ಕಾರ ಉಚಿತವಾಗಿ ಕ್ಷಯ ರೋಗಿಯ ಮನೆ ಬಾಗಿಲಿಗೆ ಔಷಧಿ ಒದಗಿಸುತ್ತದೆ. ಜೊತೆಗೆ ಪೌಷ್ಟಿಕ ಆಹಾರ ಸೇವನೆಗಾಗಿ ಡಿಬಿಟಿ ಮುಖಾಂತರ ಚಿಕಿತ್ಸಾ ಅವಧಿಯಲ್ಲಿ ಮಾಸಿಕ ರೂ.1000 ರೋಗಿಯ ಬ್ಯಾಂಕ್ ಖಾತೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಅಥವಾ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದರು. 

ಕಾರ್ಯಕ್ರಮದಲ್ಲಿ ದಾನಿಗಳಾದ ಜಾನ್‍ಮೈನ್ಸ್‍ನ ಉಪ ವ್ಯವಸ್ಥಾಪಕ ಆರ್ ಪ್ರವೀಣ್ ಚಂದ್ರ ಮತ್ತು ಅಜಿತ್ ಕುಮಾರ್ ಮಾಳಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನವೀನ್ ಕುಮಾರ್, ಚಂದ್ರಶೇಖರ್, ಅಜಯ್, ರವಿಕುಮಾರ್, ಇಸ್ಮಾಯಿಲ್, ಸುನಿಲ್ ಕುಮಾರ್, ಆಶಾ ಕಾರ್ಯಕರ್ತೆಯರು ಮತ್ತಿತರರು ಹಾಜರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ