Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪಿಎಂ ಧನ ಧಾನ್ಯ ಕೃಷಿ ಯೋಜನೆಗೆ ತುಮಕೂರು ಜಿಲ್ಲೆ ಸೇರ್ಪಡೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ರೈತರನ್ನು ಸ್ವಾವಲಂಬನೆಗೊಳಿಸಲು ಆರಂಭಿಸಿರುವ ಪಿಎಂ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ರಾಷ್ಟ್ರೀಯ ಯೋಜನೆಯಡಿ ದೇಶದ 100 ಜಿಲ್ಲೆಗಳೊಂದಿಗೆ ತುಮಕೂರು ಜಿಲ್ಲೆಯನ್ನೂ ಆಯ್ಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್‌ಸಿಂಗ್‌ಚೌಹಾಣ್‌ಅವರಿಗೆ ತುಮಕೂರು ಜಿಲ್ಲೆಯ ರೈತರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಮಹತ್ವಾಕಾಂಕ್ಷಿ ಪಿಎಂ ಧನ ಧಾನ್ಯ ಕೃಷಿ ಯೋಜನೆಗೆ ಇದೇ ಅಕ್ಟೋಬರ್ 11ರ ಶನಿವಾರದಂದು ದೆಹಲಿಯಲ್ಲಿ ಜರುಗುವ ಕಾರ್ಯಕ್ರಮದ ಮೂಲಕ ಪ್ರಧಾನಿ  ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ.
ತಿಪಟೂರಿನಲ್ಲಿ ಜರುಗುವ ಈ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ತುಮಕೂರು ಜಿಲ್ಲೆಯ ಸಮಸ್ತ ರೈತ ಬಾಂಧವರು
, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಕೇಂದ್ರ ಸಚಿವರು ಕೋರಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಜಿಲ್ಲೆಯ ರೈತರ ಆದಾಯ ದ್ವಿಗುಣಗೊಳಿಸಲು, ಕೃಷಿ ಬೀಜಗಳು, ರಸಗೊಬ್ಬರ, ಕೃಷಿ ಪರಿಕರಗಳು ಹಾಗೂ ಧಾನ್ಯಗಳ ಸಂಗ್ರಹ, ಮಾರುಕಟ್ಟೆಗೆ ಸಂಬಂಧಿಸಿದಂತೆ ಇನ್ನಿತರೆ ವಿಷಯಗಳಲ್ಲಿ ಅವರ ಬೆಂಬಲಕ್ಕೆ ನಿಲ್ಲಲು ಹಲವು ಕಾರ್ಯಕ್ರಮಗಳನ್ನು ನಮ್ಮ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿದೆ. ಅಲ್ಲದೇ, ಬೇಳೆ ಕಾಳುಗಳ ಬೆಳೆಯಲ್ಲಿ ಆತ್ಮನಿರ್ಭರ ಭಾರತ ಸೃಷ್ಠಿಸಬೇಕೆನ್ನುವ ದೃಷ್ಠಿಯಿಂದ ದ್ವಿದಳ ಧಾನ್ಯಗಳ ರಾಷ್ಟ್ರೀಯ ಯೋಜನೆಯನ್ನೂ ಜಾರಿಗೊಳಿಸಲಾಗುತ್ತಿದೆ ಎಂದು ವಿ ಸೋಮಣ್ಣ ತಿಳಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು