Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

HMT ಕಾರ್ಖಾನೆಯ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
 ದೇಶದ ಪ್ರಗತಿಯಲ್ಲಿ ಸಾರ್ವಜನಿಕ ವಲಯದ ಉದ್ಯಮಗಳ ಪಾತ್ರ ಮಹತ್ವದ್ದಾಗಿದ್ದು
, ಪ್ರಧಾನಿ ನರೇಂದ್ರ ಮೋದಿ ಅವರ 'ಆತ್ಮನಿರ್ಭರ ಭಾರತ' ಮತ್ತು 'ಮೇಕ್ ಇನ್ ಇಂಡಿಯಾ' ಪರಿಕಲ್ಪನೆಯಡಿ 'ವಿಕಸಿತ ಭಾರತ 2047' ಕನಸನ್ನು ಸಾಕಾರಗೊಳಿಸಲು ನಾವು ಅವಿರತವಾಗಿ ಶ್ರಮಿಸುತ್ತಿದ್ದೇವೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

​ಬೆಂಗಳೂರಿನಲ್ಲಿ ಹಿಂದೂಸ್ತಾನ್ ಮಷಿನ್ ಟೂಲ್ಸ್ (HMT) ಕಾರ್ಖಾನೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಅವರು ನಡೆಸಿದರು. ಈ ಸಭೆಯಲ್ಲಿ ಎಚ್‌ಎಂಟಿ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎನ್. ರಮೇಶ್ ಕುಮಾರ್ ಸೇರಿದಂತೆ ಕಂಪನಿಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

​​ಸಮಗ್ರ ಸ್ಥಿತಿಗತಿ ಅವಲೋಕನ: ಕಾರ್ಖಾನೆಯ ಸದ್ಯದ ಕಾರ್ಯಾಚರಣೆ, ಉತ್ಪಾದನಾ ಸಾಮರ್ಥ್ಯ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿಯನ್ನು ಸಚಿವರು ಪಡೆದುಕೊಂಡರು.

​ಭವಿಷ್ಯದ ರೂಪುರೇಷೆ: ಮುಂಬರುವ ದಿನಗಳಲ್ಲಿ ಸಂಸ್ಥೆಯನ್ನು ಮತ್ತಷ್ಟು ಲಾಭದಾಯಕವಾಗಿಸಲು ಮತ್ತು ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಉದ್ಯಮವನ್ನು ವಿಸ್ತರಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.

​ಆತ್ಮನಿರ್ಭರ ಭಾರತಕ್ಕೆ ಒತ್ತು: ದೇಶೀಯ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಜಾಗತಿಕ ಮಟ್ಟದಲ್ಲಿ ಎಚ್‌ಎಂಟಿ ಸಂಸ್ಥೆಯ ಹಿಂದಿನ ಹೆಗ್ಗಳಿಕೆಯನ್ನು ಮರುಕಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ನೀಡಲಾಯಿತು.

​ದೇಶದ ಕೈಗಾರಿಕಾ ರಂಗದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಎಚ್‌ಎಂಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಿ, ಭವಿಷ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಕಾಲದಲ್ಲಿ ಅರ್ಜಿ ವಿಲೇವಾರಿಗೆ ಸಚಿವ ಟಿ.ರಘುಮೂರ್ತಿ ಸೂಚನೆನೆಹರು ಜಯಂತಿ ಹಾಗೂ ಮಕ್ಕಳ ದಿನಾಚರಣೆ ಪೋಸ್ಟರ್ ಬಿಡುಗಡೆನೂತನ ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿಯವರಿಗೆ ಅಭಿನಂದನೆಬೆವಿಕಂ ಉಪ ವಿಭಾಗದ ಘಟಕ -1 ಮತ್ತು 2 ರ ಕಚೇರಿ ಉದ್ಘಾಟಿಸಿದ ಸಚಿವ ರಘುಮೂರ್ತಿಹಾಸನಾಂಬೆಗೆ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ: ಹಣ್ಣು-ಹೂವಿನ ಪ್ರದರ್ಶನ, ಕ್ರೀಡಾಕೂಟಕ್ಕೆ ಚಾಲನೆಹಾಸನಾಂಬಾ ದೇವಾಲಯದ ರಸ್ತೆಗೆ 'ಅಮೀರ್ ಮೊಹಲ್ಲಾ' ಹೆಸರು: ಸರ್ಕಾರದ ಪ್ರವಾಸ ಕಾರ್ಯಕ್ರಮಕ್ಕೆ ಸಿ.ಟಿ. ರವಿ ಆಕ್ಷೇಪಶ್ರೇಯಾ ಎನ್. ಗೌಡ ಸಾಧನೆಗೆ ಡಿ.ಕೆ ಶಿವಕುಮಾರ್ ಅಭಿನಂದನೆ: ಯುಪಿಎಸ್‌ಸಿ NDA ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಶ್ರೇಯಾಂಕಅನ್ನದಾತರಿಗೆ ಮೊದಲ ಕಂತಿನ 2,500 ನೇರ ಖಾತೆಗೆ ಜಮೆ-ಸಿಎಂನವೆಂಬರ್ 13ಕ್ಕೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಬಿಜೆಪಿ ನಾಯಕರ ಪೂರ್ವಭಾವಿ ಸಭೆ ಸಿ.ಎಚ್.ಎನ್ ರಾಮು ರಚಿತ ಪುಸ್ತಕ ಬಿಡುಗಡೆ: ದಲಿತ ಸಮಾಜದ ಹಕ್ಕುಗಳಿಗಾಗಿ ಕರೆ