ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯ ವಸಂತ್ ಕುಂಜ್ನಲ್ಲಿರುವ ಶ್ರೀ ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿ,
ಅಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಉಡುಪಿ ಪೇಜಾವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಭೇಟಿಯಾಗಿ ಭಾವಪೂರ್ಣ ಆಶೀರ್ವಾದ ಪಡೆದುಕೊಂಡರು.
ಶ್ರೀಗಳ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಪರಮಪೂಜ್ಯರ ದಿವ್ಯ ಸಾನ್ನಿಧ್ಯ ಹಾಗೂ ಅನುಗ್ರಹಕ್ಕೆ ಪಾತ್ರನಾಗಿ ಧನ್ಯತಾ ಭಾವ ಮೂಡಿದೆ.
ಶ್ರೀಗಳ ಕಾರುಣ್ಯ ಮತ್ತು ಹಾರೈಕೆ ಸದಾ ಮಾರ್ಗದರ್ಶಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.




