Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿಯಾದ ಬಿಜೆಪಿ ನಾಯಕರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ನಿವಾಸಕ್ಕೆ ಮಂಗಳವಾರ ಬಿಜೆಪಿ ಮುಖಂಡರು ಭೇಟಿ ನೀಡಿ ಚರ್ಚಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ
, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಆಗಮಿಸಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.


ಬೆಳಕಿನ ಹಬ್ಬ ದೀಪಾವಳಿಯ ಶುಭಕೋರಿ ಅವರ ಮತ್ತು ಅವರ ಕುಟುಂಬಕ್ಕೆ ಶ್ರೇಯೋಭಿವೃದ್ಧಿ ಲಭಿಸಲಿ ಎಂದು ಹಾರೈಸಲಾಯಿತು. ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಸದಾ ಕಾಳಜಿ ವಹಿಸುವ ಕುಮಾರಸ್ವಾಮಿ ಯವರು ಭವಿಷ್ಯತ್ತಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ರಾಜ್ಯದಲ್ಲಿ ಉತ್ಪನ್ನ ಹಾಗೂ ಉದ್ಯೋಗ ಕ್ಷೇತ್ರಗಳನ್ನು ಇನ್ನಷ್ಟು ವಿಸ್ತಾರಗೊಳಿಸುವ ಶಕ್ತಿ ಮತ್ತು ಅವಕಾಶಗಳು ಅವರಿಗೆ ದೊರೆಯಲಿ ಎಂಬುದು ನಾಡಿನ ಜನರ ಅಭಿಲಾಷೆಯಾಗಿದೆ.


ಭೇಟಿ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ-ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಿದ್ದೇವೆ ಎಂದು ತಿಳಿಸಿದರು.


ಬಿಜೆಪಿ-ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಮಾಡೋಣ ಹಾಗೂ ರಾಜ್ಯಕ್ಕೆ ಸಂಬಂಧಿಸಿ ಮತ್ತೊಂದು ಸಮನ್ವಯ ಸಮಿತಿ ಮಾಡುವ ಎನ್ನುವ ಸಲಹೆಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದಾರೆ. ಈ ಸಂಬಂಧ 8-10 ದಿನಗಳಲ್ಲಿ ಕುಮಾರಸ್ವಾಮಿಯವರು ಹೆಸರುಗಳನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದರು.


ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು: ರಾಜ್ಯ ಸರ್ಕಾರ, ಸಚಿವರು ಅಹಂಕಾರದಿಂದ ಮೆರೆಯುತ್ತಿದ್ದಾರೆ. ಮೋಹನ್‍ದಾಸ್ ಪೈ, ಕಿರಣ್ ಮಜುಂದಾರ್ ಶಾ ಅವರಂಥ ಹಿರಿಯರು ಬೆಂಗಳೂರಿನ ಬಗ್ಗೆ ಮತ್ತು ರಸ್ತೆಗಳ ಕುರಿತು ಸಲಹೆ ನೀಡಿದರೆ, ಆ ಸಲಹೆಗಳನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಅಂಥ ಹಿರಿಯರನ್ನು ಸ್ವತಃ ಸಚಿವರೇ ನಿಂದಿಸುತ್ತಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.

ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಇದೇ ರೀತಿ ಟೀಕೆ, ಸಲಹೆಗಳು ಬಂದಿದ್ದವು. ಯಡಿಯೂರಪ್ಪ ಅವರು ಮೋಹನ್‍ದಾಸ್ ಪೈ ಅವರನ್ನು ಮನೆಗೆ ಕರೆಸಿಕೊಂಡು ಟೀ ಕುಡಿಸಿ ಅವರ ಸಲಹೆಗಳನ್ನು ಪಡೆದಿದ್ದರಲ್ಲದೆ ಅವರು ನೀಡಿದ್ದ ಟೀಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡಿದ್ದರು ಎಂದರು.



ವಾಲ್ಮೀಕಿ ನಿಗಮದ ಹಗರಣ ಮರೆತು ಹೋಯಿತೇ?:
ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆಯೇ ಎಂದು ಜನರು ದೂರುತ್ತಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಯಾವ ರೀತಿ ಚರ್ಚೆ ನಡೆಯುತ್ತಿದೆ
?. ಮೊನ್ನೆ ದಿನ ನಮ್ಮ ಸಂಸದ ರಾಘವೇಂದ್ರ ಅವರು ಇಲ್ಲಿ ಹಣ ಸಂಗ್ರಹಿಸಿ ಬಿಹಾರ ಚುನಾವಣೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಚಿವರಾದಿಯಾಗಿ ಎಲ್ಲರೂ ಸಾಕ್ಷಿ ಕೊಡಿ ಎಂದು ಕೇಳಿದ್ದಾರೆ. ಯಾಕೆ ಸ್ವಾಮೀ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮರೆತು ಹೋಯಿತೇ ಎಂದು ಪ್ರಶ್ನಿಸಿದರು.


ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹಣವನ್ನು ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿ ಸಾವಿರಾರು ಬೇನಾಮಿ ಖಾತೆ ತೆರೆದು ಹಣ ಪಡೆದು ಚಿನ್ನ ಖರೀದಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲೂ ಬಳಸಲಾಗಿತ್ತು. ಇದನ್ನು ಜಾರಿ ನಿರ್ದೇಶನಾಲಯವು (ಇ.ಡಿ) ನೇರವಾಗಿ ಹೇಳಿದೆ. ಬೃಹತ್ ನೀರಾವರಿ, ನೀರಾವರಿ ಇಲಾಖೆಯಲ್ಲಿ ಶೇ. 60, 70ರಷ್ಟು ಕಮೀಷನ್ ಕೇಳುವ ಕುರಿತು ಗುತ್ತಿಗೆದಾರರ ಸಂಘವು ಪತ್ರ ಬರೆದಿದೆ. ಅಧಿಕೃತ ದೂರು ನೀಡಲಿ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಅಧಿಕೃತ ಪತ್ರ ಬರೆದಿರುವಾಗ ಇನ್ಯಾವ ದೂರು ಬೇಕೆಂದು ಕೇಳಿದರು.

ರಾಜ್ಯದಲ್ಲಿ ಮರಳು ಮಾಫಿಯ ನಡೆಯತ್ತಿದೆ ಎಂದು ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರಕ್ಕೆ ಇದರಿಂದ 400- 500 ಕೋಟಿ ನಷ್ಟವಾಗುತ್ತಿದೆ ಎಂದಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ ಎಂದು ಪ್ರಶ್ನಿಸಿದರು.

ಇಸ್ಪೀಟ್, ಒಸಿ ಮಟ್ಕಾ ದಂಧೆ: ಶಿವಮೊಗ್ಗ ಜಿಲ್ಲೆ ಸೇರಿ ಅನೇಕ ಜಿಲ್ಲೆಗಳಲ್ಲಿ ಇಸ್ಪೀಟ್, ಒಸಿ ಮಟ್ಕಾ ದಂಧೆ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗಳು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಇವು ನಡೆಯುತ್ತಿವೆ. ಎಷ್ಟೋ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬೇರೆ ರಾಜ್ಯಕ್ಕೆ ತೆರಳಿದಾಗ ಇಲ್ಲಿನ ಗ್ಯಾರಂಟಿ ದೇಶಕ್ಕೇ ಮಾದರಿ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಾರೆ. ನಿಮ್ಮ ಸರ್ಕಾರದ ಗ್ಯಾರಂಟಿಗಳು ರೋಲ್ ಮಾಡೆಲ್ ಅಲ್ಲ, ಉಡಾಫೆ ಮಾತುಗಳನ್ನು ಬಿಡಿ. ರಾಜ್ಯವನ್ನು ಕೊಳ್ಳೆ ಹೊಡೆಯುವುದನ್ನು ನಾವು, ಜನತೆ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವೆಲ್ಲವುಗಳ ವಿರುದ್ಧ ಎರಡೂ ಪಕ್ಷಗಳು ಹೋರಾಟ ಮಾಡುವ ಬಗ್ಗೆ ನಿರ್ಧರಿಸಲಿದ್ದೇವೆ ಎಂದು ತಿಳಿಸಿದರು.

ಸಿಎಂ ಕುರ್ಚಿಗೆ ಟವೆಲ್: ಚಿತ್ತಾಪುರದ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಿಯಾಂಕ್ ಖರ್ಗೆಯವರಿಗೆ ಯಾಕೆ ಈ ರೀತಿ ದುರ್ಬುದ್ಧಿ ಬಂತೆಂದು ಗೊತ್ತಿಲ್ಲ. ಅನಾವಶ್ಯಕವಾಗಿ ಆರ್​ಎಸ್​ಎಸ್​ ಬಗ್ಗೆ ಟೀಕಿಸುವುದು ಸರಿಯಲ್ಲ. ಇದು ಪ್ರಚಾರ ಗಿಟ್ಟಿಸಿಕೊಳ್ಳುವ ತಂತ್ರವೋ ಅಥವಾ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕುವ ತಂತ್ರವೋ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದಂತೆ ಪ್ರಿಯಾಂಕ್ ಖರ್ಗೆಯವರು ಇವತ್ತು ಈ ವಿಚಾರದಲ್ಲಿ ಏಕಾಂಗಿಯಾಗಿದ್ದಾರೆ. ಆಡಳಿತ ಪಕ್ಷದ ವೈಫಲ್ಯ ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಈ ರೀತಿ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ. ನ.2ರಂದು ಚಿತ್ತಾಪುರದಲ್ಲಿ ಯಶಸ್ವಿಯಾಗಿ ಪಥಸಂಚಲನ ಆಗಲಿದೆ. ಆ ವಿಷಯದಲ್ಲಿ ಗೊಂದಲವಿಲ್ಲ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಹಿರಿಯ ಶಾಸಕರಾದ ಎಂ.ಕೃಷ್ಣಪ್ಪ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಕೆ, ಮಾಜಿ ಶಾಸಕ ಕೃಷ್ಣಾ ರೆಡ್ಡಿ, ಎ.‌ಮಂಜುನಾಥ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಕೃಷ್ಣಾ ರೆಡ್ಡಿ, ಮಂಜುನಾಥ್ ಅವರು ಉಪಸ್ಥಿತರಿದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು