E-PAPER
24 Nov 2026, 02:29:01 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಷ್ಟ್ರೀಯ ಪ್ರಶಸ್ತಿ ಗಳಿಸಿದ ಎತ್ತಿನಹೊಳೆ ಯೋಜನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ! 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಪ್ರತಿಷ್ಠಿತ ಐಐಎನ್ ಪ್ಲಾಟಿನಂ - 2025 ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ ಎಂದು ಡಿಸಿಎಂ, ಜಲಸಂಪನ್ಮೂಲ ಇಲಾಖೆ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.


ಕರ್ನಾಟಕದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಈ 7 ಜಿಲ್ಲೆಗಳ ನೀರಿನ ಬವಣೆಯನ್ನು ನೀಗಿಸಲಿರುವ ಯೋಜನೆಗೆ ಈ ಪುರಸ್ಕಾರ ಲಭಿಸಿರುವುದು ಕರ್ನಾಟಕದ ಅಭಿವೃದ್ಧಿ ಮಾದರಿಗೆ ಸಿಕ್ಕ ಮನ್ನಣೆಯಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ.


ಏನಿದು ಯೋಜನೆ-
ಪಶ್ವಿಮಾಭಿಮುಖವಾಗಿ ಹರಿಯುವ ನದಿಗಳಿಂದ ವಾರ್ಷಿಕ ೨೪.೦೧ ಟಿ.ಎಂ.ಸಿ ಪ್ರವಾಹದ ನೀರನ್ನು ಸಕಲೇಶಪುರದಿಂದ ರಾಜ್ಯದ ಪೂರ್ವಭಾಗಕ್ಕೆ ತಿರುಗಿಸಿ
,   ಕುಡಿಯುವ ನೀರಿನ ತೀವ್ರ ಆಭಾವ ಎದುರಿಸುತ್ತಿರುವ ರಾಜ್ಯದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವ ಹಾಗೂ ಅಂತರ್ಜಲ ಮರುಪೂರಣಕ್ಕಾಗಿ ಈ ಭಾಗಗಳಲ್ಲಿನ ಸುಮಾರು ೫೨೭ ಸಣ್ಣ ನೀರಾವರಿ ಕೆರೆಗಳಿಗೆ ಅವುಗಳ ಸಾಮರ್ಥ್ಯದ ಶೇ ೫೦% ರಷ್ಟು ನೀರು ತುಂಬಿಸುವ ಉದ್ದೇಶಿತ ಮಹತ್ವದ ಎತ್ತಿನಹೊಳೆ ಯೋಜನೆ ಇದಾಗಿದೆ.


ರಾಜ್ಯ ಸರ್ಕಾರವು 2014ರ ಫೆಬ್ರವರಿ 17 ರಂದು ಪರಿಷ್ಕೃತ ಯೋಜನಾ ವರದಿಗೆ ೧೨,೯೧೨.೩೬ ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಈ ಯೋಜನೆಯನ್ನು ಎರಡು ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!