Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಚಂದ್ರವಳ್ಳಿ ನ್ಯೂಸ್, ಮುಂಬೈ(ಮಹಾರಾಷ್ಟ್ರ):
ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ(89) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.

ಧರ್ಮೇಂದ್ರ ಅವರ ನಿಧನದ ಸುದ್ದಿಯನ್ನು ಮೂಲಗಳು ದೃಢಪಡಿಸಿವೆ. ಕುಟುಂಬಸ್ಥರಿಂದ ಇನ್ನೂ ಯಾವುದೇ ಹೇಳಿಕೆ ಬಂದಿಲ್ಲ. ನಟನ ನಿವಾಸ ಮತ್ತು ಸ್ಮಶಾನದ ಬಳಿ ಸೆಲೆಬ್ರಿಟಿಗಳು ಬಂದು ಸೇರುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಅವರನ್ನು ರೆಗ್ಯುಲರ್​ ಚೆಕ್​ ಅಪ್​ಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ವೆಂಟಿಲೇಟರ್​ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಆ ಕಠಿಣ ಸಂದರ್ಭ ಪತ್ನಿ ಹೇಮಾ ಮಾಲಿನಿ, ಪುತ್ರರಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್ ಸೇರಿದಂತೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ನಂತರ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲು ಕುಟುಂಬ ನಿರ್ಧರಿಸಿತು. ಅದರಂತೆ ಅವರನ್ನು ನವೆಂಬರ್​ 12ರಂದು ಡಿಸ್ಚಾರ್ಜ್​ ಮಾಡಿಸಿ ಮನೆಗೆ ಕರೆದೊಯ್ಯಲಾಗಿತ್ತು.

ನಿವಾಸದಲ್ಲೇ ಸಂಪೂರ್ಣ ಚಿಕಿತ್ಸೆ ನಡೆಯುತ್ತಿತ್ತು.ಹಿರಿಯ ನಟನ ನಿಧನ ಸಿನಿಮಾ ಜಗತ್ತಿಗೆ ಮತ್ತು ದೇಶಾದ್ಯಂತದ ಅಭಿಮಾನಿಗಳಿಗೆ ತೀವ್ರ ದುಃಖ ಉಂಟುಮಾಡಿದೆ. ಸೋಷಿಯಲ್​ ಮೀಡಿಯಾದಲ್ಲಿ ತೀವ್ರ ಸಂತಾಪ ವ್ಯಕ್ತವಾಗುತ್ತಿದೆ.

ಧರ್ಮೇಂದ್ರ ನಡೆದು ಬಂದ ದಾರಿ:
ಧರ್ಮೇಂದ್ರ ಅವರು
1935ರಲ್ಲಿ ಪಂಜಾಬ್‌ನಲ್ಲಿ ಜನಿಸಿದರು. 1960ರಲ್ಲಿ ದಿಲ್ ಭಿ ತೇರಾ ಹಮ್ ಭಿ ತೇರೆ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ಹಿಂದಿ ಚಿತ್ರರಂಗದಲ್ಲಿ ಅತ್ಯಂತ ಪ್ರೀತಿಪಾತ್ರ ಮತ್ತು ಬಹುಮುಖ ತಾರೆಯಾಗಿ ಸ್ಥಾನಮಾನ ಗಿಟ್ಟಿಸಿಕೊಂಡರು.

ಆ್ಯಕ್ಷನ್, ರೊಮ್ಯಾನ್ಸ್, ಕಾಮಿಡಿ ಸೇರಿ ಎಲ್ಲಾ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಧರ್ಮೇಂದ್ರ ಕೊನೆಯ ಬಾರಿಗೆ 2024ರಲ್ಲಿ 'ತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾ' ಚಿತ್ರದಲ್ಲಿ ಕಾಣಿಸಿಕೊಂಡರು. ಈ ಚಿತ್ರದಲ್ಲಿ ನಟರಾದ ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಹಿರಿಯ ನಟ ಮುಂದೆ ಖ್ಯಾತ ನಿರ್ದೇಶಕ ಶ್ರೀರಾಮ್ ರಾಘವನ್ ನಿರ್ದೇಶನದ 'ಇಕ್ಕಿಸ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದರು. ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳಿವೆ ಅನ್ನೋ ಸಂದರ್ಭದಲ್ಲಿ ನಟ ಇಹಲೋಕ ತ್ಯಜಿಸಿದ್ದಾರೆ. 1960ರ ದಶಕದಲ್ಲಿ ರೊಮ್ಯಾಂಟಿಂಕ್​​ ಫಿಲ್ಮ್​​ ಆಯೇ ದಿನ್ ಬಾಹರ್ ಕೆ ಮತ್ತು ಆಯೇ ಮಿಲನ್ ಕಿ ಬೇಲಾದಿಂದ ಹಿಡಿದು ಆ್ಯಕ್ಷನ್ - ಪ್ಯಾಕ್ಡ್ ಫೂಲ್ ಔರ್ ಪತ್ತರ್ ವರೆಗೆ, ಧರ್ಮೇಂದ್ರ ಸತತ ಬಾಕ್ಸ್ ಆಫೀಸ್‌ಹಿಟ್‌ಗಳನ್ನು ನೀಡಿದ್ದಾರೆ.

 1970 ಮತ್ತು 1980ರ ದಶಕದಲ್ಲಿ ಶೋಲೆ, ಸೀತಾ ಔರ್ ಗೀತಾ, ರಾಜಾ ಜಾನಿ, ಚುಪ್ಕೆ ಚುಪ್ಕೆ, ಪ್ರತಿಗ್ಯ, ಜುಗ್ನು ಮತ್ತು ಧರಮ್ ವೀರ್​ನಂತಹ ಚಿತ್ರಗಳಲ್ಲಿನ ಅಮೋಘ ಅಭಿನಯದೊಂದಿಗೆ ಜನಮನ ಸೆಳೆದರು. ಶೋಲೆಯಲ್ಲಿನ ವೀರು ಪಾತ್ರವು ಬಾಲಿವುಡ್ ಸಿನಿಮಾ ಇತಿಹಾಸದಲ್ಲಿ ಇದುವರೆಗೆ ನಿರ್ವಹಿಸಿದ ಅತ್ಯಂತ ಅಪ್ರತಿಮ ಪಾತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ಶ್ರೇಷ್ಠ, ಅತ್ಯಂತ ಸುಂದರ ಮತ್ತು ಕಮರ್ಷಿಯಲ್​ ಆಗಿಯೂ ಅತ್ಯಂತ ಯಶಸ್ವಿ ಸಿನಿಮಾ ನಟರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ಧರ್ಮೇಂದ್ರ, 6 ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದರು.

300ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿ ಭಾರತೀಯರ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.ಹಿಂದಿ ಚಿತ್ರರಂಗದ ಅತಿ ಹೆಚ್ಚು ಹಿಟ್ ಚಿತ್ರಗಳಲ್ಲಿ ನಟಿಸಿದ ದಾಖಲೆ ಧರ್ಮೇಂದ್ರ ಅವರ ಹೆಸರಿನಲ್ಲಿದೆ. 2012ರಲ್ಲಿ ಅವರಿಗೆ ಪ್ರತಿಷ್ಠಿತ 'ಪದ್ಮಭೂಷಣ' ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು