Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಶಿಷ್ಟಾಚಾರ ಉಲ್ಲಂಘನೆ-ಕಾಂಗ್ರೆಸ್ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರಪೊಲೀಸ್‌ ಠಾಣೆ
, ಡಿ ವೈ. ಎಸ್‌ ಪಿ ಕಚೇರಿ ಮುಂಭಾಗ ನೇಕಾರ ಮಳಿಗೆ ಕಾಮಗಾರಿ ಶಂಕುಸ್ಥಾಪನೆ ಸಮಯದಲ್ಲಿ ಶಾಸಕ ಧೀರಜ್ ಮುನಿರಾಜ್‌  ಶಿಷ್ಟಾಚಾರ ಪಾಲನೆ ಮಾಡಿಲ್ಲವೆಂದು ಆರೋಪಿಸಿ ಶಾಸಕ ದೀರಜ್ ಮುನಿರಾಜು ವಿರುದ್ಧ ಕಾಂಗ್ರೆಸ್ ನಾಯಕರು ಮಾಜಿ ಶಾಸಕ ಟಿ. ವೆಂಕಟರಮಣಯ್ಯ  ನೇತೃತ್ವದಲ್ಲಿ ಪ್ರವಾಸಿ ಮಂದಿರ ವೃತ್ತದಲ್ಲಿ  ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. 

ಈ ಸಂದರ್ಭದಲ್ಲಿ ಪೋಲಿಸರು ಹಾಗೂ ಹೋರಾಟಗಾರರು ಮಧ್ಯೆ ಮಾತಿನಚಕಮಕಿ ಈ ಸಮಯದಲ್ಲಿ ಹೋರಾಟಗಾರರು ಹಾಗೂ ಪೋಲಿಸರು ಕೆಲ ಕಾಲ ತಳ್ಳಾಟ ನೂಕಾಟ ನಡೆಯಿತು.

ನಂತರ ಕೆಲ ಕಾಲ ಟಿ ಬಿ ವೃತ್ತದಲ್ಲಿ ಶಾಸಕ ಧೀರಜ್ ಮುನಿರಾಜು ವಿರುದ್ಧ  ಘೋಷಣೆ ಕೂಗುವ ಮೂಲಕ ರಸ್ತೆ ತಡೆ ಮೂಲಕ ಧರಣಿ ನಡೆಸಿದರು.

ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ  ನೇಕಾರರ ಮಳಿಗೆ ಕಾಮಗಾರಿಗೆ ಶಂಕುಸ್ಥಾಪನೆಯನ್ನು   ಶಾಸಕ ಧೀರಜ್ ಮುನಿರಾಜ್ ನೆರವೇರಿಸಲು ಮುಂದಾಗಿದ್ದಾರೆ.

ಆದರೆ ಈ ವಿಚಾರದಲ್ಲಿ ಶಾಸಕ ಶೀಷ್ಠಾಚಾರ  ಪಾಲನೆ ಮಾಡದೆ ಶಂಕುಸ್ಥಾಪನೆ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ವಿಚಾರದಲ್ಲಿ ಶಾಸಕರು ಸ್ಥಳೀಯ ಜನಪ್ರತಿನಿದಿಗಳನ್ನು ಕಡೆಗಣಿಸಿದ್ದಾರೆ. ಸರ್ಕಾರದ ಅನುದಾನದಲ್ಲಿ ಕಾಮಗಾರಿ ಶಂಕು ಸ್ಥಾಪನೆ ಸಂದರ್ಭದಲ್ಲಿ ಬಿಜೆಪಿ ಪಕ್ಷದವರನ್ನು ಮಾತ್ರ ಆಹ್ವಾನಿಸಿ ಬೇರೆ ಪಕ್ಷದ ಜನಪ್ರತಿನಿದಿಗಳನ್ನು ಆಹ್ವಾನಿಸುವ ಕನಿಷ್ಠ ಸೌಜನ್ಯವನ್ನು ಶಾಸಕರು ತೋರುತ್ತಿಲ್ಲ. ನಾನು ಎರಡು ಬಾರಿ ಶಾಸಕನಾಗಿದ್ದಾಗ ಯಾವುದೇ ಕಾಮಗಾರಿ ಶಂಕುಸ್ಥಾಪನೆ ಸಮಯದಲ್ಲಿ ಪಕ್ಷತೀತವಾಗಿ ಎಲ್ಲರನ್ನು ಆಹ್ವಾನಿಸುತ್ತಿದ್ದೆ. ಆದರೆ ಶಾಸಕರು ಬಿಜೆಪಿ ಪಕ್ಷದಕಾರ್ಯಕ್ರಮ ಎಂಬಂತೆ ನಡೆದುಕೊಳ್ಳುತ್ತಿರುವುದು ಕಂಡನಿಯ ಎಂದರು. 

 ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಅವರು ಮಾತನಾಡಿ ಶಿಷ್ಟಾಚಾರ ಪಾಲನೆ ಮಾಡದೇ ಕಾಂಗ್ರೆಸ್ ಜನಪ್ರತಿನಿದಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡು ಕನಿಷ್ಟ ಸೌಜನ್ಯ ಸಹ  ಶಾಸಕ ಧೀರಜ್ ಮುನಿರಾಜು ಮಾಡುತ್ತಿಲ್ಲ. ಇದು ಸರ್ಕಾರಿ ಅನುದಾನದ ಕಾಮಗಾರಿ ಬಿಜೆಪಿ ಪಕ್ಷದ ಕಾರ್ಯಕ್ರಮವಲ್ಲವೆಂದು ಅವರು ಅರಿಯ ಬೇಕಿದೆ.

ಈ ವಿಚಾರವಾಗಿ ಶಾಂತಿಯುತ ಹೋರಾಟಕ್ಕೂ ಸಹ ಪೋಲಿಸರು ಅವಕಾಶ ನೀಡುತ್ತಿಲ್ಲ  ಎಂದು ಆರೋಪಿಸಿದರು. ಅಂತಿಮವಾಗಿ ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗರಾಜ್ ಹಾಗೂ ಡಿವೈಎಸ್ಪಿ ಪಾಂಡುರಂಗ ಎಸ್.ರವರ ನೇತೃತ್ವದಲ್ಲಿ  ಮಾತುಕತೆ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು