Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಬೇಸಿಗೆ ಸುಡು ಬಿಸಿಲು, ಜೀವನ ಶೈಲಿ, ಆಹಾರ ವಿಹಾರಗಳ ಮಾಹಿತಿಗಾಗಿ ಆಯುಷ್ ಚಿಕಿತ್ಸಾಲಯಗಳಿಗೆ ಭೇಟಿ ನೀಡಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೇಸಿಗೆ ಕಾಲ ತೀವ್ರವಾಗುತ್ತಿದ್ದು, ವಾತಾವರಣದ ಉಷ್ಣಾಂಶ ಏರುತ್ತಲಿದೆ. ಆದ ಕಾರಣ ಸಾರ್ವಜನಿಕರು ಬಿಸಿಲಿನ ತಾಪದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಜತೆಗೆ ಬೇಸಿಗೆ ಎದುರಿಸಲು ಆಯುಷ್ ಉಪಾಯಗಳನ್ನು ಅಳವಡಿಸಿಕೊಂಡು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಸಲಹೆ ನೀಡಿದ್ದಾರೆ.

ವಿಶೇಷವಾಗಿ ಹಿರಿಯ ನಾಗರೀಕರು, ಮಕ್ಕಳು ತೀವ್ರ ಬಿಸಿಲಿನಿನ ತಾಪಕ್ಕೆ ಬರಬಾರದು. ಬಿಸಿಲಿನ ತಾಪದಿಂದ ಚರ್ಮ ಕಪ್ಪಾಗುವುದು, ಅಲರ್ಜಿ, ತುಟಿ ಒಣಗುವುದು, ಮೂಗಿನಲ್ಲಿ ರಕ್ತಸ್ರಾವ, ದೇಹದ ಉಷ್ಣಾಂಶದಲ್ಲಿ ಏರಿಕೆ, ಸುಸ್ತು, ತಲೆಸುತ್ತುವುದು, ಎಲೆಕ್ಟ್ರೋಲೈಟ್ಗಳಲ್ಲಿ ಏರುಪೇರಿನಂತಹ ಲಕ್ಷಣಗಳು ಕಂಡುಬರುತ್ತವೆ.  ನೀರಿನ ಮೂಲದಿಂದ ಹರಡುವ ಸಾಂಕ್ರಾಮಿಕ ರೋಗಗಳೂ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಇವುಗಳನ್ನು ತಡೆಗಟ್ಟಲು ಸಾರ್ವಜನಿಕರು ವಿಶೇಷ ಜಾಗ್ರತೆ ವಹಿಸಬೇಕು.

ತೀವ್ರ ಬಿಸಿಲಿದ್ದಾಗ ಮನೆಯಿಂದ ಹೊರಗಡೆ ಹೋಗಬೇಡಿ, ಅವಶ್ಯಕ ಕೆಲಸಗಳನ್ನು ಬಿಸಿಲು ಹೆಚ್ಚಾಗುವ ಮೊದಲೇ ಪೂರೈಸಿಕೊಳ್ಳಿ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ನೆರಳನ್ನು ಆಶ್ರಯಿಸಿ. ಹತ್ತಿಯ ಬಟ್ಟೆಗಳನ್ನೇ ಧರಿಸಿ, ಮೇಲಿಂದ ಮೇಲೆ ನೀರನ್ನು ಕುಡಿಯುತ್ತಿರಿ. ಮನೆಯಿಂದ ಹೊರಡುವಾಗ ಕಡ್ಡಾಯವಾಗಿ ಮನೆಯ ಶುದ್ಧನೀರನ್ನು ಜೊತೆಗೆ ತೆಗೆದುಕೊಂಡು ಹೋಗಿ, ತಂಪು ಪಾನೀಯ ಐಸ್ ಕ್ರೀಮ್ ನಂತಹ ಕೃತಕ ತಂಪು ವಸ್ತುಗಳಿಗಿಂತ ನೈಸರ್ಗಿಕವಾದ ಹಣ್ಣಿನ ರಸ, ಕಬ್ಬಿನಹಾಲು, ಎಳನೀರು ಹಾಗೂ ಶರಬತ್ತುಗಳನ್ನು ಸೇವಿಸಿ, ಇವುಗಳಿಂದ ದೇಹಕ್ಕೆ ಪೋಷಕಾಂಶವು ದೊರೆಯುತ್ತದೆ ಹಾಗೂ ದೇಹಕ್ಕೂ ತಂಪು. ಕೃತಕ ತಂಪು ಪದಾರ್ಥಗಳಲ್ಲಿ ಸಕ್ಕರೆ ಅಂಶ ಹಾಗೂ ಇತರೆ ರಾಸಾಯನಿಕಗಳು ಹೆಚ್ಚಿನ ಪ್ರಮಾಣದಲ್ಲಿದ್ದು, ಅವು ಆರೋಗ್ಯಕ್ಕೆ ಹಾನಿಯನ್ನುಂಟು ಮಾಡಬಹುದು.

ಮಸಾಲೆ ಹೆಚ್ಚಾಗಿರುವ ಪದಾರ್ಥಗಳನ್ನು ಸೇವಿಸಬೇಡಿ. ಹಸಿ ಸೊಪ್ಪು ತರಕಾರಿಗಳನ್ನು ಹೆಚ್ಚು ಬಳಸಿ, ನೀರಿನ ಅಂಶ ಹೆಚ್ಚಾಗಿರುವ ಸೌತೆಕಾಯಿ, ಕ್ಯಾರೆಟ್ನಂತಹ ಪದಾರ್ಥಗಳನ್ನು ಹೆಚ್ಚು ಬಳಸಿ. ಮನೆಯಿಂದ ಹೊರಗೆ ಹೋಗುವಾಗ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಅವಶ್ಯವಿರುವ ಛತ್ರಿ, ತಂಪು ಕನ್ನಡಕ, ವಸ್ತ್ರಗಳನ್ನು ತೆಗೆದುಕೊಂಡು ಹೋಗಿ. ಶ್ರಮದಾಯಕ ಕೆಲಸಗಳನ್ನು ತೀವ್ರ ಬಿಸಿಲ ತಾಪವಿದ್ದಾಗ ಮಾಡಬಾರದು. ಇವೆಲ್ಲಾ ಮುಂಜಾಗ್ರತೆ ಕ್ರಮಗಳನ್ನು ವಹಿಸಿ ಆರೋಗ್ಯ  ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಕರೆ ನೀಡಿದ್ದಾರೆ.

ಬಿಸಿಲಿನಿಂದ ರಕ್ಷಣೆ, ಬೇಸಿಗೆ ಕಾಲದಲ್ಲಿ ಅನುಸರಿಸಬೇಕಾದ ಜೀವನಶೈಲಿ, ಆಹಾರ ವಿಹಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆಯುಷ್ ಚಿಕಿತ್ಸಾಲಯಗಳಿಗೆ ಭೇಟಿ ನೀಡಬಹುದಾಗಿದೆ.
ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದು ತೀವ್ರ ಕಳವಳಕಾರಿ, ಸಾರ್ವಜನಿಕರು ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ ಬೇಸಿಗೆಕಾಲದ ಕಾಯಿಲೆಗಳು ಹಾಗೂ ಉಷ್ಣ ಹವಾಮಾನದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಹಾಗೂ ವಾತಾವರಣದ ಉಷ್ಣತೆಯನ್ನು ತಗ್ಗಿಸಲು ಈಗಿನಿಂದಲೇ ಎಷ್ಟು ಸಾಧ್ಯವೂ ಅಷ್ಟು ಗಿಡಮರಗಳನ್ನು ಬೆಳೆಸಲು ಮುಂದಾಗಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಮನವಿ ಮಾಡಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ