Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ- ವಿಭಾಗೀಯ ಪೀಠ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ  ಡಾ.ಕೆ..ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.

ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾದೀಶರು

ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.

ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು.

ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ,

ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು