Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.

ಕರಾವಳಿಯ ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆಯನ್ನು, ಪ್ರಗತಿಯನ್ನು, ತಮ್ಮ ಕೀಳು ರಾಜಕೀಯದ ಕಾಮಾಲೆ ಕಣ್ಣಿನಿಂದ ನೋಡದೆ, ವಾಸ್ತವ ನೆಲೆಗಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೋಡಲಿ. ಕರಾವಳಿಗೆ ಕೋಮುವಾದದ ಹಣೆಪಟ್ಟಿ ಹಚ್ಚುವ ಅವರ ವ್ಯರ್ಥ ಪ್ರಯತ್ನ ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ.

ಕರಾವಳಿ ಕರ್ನಾಟಕ ತನ್ನ ಸ್ವಂತ ಶಕ್ತಿಯಿಂದ, ಐಟಿ-ಬಿಟಿ ಸೇರಿದಂತೆ ಶಿಕ್ಷಣ, ಬ್ಯಾಂಕಿಂಗ್ ಮತ್ತು ಉದ್ಯಮ ರಂಗದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಅಂತಹ ನಮ್ಮ ಹೆಮ್ಮೆಯ ಕರಾವಳಿ ಜಿಲ್ಲೆಗಳ ಕುರಿತು, ಅನಗತ್ಯವಾಗಿ ಬಂಡವಾಳ ಹೂಡಿಕೆದಾರರನ್ನು ಹೆದರಿಸುವ ಕೆಲಸವನ್ನು ಸ್ವತಃ ರಾಜ್ಯ ಸರ್ಕಾರದ ಐಟಿ-ಬಿಟಿ ಸಚಿವರೇ ಮಾಡುತ್ತಿರುವುದು ದುರದೃಷ್ಟಕರ. ರಾಜ್ಯದ ಹಿತ ಕಾಯಬೇಕಾದ ಸಚಿವರು, ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸುವ ಮೂಲಕ ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿರುವುದು, ಕರಾವಳಿಯ ಜನರಿಗೆ ಮಾಡುತ್ತಿರುವ ಅವಮಾನವಷ್ಟೇ ಅಲ್ಲ, ತಮ್ಮ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಸ್ಕೃತಿಯ ವ್ಯವಸ್ಥಿತ ಸಂಚು ಎಂದು ವಿಜಯೇಂದ್ರ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ನಿಮ್ಮ ಘನ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್ ಸಮಿತಿ ವರದಿಯೇ ನಿಮ್ಮ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು 'ಅತೀ ಹಿಂದುಳಿದ' ಪಟ್ಟಿಯಲ್ಲಿದ್ದರೆ, ಕರಾವಳಿಯು ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಿಕೊಂಡಿದೆ. ನಿಮ್ಮ ತವರು ಜಿಲ್ಲೆಯ ಯುವಕ ಯುವತಿಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ವಿಫಲವಾಗಿರುವ ನೀವು, ಕರಾವಳಿಯ ಜನರ ಉದ್ಯಮಶೀಲತೆಯನ್ನು ಅವಮಾನಿಸುವುದು ನಿಮ್ಮ ರಾಜಕೀಯ ಅಸಮರ್ಥತೆಯನ್ನು, ಅಸಹಾಯಕತೆಯನ್ನು ಮತ್ತು ದುರಂತ ವೈಫಲ್ಯವನ್ನು ತೋರಿಸುತ್ತದೆ. ಮೊದಲು ನಿಮ್ಮ ಭಾಗದ ಅಭಿವೃದ್ಧಿಯತ್ತ ತುರ್ತು ಗಮನಹರಿಸಿ, ನಂತರ ಕರಾವಳಿಯ ಬಗ್ಗೆ ಮಾತನಾಡಿ ಎಂದು ಅವರು ತಾಕೀತು ಮಾಡಿದ್ದಾರೆ.

ಮುಖ್ಯವಾಗಿ, ಕಳೆದ ಆರು ದಶಕಗಳಿಂದ ಮಾನ್ಯ ಸಚಿವರ ಕುಟುಂಬದ ಭದ್ರಕೋಟೆಯಾಗಿರುವ ಕಲಬುರಗಿಯ ಸ್ಥಿತಿಯನ್ನೊಮ್ಮೆ ನೋಡಿ ನಂತರ ಕರಾವಳಿ ಬಗ್ಗೆ ಮಾತನಾಡಿ. ಸತತವಾಗಿ ಒಂದಿಲ್ಲೊಂದು ಅಧಿಕಾರವನ್ನು ನಿಮ್ಮ ಕುಟುಂಬಕ್ಕೆ ಜನರು ನೀಡಿದರೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಚಿವ ಸ್ಥಾನಗಳು, ಸಂಸದರು, ಶಾಸಕರು ಎಲ್ಲವೂ ಆಗಿದ್ದರೂ, ಕಲಬುರಗಿಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದವರು, ಕರಾವಳಿಯನ್ನು ಟೀಕಿಸುತಿರುವುದು ಹಾಸ್ಯಾಸ್ಪದ.

ಕಲಬುರಗಿ ಇಂದಿಗೂ ಯಾಕೆ ಹಿಂದುಳಿದಿದೆ, ನಿಮ್ಮನ್ನು ನಂಬಿದ ಜನರನ್ನು ಇನ್ನೂ ಹಿಂದುಳಿಯಲು ಬಿಟ್ಟಿದ್ದು ಯಾಕೆ ಎನ್ನುವುದನ್ನು ಮೊದಲು ಹೇಳಿ. ಅಲ್ಲಿ ಯಾಕೆ ಐಟಿ ಬಿಟಿ ಬಂಡವಾಳ ಹಾಕುವಂತೆ ಮಾಡುವುದು ತಮಗೆ ಸಾಧ್ಯವಾಗಿಲ್ಲ? ಮೊದಲು ಅದರ ಬಗ್ಗೆ ಮಾತನಾಡಿ. ನಿಮ್ಮ ತವರು ಜಿಲ್ಲೆಯ ಯುವಕರು ಉದ್ಯೋಗಕ್ಕಾಗಿ ಇಂದಿಗೂ ಪರದಾಡುತ್ತಿದ್ದಾರೆ, ಕುಡಿಯುವ ನೀರಿಗೂ ಹಾಹಾಕಾರವಿದೆ. ಮೊದಲು ನಿಮ್ಮ ಮನೆಯಂಗಳದ ಕತ್ತಲೆಯನ್ನು ಹೋಗಲಾಡಿಸಿ, ನಂತರ ಬೆಳಗುತ್ತಿರುವ ಕರಾವಳಿಯ ಬಗ್ಗೆ ಮಾತನಾಡಿ.

ಕರಾವಳಿಯ ಶಕ್ತಿ ಅಲ್ಲಿನ ಧರ್ಮ ಮತ್ತು ಕರ್ಮದ ಸಮನ್ವಯತೆ. ಸುಮ್ಮನೆ ಅದನ್ನು ಕೆಣಕುವ ಬದಲು, ನಿಮ್ಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸಿ ಎಂದು ವಿಜಯೇಂದ್ರ ಅವರು ಕಿವಿ ಮಾತು ಹೇಳಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು