Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಆಶಾಕಿರಣ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆ ಪ್ರಶಂಸೆ-ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಯೋವೃದ್ಧರು, ಬಡಜನರು ಸೇರಿದಂತೆ ಜನಸಾಮಾನ್ಯರ ಕಣ್ಣಿನ ಸುರಕ್ಷತೆಯ ಕಾಳಜಿ ವಹಿಸುವ ಸಲುವಾಗಿ ನಮ್ಮ ಸರ್ಕಾರವು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದ ಆಶಾಕಿರಣ ಯೋಜನೆಯ ಮಹತ್ವವನ್ನು ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೇ ಪ್ರಶಂಸಿಸಿದ್ದು ಹೆಮ್ಮೆಯ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ದೃಷ್ಟಿ ಪರೀಕ್ಷೆ ಮಾಡುವುದು, ದೃಷ್ಟಿದೋಷ ಹೊಂದಿದವರಿಗೆ ಉಚಿತ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಮಾಡುವುದು ಸೇರಿದಂತೆ ಸಾರ್ವಜನಿಕರ ಕಣ್ಣಿನ ಆರೈಕೆ ಮಾಡುವ ಉದ್ದೇಶದ ಈ ಯೋಜನೆಯು ಸಮಾಜದಲ್ಲಿ ಧನಾತ್ಮಕ ಬದಲಾವಣೆಗೆ ಕಾರಣವಾಗಿದೆ ಎಂದು ಸಿಎಂ ಅಭಿಪ್ರಾಯಪಟ್ಟರು.

ಈ ವರೆಗೆ ಒಟ್ಟು 1.40 ಕೋಟಿ ಜನರನ್ನು ನೇತ್ರ ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಲ್ಲಿ 24.50 ಲಕ್ಷ ಜನರಲ್ಲಿ ದೃಷ್ಟಿದೋಷ, ಇನ್ನಿತರೆ ನೇತ್ರದ ತೊಂದರೆಗಳನ್ನು ಪತ್ತೆ ಮಾಡಿ ಉಚಿತ ಚಿಕಿತ್ಸೆ ಒದಗಿಸಲಾಗಿದೆ. 4.30 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 1.05 ಲಕ್ಷ ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಇಂದಿನಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 393 ಆಶಾ ದೃಷ್ಟಿಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಇವುಗಳ ಮೂಲಕವೂ ಸೇವೆಯನ್ನು ಒದಗಿಸಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಜನಪರ ಸರ್ಕಾರವೊಂದರ ಕಾರ್ಯಕ್ರಮಗಳು ಹೇಗಿರಬೇಕು ಎಂಬುದಕ್ಕೆ ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ನಮ್ಮ ಹಲವು ಕಾರ್ಯಕ್ರಮಗಳಿಗೆ ಜಾಗತಿಕ ಮನ್ನಣೆ ದೊರಕುತ್ತಿರುವುದು ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ