E-PAPER
24 Nov 2026, 05:04:13 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಐಪಿಎಸ್ ಅಧಿಕಾರಿಗೆ ಯುವ ಕಾಂಗ್ರೆಸ್ ಅಧ್ಯಕ್ಷನ ದುಂಡಾವರ್ತನೆ: ಬಿ.ವೈ. ವಿಜಯೇಂದ್ರ

​ ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉನ್ನತ ಹುದ್ದೆಯಲ್ಲಿರುವ ಐಪಿಎಸ್ ಅಧಿಕಾರಿ ಅವರೊಂದಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹಾಗೂ ಕಾರ್ಯಕರ್ತರು ತೋರಿರುವ ದುಂಡಾವರ್ತನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
, ಕಾನೂನು ಕೈಗೆತ್ತಿಕೊಂಡವರನ್ನು ತಕ್ಷಣವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. 

​ಕಾಂಗ್ರೆಸ್ ಪಕ್ಷದ ನಾಯಕರ ನಡವಳಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ವಿಜಯೇಂದ್ರ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪ್ರಶ್ನೆಗಳನ್ನು ಎಸೆದಿದ್ದಾರೆ. 

​​ಕಾಂಗ್ರೆಸ್ ಹಿರಿಯರ 'ಗುಂಡಾಗಿರಿ' ಚಾಳಿ: "ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ ಎಂಬ ಗಾದೆಯಂತೆ, ಕಾಂಗ್ರೆಸ್ ಹಿರಿಯ ನಾಯಕರ ಗುಂಡಾಗಿರಿ ನಡವಳಿಕೆ ಈಗ ಯುವ ಕಾಂಗ್ರೆಸ್ ಕಾರ್ಯಕರ್ತರಿಗೂ ಅಂಟಿಕೊಂಡಿದೆ" ಎಂದು ವಿಜಯೇಂದ್ರ ಸಾಗರಾವಾದ ಸವಾಲು ಹಾಕಿದ್ದಾರೆ. 

​ಐಪಿಎಸ್ ಅಧಿಕಾರಿಗೆ ಅನಾಹುತಕಾರಿ ವರ್ತನೆ: "ನ್ಯಾಯಕ್ಕಾಗಿ ನಾವು ನಡೆಸಿದ ಹೋರಾಟವನ್ನು 'ಗುಂಡಾಗಿರಿ' ಎಂದು ಜರೆದಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮದೇ ಪಕ್ಷದ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾರ್ಯಕರ್ತರು ಉನ್ನತ ಐಪಿಎಸ್ ಅಧಿಕಾರಿಯ ಜೊತೆ ನಡೆದುಕೊಂಡ ರೀತಿಯನ್ನು ಕಣ್ಣುಬಿಟ್ಟು ನೋಡಲಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

​ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಪ್ರಶ್ನೆ: "ದಿನಬೆಳಗಾದರೆ ಸಂವಿಧಾನ ಹಾಗೂ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಣ್ಣೆದುರೇ ಡಿಸಿಪಿ ಮೇಲೆ ದುಂಡಾವರ್ತನೆ ತೋರಿದ ತಮ್ಮ ಪಕ್ಷದ ಅಧ್ಯಕ್ಷ ಹಾಗೂ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದು ಯಾವಾಗ?" ಎಂದು ಪ್ರಶ್ನಿಸಿದ್ದಾರೆ. 

​ಬಂಧನಕ್ಕೆ ಹಾಗೂ ಲಾಠಿ ರುಚಿಗೆ ಆಗ್ರಹ: ಬಿಜೆಪಿ ಕಚೇರಿಗೆ ಅನಧಿಕೃತವಾಗಿ ನುಗ್ಗಿ ರೌಡಿಗಳಂತೆ ವರ್ತಿಸಿದವರಿಗೆ ರಾಜಾತಿಥ್ಯ ನೀಡದೆ ತಕ್ಷಣವೇ ಒದ್ದು ಒಳಗೆ ಹಾಕಿ ಲಾಠಿ ರುಚಿ ತೋರಿಸಬೇಕು. ತಪ್ಪಿತಸ್ಥರಿಗೆ 'ನಮ್ಮದೇ ಸರ್ಕಾರ' ಎನ್ನುವ ಧೈರ್ಯ ಮತ್ತು ಅಭಯ ಹಸ್ತ ಇದೆಯೆಂಬ ಭ್ರಮೆ ತೊಲಗಬೇಕು. 

​ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಈ ಹಂತದಲ್ಲೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಈ ಚಾಳಿಯನ್ನು ರಾಜ್ಯವ್ಯಾಪಿ ವಿಸ್ತರಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!