ಸ್ವಾಮೀಜಿ, ಶಾಸಕರು, ರೈತರ ವಿರುದ್ಧದ ಕೇಸ್‌ ದಾಖಲು ಬೇಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲೆಯಲ್ಲಿ ನಡೆದ ಹೇಮಾವತಿ ಲಿಂಕ್ ಕೆನಾಲ್ ಹೋರಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹೋರಾಟಗಾರರು, ಜನಪ್ರತಿನಿಧಿಗಳು ಮತ್ತು ಹೋರಾಟದಲ್ಲಿ ಭಾಗಿಯಾಗಿದ್ದ ವಿವಿಧ ಮಠಗಳ ಸ್ವಾಮೀಜಿಗಳ ಮೇಲೆ ಕೇಸ್‌ ದಾಖಲಿಸಲು ಹೊರಟಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭಂಡತನಕ್ಕೆ ಸಾಕ್ಷಿ ಎಂದು ಬಿಜೆಪಿ ದೂರಿದೆ.

- Advertisement - 

ಸರ್ಕಾರ ಕೂಡಲೇ ಸರ್ವ ಪಕ್ಷಗಳ ಸಭೆ ಕರೆದು ಜಿಲ್ಲೆಗಳ ಜನಪ್ರತಿನಿಧಿಗಳು, ಹೋರಾಟಗಾರರು ಹಾಗೂ ರೈತ ಮುಖಂಡರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಲಿಂಕ್ ಕೆನಾಲ್ ಕುರಿತು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ಹಾಗೂ ಹೋರಾಟಗಾರರ ಮೇಲೆ‌ ಕೇಸ್ ದಾಖಲಿಸಲು ಹೊರಟಿರುವುದನ್ನು ಈ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ತಾಕೀತು ಮಾಡಿದೆ.

- Advertisement - 

 

- Advertisement - 
Share This Article
error: Content is protected !!
";