ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳವಿಲ್ಲ-ಸಚಿವ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

- Advertisement - 

ಈ ಸಂಬಂಧ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳು ಶುಲ್ಕ ಹೆಚ್ಚಳಕ್ಕೆ ಸಭೆಯಲ್ಲಿ ಕೋರಿಕೊಂಡಿದ್ದರು ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

- Advertisement - 

ಖಾಸಗಿ ವೈದ್ಯಕೀಯ ಮತ್ತು ದಂತ ಕಾಲೇಜುಗಳು ಶೇ.10 ರಿಂದ ಶೇ.15ರವರೆಗೆ ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ, ರಾಜ್ಯ ಸರ್ಕಾರದ ಕಳೆದ ವರ್ಷ ಶೇ.10ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ, ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಸಚಿವ ಶರಣ್‌ಪ್ರಕಾಶ್‌ಪಾಟೀಲ್‌ ಪ್ರತಿಕ್ರಿಯೆ ನೀಡಿ ಮಾತನಾಡಿ, ಈ ವರ್ಷ ಯಾವುದೇ ಹೆಚ್ಚಳವಿಲ್ಲ. ಕಳೆದ ವರ್ಷ ಶೇ.10 ರಷ್ಟು ಶುಲ್ಕ ಹೆಚ್ಚಳವಾಗಿತ್ತು. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

- Advertisement - 

 

 

 

Share This Article
error: Content is protected !!
";