ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಗ್ಯತೆ ಇರುವುದು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ “ಯೋಗ ಮತ್ತು ಯೋಗ್ಯತೆ” ಇರುವುದು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ.

- Advertisement - 

 ಕಾವೇರಿ ಬಹುತೇಕ ಎಲ್ಲಾ ಹಂತಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರ, 5ನೇ ಹಂತದ ಯೋಜನೆ ಮೂಲಕ ರಾಜಧಾನಿಯ 50 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸುತ್ತಿದೆ.

- Advertisement - 

ಭವಿಷ್ಯದ ದೃಷ್ಟಿಯಿಂದ 6ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಡಿಪಿಆರ್ ಸಿದ್ಧ ಪಡಿಸಲಾಗಿದೆ.

6ನೇ ಹಂತದ ಯೋಜನೆಯಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಲಭ್ಯವಿರುವ 2.50 ಟಿಎಂಸಿ ನೀರನ್ನು ಬಳಸಿಕೊಳ್ಳಲು ಮುಂದಾಗಿದೆ.

- Advertisement - 

ದೂರದೃಷ್ಟಿ ಯೋಜನೆ, ಜನರ ಹಿತಕ್ಕೆ ಕಟಿಬದ್ಧವಾಗಿರುವ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಇಂತಹ ಯೋಜನೆಗಳು ಜಾರಿಯಾಗಲು ಸಾಧ್ಯ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿಳಿಸಿದೆ.

 

Share This Article
error: Content is protected !!
";