ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ವಿರೋಧ ಪಕ್ಷದ ಶಾಸಕರಿರಲಿ, ಆಡಳಿತ ಪಕ್ಷದ ಶಾಸಕರೂ ಅನುದಾನಕ್ಕಾಗಿ ಬಡಿದಾಡಬೇಕಾದ ದುಸ್ಥಿತಿ ಬಂದೊದಗಿರುವುದು ದುರ್ದೈವದ ಸಂಗತಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2024-25 ರ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗಾಗಿ 2,468 ಕಾಮಗಾರಿಗಳಿಗೆ 121.40 ಕೋಟಿ ರೂ. ಅನುಮೋದನೆಯಾಗಿದೆ ಆದರೆ ಖರ್ಚಾಗಿರುವ ಮೊತ್ತ ಮಾತ್ರ ಕೇವಲ 2.49 ಕೋಟಿ ರೂಗಳು ಮಾತ್ರ ಕೆಲವೆಡೆ
ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಕೆಯಾದರೂ ಕ್ರಿಯಾ ಯೋಜನೆಗಳಿಗೆ ಅನುಮತಿ ದೊರೆತಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೆಸರೇಳಿಕೊಂಡು ಕರ್ನಾಟಕದ ಅಭಿವೃದ್ಧಿಗೆ ಎಳ್ಳುನೀರು ಬಿಟ್ಟ ಈ ಜನವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.