ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರಾಜ್ಯದ ಪಾಲಿಕೆಗಳ ಬಂದ್ಗೆ ಕರೆ ನೀಡಿರುವ ಮೇರೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಕೆಲಸಕ್ಕೆ ರಜೆ ಹಾಕಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಗ್ಗೆಯೇ ಎಂಟು ಬಸ್ಗಳಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾ ನಗರಪಾಲಿಕೆಯ ಎಇ, ಎಇಇ, ಜೆಇ, ಆರೋಗ್ಯ ನಿರೀಕ್ಷಕರು, ಕಂದಾಯ ಪರಿಶೀಲಕರು ಸೇರಿ 340ಕ್ಕೂ ಹೆಚ್ಚು ಸಿಬ್ಬಂದಿ ಸಾಮೂಹಿಕ ರಜೆ ಹಾಕಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ಕುಳಿತಿದ್ದಾರೆ. ಏಳನೇ ವೇತನ ಆಯೋಗ ಜಾರಿ ಮಾಡಿದ ಸರ್ಕಾರ, ಆ ಆಯೋಗದ ಹಣವನ್ನು ಪಾಲಿಕೆ ಸಿಬ್ಬಂದಿಗೆ ನೀಡಲು ನಿರಾಕರಣೆ ಮಾಡಿದ್ದಕ್ಕಾಗಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಸಿಬ್ಬಂದಿ ಹಾಗೂ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು ತಿಳಿಸಿದರು.ಎಲ್ಲಾ ಸಿಬ್ಬಂದಿ ಬೆಂಗಳೂರಿಗೆ ತೆರಳಿದ್ದರಿಂದ ಪಾಲಿಕೆಯಲ್ಲಿ ಒಂದು ದಿನ ಆಡಳಿತ ಯಂತ್ರ ಸ್ಥಗಿತವಾಗಿದೆ.