ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರಿ ನಿವೃತ್ತ ನೌಕರರ ಚಿತ್ರದುರ್ಗ ಜಿಲ್ಲಾ ಸಂಘ ವತಿಯಿಂದ ಜೂನ್ 01ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಪಿಳ್ಳೆಕೇರನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 50ರ ಕನಕ ನಗರದ 5ನೇ ಕ್ರಾಸ್‍ನಲ್ಲಿರುವ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ಕಚೇರಿಯಲ್ಲಿ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆಯ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ಆಡಳಿತಾಧಿಕಾರಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಭಾಗವಹಿಸುವರು.
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9481181569 ಗೆ ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಪಿ.ಪ್ರೇಮನಾಥ್ ತಿಳಿಸಿದ್ದಾರೆ.