ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕೇಂದ್ರದಲ್ಲಿ ಮಹನೀಯರ ಜಯಂತಿ ಆಚರಣೆ ಸಂಬಂಧ ಇದೇ ಡಿ.20ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಡಿ.29ರಂದು ವಿಶ್ವಮಾನವ ದಿನಾಚರಣೆ ಆಚರಿಸುವ ಕುರಿತಂತೆ ಡಿ.20ರಂದು ಮಧ್ಯಾಹ್ನ 12ಕ್ಕೆ ಪೂರ್ವಭಾವಿ ಸಭೆ ಹಾಗೂ 2025ರ ಜನವರಿ 01ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸುವ ಸಂಬಂಧ ಡಿ.20ರಂದು ಮಧ್ಯಾಹ್ನ 12.30ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.