ವಕ್ಫ್ ಆಸ್ತಿ ಕುರಿತು ಬಿಜೆಪಿ ರಾಜಕಾರಣಕ್ಕಾಗಿ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ವಕ್ಫ್ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಬಿಜೆಪಿಯವರು ಯಾವಾಗಲೂ ನೈಜ  ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಾರೆ ಎಂದರು.

ಪ್ರತಾಪ್ ಸಿಂಹ ಮಹಾನ್ ಕೋಮುವಾದಿ-
ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೊಬ್ಬ ಮಹಾನ್ ಕೋಮುವಾದಿ.

ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ ಎಂದರು. ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ. ಕೋಮುವಾದ  ಮಾಡುವುದೇ ಅವರ ಕಸುಬು.

ಸಮಾಜವನ್ನು  ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗು ಮತ ಪಡೆಯಲು ಪ್ರಯತ್ನ ಮಾಡುತ್ತಾರೆ ಎಂದರು. 

 

- Advertisement -  - Advertisement -  - Advertisement - 
Share This Article
error: Content is protected !!
";